AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಲಾಡ್ಜ್​ನಲ್ಲಿ ಇಂಜಿನಿಯರ್ ಆತ್ಮಹತ್ಯೆ, ಸಾವಿನ ಸುತ್ತ ಅನುಮಾನಗಳ ಹುತ್ತ

ಕರ್ನಾಟಕದಲ್ಲಿ ದಿನೇ ದಿನೇ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಲೇ ಇವೆ. ಅದರಲ್ಲೂ ಸರ್ಕಾರಿ ಅಧಿಕಾರಿಗಳು ಒಳಗೊಂಡಿದ್ದಾರೆ. ಅದರಂತೆ ಗದಗನಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಾಡ್ಜ್​ನಲ್ಲೇ ನೇಣುಬಿಗಿದುಕೊಂಡು ಸಾವಿಗೆ ಶರಣಾಗಿದ್ದು, ಇದೊಂದು ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹೀಗಾಗಿ ಈ ಇಂಜಿನಿಯರ್​ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ.

ಗದಗ: ಲಾಡ್ಜ್​ನಲ್ಲಿ ಇಂಜಿನಿಯರ್ ಆತ್ಮಹತ್ಯೆ, ಸಾವಿನ ಸುತ್ತ ಅನುಮಾನಗಳ ಹುತ್ತ
ಶಂಕರಗೌಡ ಪಾಟೀಲ್
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Jan 03, 2025 | 3:07 PM

Share

ಗದಗ, (ಜನವರಿ 03): ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗನ ಪಲ್ಲವಿ ಲಾಡ್ಜ್​ನಲ್ಲಿ ನಡೆದಿದೆ. ಗದಗ ನಗರದ ನಿವಾಸಿಯಾಗಿರುವ ಶಂಕರಗೌಡ ಪಾಟೀಲ್ (54) ಆತ್ಮಹತ್ಯೆ ಮಾಡಿಕೊಂಡಿರುವ ಇಂಜಿನಿಯರ್. ಇಂದು (ಡಿಸೆಂ 03) ಬೆಳಗ್ಗೆ 7.30ಕ್ಕೆ ಮನೆಯಿಂದ ಹೊರಬಂದಿದ್ದ ಶಂಕರಗೌಡ ಪಾಟೀಲ್ ನಗರದ ಪಲ್ಲವಿ ಲಾಡ್ಜ್​ನ ರೂಮ್ ನಂಬರ್ 513ರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಂಕರಗೌಡ ಪಾಟೀಲ್ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದು, ಈ ಸಾವು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಅನುಮಾನ ವ್ಯಕ್ತಪಡಿಸಿದ ಸಹೋದರ

ಇನ್ನು ಈ ಸಂಬಂಧ ಮೃತ ಸಹೋದರ ಕೃಷ್ಣಗೌಡ ಪ್ರತಿಕ್ರಿಯಿಸಿದ್ದು, ನೇಣು ಹಾಕಿ‌ ಕೊಲೆ ಮಾಡಿದ್ದಾರೆ. ಸಾಲ‌ ಇಲ್ಲ. ಸಾಕಷ್ಟು ಆಸ್ತಿ ಇದೆ. ಸಾಲಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವನಲ್ಲ. ಸಾಲಕ್ಕೆ ಜಾಮೀನು ಆಗಿದ್ದ ಆ ವಿಷಯಕ್ಕಾದ್ರೂ ಆಗಿರಬಹುದು. ಜಿಲ್ಲಾಧಿಕಾರಿಗಳ ಅಡಿಯಲ್ಲಿ ಕೆಲಸ‌ ಮಾಡುತ್ತಿದ್ದ. ಅಲ್ಲಿ ಪ್ರಮೋಶನಕ್ಕೆನಾದ್ರೂ ವ್ಯತ್ಯಾಸ ಆಗಿದೆಯೋ ಗೊತ್ತಿಲ್ಲ. ಈ‌ ಮೂರು ವಿಷಯಕ್ಕೆ ಸಾವು ಅಂತ ಅನುಮಾನ ಇದೆ ಎಂದಿದ್ದಾರೆ.

ಇದನ್ನೂ ಓದಿ: ಹಾಸನ: ಪತ್ನಿ ಕಿರುಕುಳ ಆರೋಪ, ಸಾಫ್ಟ್‌ವೇರ್ ಇಂಜಿನಿಯರ್ ಪ್ರಮೋದ್ ಆತ್ಮಹತ್ಯೆ

ಸಾಲಕ್ಕೆ ಹೆದರುವ ಮನುಷ್ಯ ಅವನಲ್ಲ. ನೇಣು ಹಾಕಿಕೊಂಡ ಹಗ್ಗ ಹೊಸದು ಇದೆ. ಹೀಗಾಗಿ ಯಾರಾದರೈ‌ ಊರಲು ಹಾಕಿದ್ದಾರೆ ಎಂದು ಆರೋಪಿಸಿರುವ ಕೃಷ್ಣಗೌಡ, ನಿರ್ಮಿತಿ ಕೇಂದ್ರದಲ್ಲಿ ಕೆಲಸ‌ ಮಾಡುತ್ತಿದ್ದ. ನನಗೆ ಆತ್ಮಹತ್ಯೆ ಮಾಡಿಕೊಂಡ ರೂಂಗೆ ಪೊಲೀಸರು ಬಿಡಲಿಲ್ಲ. ಹೀಗಾಗಿ ಸಾವಿನ ಬಗ್ಗೆ ಸಾಕಷ್ಟು ಅನುಮಾನ ಇದೆ ಎಂದು ತಿಳಿಸಿದ್ದಾರೆ.

ಬೀದರ್​ನಲ್ಲಿ ಯುವ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ಹೆಸರು ಬರೆದಿಟ್ಟು ಗುತ್ತಿಗೆದಾರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ವಿರೋಧ ಪಕ್ಷಗಳು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವಂತೆ ಆಗ್ರಹಿಸುತ್ತಿವೆ. ಈ ಬಗ್ಗೆ ರಾಜಕೀಯವಾಗಿ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ.

ಇದೆಲ್ಲದರ ಮಧ್ಯ ಇದೀಗ ನಿರ್ಮಿತಿ ಕೇಂದ್ರದ ಇಂಜಿಯನರ್ ಆತ್ಮಹತ್ಯೆ ಪ್ರಕರಣ ಬೆಳಗೆ ಬಂದಿದ್ದು, ಈ ಪ್ರಕರಣ ಮುಂದೆ ಸ್ವರೂಪ ಪಡೆದುಕೊಳ್ಳಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

Published On - 2:58 pm, Fri, 3 January 25

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?