AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಜೀಮ್ಸ್ ಆಸ್ಪತ್ರೆಯಲ್ಲಿ ಅರಳಿದ ಪ್ರತಿಭೆಗಳು, ಪೇಶೆಂಟ್ ಜಸ್ಟ್ ಮೋಯಾ.. ಮೋಯಾ: ವಿದ್ಯಾರ್ಥಿಗಳ ರೀಲ್ಸ್​​ ವೈರಲ್​

ಗದಗನ ಜಿಮ್ಸ್​ ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿಗಳು ಚಲಚಿತ್ರದ ಹಾಡಿಗೆ ರೀಲ್ಸ್​​ ಮಾಡುವ ಮೂಲಕ ಪೇಚಿಗೆ ಸಿಲುಕಿಕೊಂಡಿದ್ದಾರೆ. ಹೌದು ವೈದ್ಯಕೀಯ ವಿದ್ಯಾರ್ಥಿಗಳು ನಟ ರವಿಚಂದ್ರ ಅವರ ಪ್ರೇಮಲೋಕ ಚಿತ್ರದ "ಹಲೋ ಮೈ ಲವ್ಲಿ ಲೇಡಿ ಹೂ ಆರ್​ ಯು" ಹಾಡಿಗೆ ಮತ್ತು ಹಿಂದಿ ಚಿತ್ರ ಹಾಡಿಗೆ ಇನ್ಸ್ಟಾಗ್ರಾಮ್​​ನಲ್ಲಿ ರೀಲ್ಸ್ ಮಾಡಿದ್ದಾರೆ.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Feb 09, 2024 | 12:56 PM

Share

ಗದಗ, ಫೆಬ್ರವರಿ 09: ಇತ್ತೀಚಿನ ದಿನಗಳಲ್ಲಿ ಇನ್ಸ್ಟಾಗ್ರಾಮ್​​ನಲ್ಲಿ (Instagram) ರೀಲ್ಸ್​​ (Reels) ಮಾಡುವ ಮೂಲಕ ಸಾಕಷ್ಟು ಜನರು ಪ್ರಸಿದ್ಧಿಯಾಗುತ್ತಿದ್ದಾರೆ. ಹಾಗೆ ಟ್ರೋಲ್​ ಆಗುತ್ತಿದ್ದಾರೆ. ಹಾಗೆಯೇ ರೀಲ್ಸ್​ ಮೂಲಕ ಅದೆಷ್ಟೋ ಪ್ರತಿಭೆಗಳು ಮುನ್ನಲೆಗೆ ಬಂದಿವೆ. ಇದೇರೀತಿ ರಾಜ್ಯದ ಪ್ರಸಿದ್ಧ ಗದಗನ (Gadag) ಜಿಮ್ಸ್​ ಆಸ್ಪತ್ರೆಯ (GIMS) ವೈದ್ಯಕೀಯ ವಿದ್ಯಾರ್ಥಿಗಳು (MBBS Students) ಚಲಚಿತ್ರದ ಹಾಡಿಗೆ ರೀಲ್ಸ್​​ ಮಾಡುವ ಮೂಲಕ ಪೇಚಿಗೆ ಸಿಲುಕಿಕೊಂಡಿದ್ದಾರೆ. ಹೌದು ವೈದ್ಯಕೀಯ ವಿದ್ಯಾರ್ಥಿಗಳು ನಟ ರವಿಚಂದ್ರ ಅವರ ಪ್ರೇಮಲೋಕ ಚಿತ್ರದ “ಹಲೋ ಮೈ ಲವ್ಲಿ ಲೇಡಿ ಹೂ ಆರ್​ ಯು” ಹಾಡಿಗೆ ಮತ್ತು ಹಿಂದಿ ಚಿತ್ರ ಹಾಡಿಗೆ ಇನ್ಸ್ಟಾಗ್ರಾಮ್​​ನಲ್ಲಿ ರೀಲ್ಸ್ ಮಾಡಿದ್ದಾರೆ. ಇದನ್ನು ಕಂಡ ಸಾರ್ವಜನಿಕರು ರೋಗಿಗಳ ಆರೈಕೆ ಮಾಡಬೇಕಾದವರು ಈ ರೀತಿ ಆಸ್ಪತ್ರೆಯಲ್ಲಿ ರೀಲ್ಸ್​ ಮಾಡುತ್ತಾ ಕುಳಿತರೆ ಹೇಗೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗದಗ ಜಿಮ್ಸ್​ ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿಗಳ ರೀಲ್ಸ್​

ಜಿಮ್ಸ್ ಆಸ್ಪತ್ರೆಯ ಕಾರಿಡಾರ್​ನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ರೀಲ್ಸ್ ಮಾಡಿರುವ ವಿಡಿಯೋ ಸಾಮಾಜಿ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ವಿದ್ಯಾರ್ಥಿಗಳು ಆಸ್ಪತ್ರೆ ಒಳಗೆ ಎಲ್ಲೆಂದರಲ್ಲಿ ರೀಲ್ಸ್ ಮಾಡಿದ್ದಾರೆ. ಈ ರೀಲ್ಸ್​ಗಳನ್ನು ಕಂಡ ನೆಟ್ಟಿಗರು ನಿಮ್ಮ ಹುಚ್ಚಾಟಕ್ಕೆ ಬೇರೆ ಜಾಗ ಸಿಗಲಿಲ್ವಾ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಅರಳಿದ ಪ್ರತಿಭೆಗಳು, ಪೆಶೆಂಟ್ ಜಸ್ಟ್ ಮೋಯಾ.. ಮೋಯಾ..ಅಂತ ಪೋಸ್ಟ್ ಹಾಕಿ ವಿಡಿಯೋ ವೈರಲ್ ಮಾಡಲಾಗಿದೆ.

ಇದನ್ನೂ ಓದಿ: ಚಿತ್ರದುರ್ಗ ಸರ್ಕಾರಿ ಆಪರೇಷನ್ ಥಿಯೇಟರಿನಲ್ಲೇ ಪ್ರಿವೆಡ್ಡಿಂಗ್ ವಿಡಿಯೋ ಶೂಟ್, ಪೇಚಿಗೆ ಸಿಲುಕಿದ ಜೋಡಿ!

ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಯಲ್ಲೂ ರೀಲ್ಸ್​

2023ರ ಅಗಸ್ಟ್​​ನಲ್ಲಿ​ ಹುಬ್ಬಳ್ಳಿಯ ಕಿಮ್ಸ್​​ನ ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿಗಳು ಆಸ್ಪತ್ರೆಯ ನರ್ಸ್​​ಗಳನ್ನು ಗುರಿಯಾಗಿಟ್ಟುಕೊಂಡು ಇನ್ಸ್ಟಾಗ್ರಾಮ್​​ನಲ್ಲಿ ರಿಲ್ಸ್ ಮಾಡಿದ್ದರು. ಇದಕ್ಕೆ ಕರ್ನಾಟಕ ರಾಜ್ಯ ನರ್ಸ್ ಅಸೋಸಿಯೇಷನ್ ಆಕ್ರೋಶ ವ್ಯಕ್ತಪಡಿಸಿತ್ತು. ಯಾವುದೇ ಅನುಮತಿ ಪಡೆಯದೆ ಕಿಮ್ಸ್ ಆಸ್ಪತ್ರೆ ಒಳಗಡೆ ನಟ ಪ್ರಜ್ವಲ್ ದೇವರಾಜ್ ಅಭಿನಯದ ಭದ್ರ ಚಿತ್ರದ ನಂಬೆಡ ನಂಬೆಡ ಹುಡುಗಿರನ್ನು ನಂಬೇಡ ಅನ್ನೋ ಹಾಡಿಗೆ ವಿದ್ಯಾರ್ಥಿಗಳು ರೀಲ್ಸ್​ ಮಾಡಿದ್ದರು. ಈ ಹಾಡಿನ ಮಧ್ಯೆ ಬರುವ ನಂಬೆಡ ನಂಬೆಡ ನರ್ಸ್​​ಗಳನ್ನು ನಂಬೇಡ ಸಾಲಿಗೆ ನೃತ್ಯ ಮಾಡಿದ್ದರು. ಈ ವಿಡಿಯೋವನ್ನು ಮಹೇಶ್ ರೆಡ್ಡಿ ಎಂಬುವ ವಿದ್ಯಾರ್ಥಿಯ ಅಕೌಂಟ್​ನಿಂದ ಪೋಸ್ಟ್​ ಮಾಡಲಾಗಿತ್ತು.

ಈ ವಿಡಿಯೋ ಫುಲ್ ವೈರಲ್ ಆದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ನರ್ಸ್ ಅಸೋಸಿಯೇಷನ್ ಮತ್ತು ಧಾರವಾಡ ಜಿಲ್ಲಾ ಶುಶ್ರೂಷಕರ ಸಂಘ ಕಿಮ್ಸ್ ನಿರ್ದೇಶಕರಿಗೆ ಪತ್ರ ಬರೆದಿತ್ತು. ರೀಲ್ಸ್​​ ಮಾಡಿದ್ದ 11 ಜನ ವಿದ್ಯಾರ್ಥಿಗಳನ್ನು ಒಂದು ವಾರದ ಮಟ್ಟಿಗೆ ಅಮಾನತು ಮಾಡಿ ಪ್ರಾಂಶುಪಾಲ ಡಾ.ಈಶ್ವರ ಹೊಸಮನಿ ಆದೇಶ ಹೊರಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು