ಸರ್ಕಾರದ ಹೊಸ ಮಾರ್ಗಸೂಚಿಗೆ ತರಕಾರಿ ಮಾರಾಟ ಮಹಿಳೆಯರ ಕಣ್ಣೀರು
ಸರ್ಕಾರದ ಹೊಸ ಮಾರ್ಗಸೂಚಿ ಅನ್ವಯ ಸಂತೆ ಮಾರುಕಟ್ಟೆಗಳು ಸಂಪೂರ್ಣ ಬಂದ್ ಆಗಿವೆ. ಜೊತೆಗೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ತಳ್ಳುವ ಗಾಡಿಯಲ್ಲಿ ಹಣ್ಣು, ತರಕಾರಿ ಮಾರಾಟ ಮಾಡಲು ಸರ್ಕಾರ ಅವಕಾಶ ನೀಡಿದೆ. ಇದರಿಂದ ಬೇಸರಗೊಂಡ ತರಕಾರಿ ಮಾರಾಟ ಮಾಡುವ ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗದಗ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕನುಗುಣವಾಗಿ ಸಾವಿನ ಸಂಖ್ಯೆಯು ಗಣನೀಯವಾಗಿ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ 14 ದಿನಗಳ ಕಾಲ ಲಾಕ್ಡೌನ್ ಜಾರಿಗೊಳಿಸಿದೆ. ಲಾಕ್ಡೌನ್ ನಡುವೆ ನಿನ್ನೆಯ ವರೆಗೆ ಬೆಳಿಗ್ಗೆ 6 ಗಂಟೆಯಿಂದ ಬೆಳಿಗ್ಗೆ 10 ಗಂಟೆಯ ವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಿತ್ತು. ಈ ವೇಳೆ ಜನರು ಕೊರೊನಾ ಬಗ್ಗೆ ಕಿಂಚಿತ್ತು ಭಯ ಪಡದೇ, ಮಾಸ್ಕ್ ಧರಿಸದೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಅಗತ್ಯ ವಸ್ತುಗಳನ್ನು ಖರೀದಿಸುತ್ತಿದ್ದರು. ಹೀಗಾಗಿ ಸರ್ಕಾರ ನಿನ್ನೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದ್ದು, ಸರ್ಕಾರದ ಅಧಿಸೂಚನೆಗೆ ಗದಗ ಜಿಲ್ಲೆಯ ಮಹಿಳೆಯರು ಕಣ್ಣೀರು ಹಾಕಿದ್ದಾರೆ.
ಸರ್ಕಾರದ ಹೊಸ ಮಾರ್ಗಸೂಚಿ ಅನ್ವಯ ಸಂತೆ ಮಾರುಕಟ್ಟೆಗಳು ಸಂಪೂರ್ಣ ಬಂದ್ ಆಗಿವೆ. ಜೊತೆಗೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ತಳ್ಳುವ ಗಾಡಿಯಲ್ಲಿ ಹಣ್ಣು, ತರಕಾರಿ ಮಾರಾಟ ಮಾಡಲು ಸರ್ಕಾರ ಅವಕಾಶ ನೀಡಿದೆ. ಇದರಿಂದ ಬೇಸರಗೊಂಡ ತರಕಾರಿ ಮಾರಾಟ ಮಾಡುವ ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗದಗ ನಗರದ ತರಕಾರಿ ಮಾರ್ಕೆಟ್ನಲ್ಲಿ ಕಣ್ಣೀರು ಹಾಕಿ ಸರ್ಕಾರದ ವಿರುದ್ಧ ಕಿಡಿಕಾರಿದ ಮಹಿಳೆಯರು ಸರ್ಕಾರ ನಮ್ಮ ನೆರವಿಗೆ ಬರದೇ ಇದ್ದಲ್ಲಿ ಉಪಯೋಗವೇನು? ದುಡಿದು ತಿನ್ನುವವರ ಮೇಲೆ ಸರ್ಕಾರ ಅಧಿಕಾರಿಗಳ ಮೂಲಕ ದೌರ್ಜನ್ಯ, ದಬ್ಬಾಳಿಕೆ ಮಾಡುತ್ತಿದೆ. ಕಿರಾಣಿ ಅಂಗಡಿಗಳಿಗೆ ಒಂದು ನ್ಯಾಯ ಬೀದಿ ಬದಿಯಲ್ಲಿ ವ್ಯಾಪಾರಸ್ಥರಿಗೆ ಒಂದು ನ್ಯಾಯ ಏಕೆ? ಅಧಿಕಾರದಲ್ಲಿ ಇರೋರು ಜನರಿಗೆ ತೊಂದರೆ ಕೊಡಬಾರದು. ಇದು ಬಹಳ ದಿನ ನಡೆಯಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ
ಮೋದಿ, ಶಾ ವಿರುದ್ಧ ಅವಹೇಳನಕಾರಿ ಫೋಸ್ಟ್.. ಫೇಸ್ಬುಕ್ ಬಳಕೆದಾರನ ವಿರುದ್ಧ ಎಫ್ಐಆರ್
(Gadag vegetables sell women has outraged against Karnataka Government new corona guidelines)