ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election 2023 ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ರೋಣ-ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು (shrishailappa bidarur) ಅವರಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಶ್ರೀಶೈಲಪ್ಪ ಜೀವ ಉಳಿಸಲು ಕಾಂಗ್ರೆಸ್ ನಾಯಕಿ ಡಾ.ವನಿತಾ ಪ್ರಯತ್ನಿಸಿದ ಕೊನೆ ಕ್ಷಣದ ವಿಡಿಯೋ
ಇಂದು(ನವೆಂಬರ್ 25) ಬೆಂಗಳೂರಿನ ಹೊರವಲಯದ ರೆಸಾರ್ಟ್ನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಗೆ ಬಂದಿದ್ದ ಶ್ರೀಶೈಲಪ್ಪ ಅವರು ಸಭೆ ಆರಂಭದಲ್ಲೇ ವಾಂತಿಯಾಗಿ ಕುಸಿದುಬಿದ್ದಿದ್ದಾರೆ. ಕೂಡಲೇ ಕಾರ್ಯಕರ್ತರು ಶ್ರೀಶೈಲಪ್ಪ ಅವರನ್ನು ಕಾರಿನಲ್ಲಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನದಿಂದಾಗಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಂದೂಡಿದ್ದು, ನವೆಂಬರ್ 27ರಂದು ಜೂಮ್ ಮೂಲಕ ಸಭೆ ನಿಗದಿ ಮಾಡಿದ್ದಾರೆ.
ಶ್ರೀಶೈಲಪ್ಪ ಬಿದರೂರ ರಾಜಕೀಯ ಇತಿಹಾಸ
25-06-1962 ರಲ್ಲಿ ಗದಗ ಜಿಲ್ಲೆಯ ರೋಣ ತಾಲೂಕಿನ ಸೂಡಿ ಗ್ರಾಮದಲ್ಲಿ ಜನಿಸಿದ್ದ ಶ್ರೀಶೈಲಪ್ಪ ಬಿದರೂರು, ಸೂಡಿಯ ಮಂಡಲ ಪಂಚಾಯತಿಯಿಂದ ರಾಜಕೀಯ ಆರಂಭಿಸಿದ್ದ ಶ್ರೀಶೈಲಪ್ಪ ಬಿದರೂರು, (ಟಿಡಿಬಿ) ತಾಲೂಕು ಡೆವೆಲಪ್ಮೆಂಟ್ ಬೋರ್ಡ್ ಗೂ ಆಯ್ಕೆಯಾಗಿದ್ದರು. ಮೂಲತಃ ಜನತಾ ಪರಿವಾರದಿಂದ ಬಂದವರಾಗಿದ್ದರು. ಅವರೊಬ್ಬ ರಾಜಕೀಯ ಮುತ್ಸದ್ದಿಯಾಗಿದ್ದರು.
ಶ್ರೀಶೈಲಪ್ಪ ಬಿದರೂರು ರೋಣ ಹಾಗೂ ಗದಗ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಗದಗ ಜಿಲ್ಲೆಯ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಶ್ರೀಶೈಲಪ್ಪ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಅವರು ಕಳೆದ ವಿಧಾನಸಭಾ ಚುನಟವಣೆಯಲ್ಲಿ ಟಿಕೆಟ್ ಸಿಗದಿದ್ದಕ್ಕೆ 2019ರಲ್ಲಿ ಕಾಂಗ್ರೆಸ್ ಸೇರಿದ್ದರು.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 2:23 pm, Fri, 25 November 22