Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ ಠಾಣೆಗೆ ಬೆಂಕಿ ಹಚ್ಚಿದ್ದವರಿಗೆ ಕಾದಿದೆ ಶಿಕ್ಷೆ: 23 ಜನರ ವಿರುದ್ಧ ಆರೋಪ ಸಾಬೀತು

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ 2017ರಲ್ಲಿ ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಜನರ ವಿರುದ್ಧ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ. ಈ ಘಟನೆಯಲ್ಲಿ 112 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ 112 ಜನರಲ್ಲಿ 8 ಜನರು ಮೃತಪಟ್ಟಿದ್ದು, ಓರ್ವ ಬಾಲಪರಾಧಿ ಇದ್ದಾನೆ. ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ಇನ್ನೂ ನಿರ್ಧರಿಸಬೇಕಿದೆ.

ಪೊಲೀಸ್​ ಠಾಣೆಗೆ ಬೆಂಕಿ ಹಚ್ಚಿದ್ದವರಿಗೆ ಕಾದಿದೆ ಶಿಕ್ಷೆ: 23 ಜನರ ವಿರುದ್ಧ ಆರೋಪ ಸಾಬೀತು
ಲಕ್ಷ್ಮೇಶ್ವರ ಪೊಲೀಸ್​ ಠಾಣೆ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ವಿವೇಕ ಬಿರಾದಾರ

Updated on: Mar 11, 2025 | 1:56 PM

ಗದಗ, ಮಾರ್ಚ್​ 11: ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ (Laxmeshwar Police Station) ಬೆಂಕಿ ಹಚ್ಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  23 ಜನ ಆರೋಪಿಗಳು ದೋಷಿ ಎಂದು ಗದಗ (Gadag) ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ರವಿ ಹತ್ತಾಳ, ಮಲ್ಲಪ್ಪ ಹತ್ತಾಳ, ಬಸವರಾಜ್ ಕೊರವನ್ನವರ್, ಮಹಾಂತೇಶ ಹೊಳಲಾಪುರ, ರಾಜು ಹೊಳಲಾಪುರ ಮತ್ತು ಬೀರಪ್ಪ ಬಳ್ಳಾರಿ ಸೇರಿದಂತೆ 23 ಜನರು ದೋಷಿ ಎಂದು ತೀರ್ಪು ನೀಡಿದ್ದು, ಅಪರಾಧಿಗಳ ಶಿಕ್ಷೆ ಪ್ರಮಾಣವನ್ನು ನ್ಯಾಯಾಲಯ ಕಾಯ್ದಿರಿಸಿದೆ.

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಪ್ರಕರಣ

8 ವರ್ಷಗಳ ಅಂದರೆ 2017ರಲ್ಲಿ ಅಕ್ರಮ ಮರಳು ಸಾಗಿಸುವ ವಾಹನ ತಡೆದು ಚಾಲಕನನ್ನು ಪೋಲಿಸರು ಥಳಿಸಿದ್ದರೆಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಬಟ್ಟೂರು ಗ್ರಾಮದ ಚಾಲಕ ಶಿವಪ್ಪ ಡೋಣಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದನು. ಸುದ್ದಿ ತಿಳಿಯುತ್ತಿದ್ದಂತೆ ಆತನ ಕುಟುಂಬಸ್ಥರು ಆಸ್ಪತ್ರೆಯಿಂದ ಶವವನ್ನು ತಂದು ಪೊಲೀಸ್ ಠಾಣೆಯ ಮುಂದೆ ಇಟ್ಟು ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆಯ ಕಾವು ಹೆಚ್ಚಾಗಿ, ರೊಚ್ಚಿಗೆದ್ದ ಜನರು ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ್ದರು. ಗಲಾಟೆ ವೇಳೆ ಪೊಲೀಸ್ ಠಾಣೆಯಲ್ಲಿದ್ದ ಪೀಠೋಪಕರಗಳು, ಪೊಲೀಸ್ ಜೀಪ್, ಹತ್ತಾರು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿ ಅಕ್ರೋಶ ವ್ಯಕ್ತಪಡಿಸಿದ್ದರು. ಪ್ರಕರಣ ನಡೆದ ನಂತರ ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಸ್ಥಳಕ್ಕೆ ಭೇಟಿ ನೀಡಿದ್ದರು.

ಇದನ್ನೂ ಓದಿ
Image
ನಿಗೂಢ ಕಾಯಿಲೆಗೆ 20ಕ್ಕೂ ಹೆಚ್ಚು ಕುರಿಗಳು ಸಾವು: ಅಂಥ್ರಾಕ್ಸ್ ಸೊಂಕು ಶಂಕೆ
Image
ಬರ್ತ್​​ಡೇ ದಿನವೇ ಸೇಹಿತರ ದುರಂತ ಅಂತ್ಯ: ಈಜಲು ತೆರಳಿದ್ದ ಮೂವರು ನೀರುಪಾಲು
Image
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದು 19ನೇ ಬಜೆಟ್ ಮಂಡಿಸಲಿದ್ದಾರೆ: ಯತೀಂದ್ರ
Image
ಕೃಷಿಕ, ಮಹಿಳೆ, ಯುವಕರನ್ನು ಸಿದ್ದರಾಮಯ್ಯ ಕೈ ಬಿಟ್ಟಿದ್ದಾರೆ: ವಿಜಯೇಂದ್ರ

ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ 112 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಈ 112 ಜನರಲ್ಲಿ 8 ಜನರು ಮೃತಪಟ್ಟಿದ್ದು, ಓರ್ವ ಬಾಲಪರಾಧಿ ಇದ್ದಾನೆ. ಉಳಿದ 103 ಜನರ ಮೇಲೆ ತನಿಖೆ ನಡೆಸಲಾಗಿದ್ದು, ಅದರಲ್ಲಿ 23 ಜನರನ್ನು ನ್ಯಾ. ರಾಜೇಶ್ವರ ಶೆಟ್ಟಿ ಅವರಿಂದ ಏಕ ಸದಸ್ಯ ಪೀಠ ದೋಷಿ ಎಂದು ತೀರ್ಪು ನೀಡಿದೆ. ಶಿಕ್ಷೆಗೊಳಗಾದ 23 ಜನ ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ಮೆಚ್ಚುಗೆ ಪಡೆದಿದ್ದ ಕಲಾಪೋಷಕ ಕಾವೆಂಶ್ರೀ ನಿಧನ

ಘಟನೆ ಕುರಿತಾಗಿ ಸರ್ಕಾರಿ ಅಭಿಯೋಜಕ ಮಲ್ಲಿಕಾರ್ಜುನ ದೊಡ್ಡಗೌಡರ ಮಾತನಡಿ, ನೂರಾರು ಜನ ಪೊಲೀಸ್ ಠಾಣೆಗೆ ನುಗ್ಗಿ ಬೆಂಕಿ ಹಚ್ಚಿದರು. ಪೊಲೀಸ್ ಠಾಣೆಯಲ್ಲಿದ್ದ ಮೂವರು ಪೊಲೀಸರ ಮೇಲೆ ಪೆಟ್ರೋಲ್, ಡಿಸೇಲ್ ಉಗ್ಗಿ ಬೆಂಕಿ ಹಚ್ಚಲು ಯತ್ನ ನಡೆದಿತ್ತು. ಆದರೆ, ಮೂವರೂ ಪೊಲೀಸರು ತಪ್ಪಿಸಿಕೊಂಡು ಓಡಿ ಹೋದರು. ಅಲ್ಲದೇ, ಪೊಲೀಸರಿಂದ ಬಂದೂಕು ಕಸಿದುಕೊಂಡು ಚುಚ್ಚಲು ಯತ್ನ ನಡೆದಿತ್ತು ಎಂದು ಅಂದು ನಡೆದ ಭಯಾನಕ ಘಟನೆಯನ್ನು ಬಿಚ್ಚಿಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್