Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag News: ಸಾಲಗಾರರ ಕಾಟಕ್ಕೆ ಬೇಸತ್ತು ಹೆಂಡತಿ ಮನೆ ಸೇರಿದ್ದ ವ್ಯಕ್ತಿ ಅನುಮಾನಾಸ್ಪದ ರೀತಿಯಲ್ಲಿ ಶವ ಪತ್ತೆ

ಆತ ಮೂರು ಮಕ್ಕಳ ತಂದೆ, ಕಷ್ಟ ಪಟ್ಟು ಕೃಷಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಇದರ ಜೊತೆಗೆ ಸಿಕ್ಕಾಪಟ್ಟೆ ಸಾಲ ಕೂಡ ಮಾಡಿಕೊಂಡಿದ್ದ. ಸಾಲಗಾರರ‌ ಕಾಟದಿಂದ ಬೇಸತ್ತು ತನ್ನ ಊರು ಬಿಟ್ಟು ಹೆಂಡತಿ ಮನೆ ಸೇರಿಕೊಂಡಿದ್ದ ಆತನಿಗೆ, ಸಾಲಗಾರರು ಅಲ್ಲಿಯೂ ಬಂದು ಸಾಲ ನೀಡುವಂತೆ ಕಿರುಕುಳ ನೀಡುತ್ತಿದ್ದರು. ಕೊನೆಗೆ ಜಮೀನು ಮಾರಿ ಸಾಲವನ್ನು ತಿರಿಸಲು ಹೋದವನು, ಹೆಣವಾಗಿ ಪತ್ತೆಯಾಗಿದ್ದಾನೆ.

Gadag News: ಸಾಲಗಾರರ ಕಾಟಕ್ಕೆ ಬೇಸತ್ತು ಹೆಂಡತಿ ಮನೆ ಸೇರಿದ್ದ ವ್ಯಕ್ತಿ  ಅನುಮಾನಾಸ್ಪದ ರೀತಿಯಲ್ಲಿ ಶವ ಪತ್ತೆ
ಮೃತ ಸಂಗಪ್ಪ ಕುಟುಂಬದ ಗೋಳಾಟ
Follow us
ಕಿರಣ್ ಹನುಮಂತ್​ ಮಾದಾರ್
|

Updated on: May 25, 2023 | 8:26 AM

ಗದಗ: ಪತಿ ಕಳೆದುಕೊಂಡು ಪತ್ನಿ ಕಣ್ಣೀರು. ತಂದೆ ತಮ್ಮನ್ನ ಬಿಟ್ಟು ಹೋಗಿದ್ದಾನೆ ಅನ್ನೋದು ಗೋತ್ತಾಗದೇ ಕಂಗಾಲಾಗಿ ಕುಳಿತ ಮಕ್ಕಳು. ಸಂಬಂಧಿಕರ ಗೋಳಾಟ. ಮತ್ತೊಂದಡೆ ಪೊಲೀಸರಿಂದ ಸ್ಥಳ ಪರಿಶೀಲನೆ. ಈ ಎಲ್ಲ ದೃಶ್ಯಗಳು ಕಂಡಿದ್ದು, ಗದಗ(Gadag) ತಾಲೂಕಿನ ಹಾತಲಗೇರಿ ಗ್ರಾಮದಲ್ಲಿ. ಹೌದು ಹಾತಲಕೇರಿ ಗ್ರಾಮದ ಬಳಿಯ ಜಮೀನಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವ ಪತ್ತೆಯಾಗಿತ್ತು. ನೋಡಿದ್ರೆ, ಬಿಸಿಲಿನ ತಾಪಕ್ಕೆ ಶವ ಬೆಂದು ಹೋದ ಸ್ಥಿತಿಯಲ್ಲಿದೆ. ಕುಟುಂಬಸ್ಥರು ಹಾಗೂ ಪೊಲೀಸರು ಶವದ ಗುರುತು ಪತ್ತೆ ಮಾಡಲು ಪರದಾಟ ನಡೆಸಿದ್ರು. ಅಷ್ಟೊಂದು ಬಿಸಿಲಿನ ತಾಪಕ್ಕೆ ಬೆಂದು ಹೋಗಿತ್ತು. ಈ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ವ್ಯಕ್ತಿಯ ಹೆಸರು ಸಂಗಪ್ಪ(38) ಕಮಡೊಳ್ಳಿ, ಮೂರು ದಿನಗಳ ಹಿಂದೆಯೇ ಮನೆಯಿಂದ ಹೋಗಿದ್ದ ಇತ ಶವವಾಗಿ ಪತ್ತೆಯಾಗಿದ್ದಾನೆ.

ಹೀಗಾಗಿ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದೆ. ಕೊಲೆಯೋ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಂಗಪ್ಪ ಸಾವನ್ನಪ್ಪಿರುವ ಸ್ಥಳದಲ್ಲಿ ಕ್ರಿಮಿನಾಶಕ ಬಾಟಲಿ ಪತ್ತೆಯಾಗಿದೆ. ಹಾಗೇ ಮದ್ಯ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವ ಶಂಕೆ ಕೂಡ ವ್ಯಕ್ತವಾಗಿದೆ. ಆದ್ರೆ, ಶವ ಬೆತ್ತಲೆಯಾಗಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಕ್ಕೆ ಎಡೆಮಾಡಿದೆ. ಆತ್ಮಹತ್ಯೆಯೋ, ಕೊಲೆಯೋ ಅನ್ನೋದು ಗೋಂದಲವಾಗಿದೆ. ಇನ್ನೂ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಸಂಗಪ್ಪ ಮೂಲತಃ ಹಾವೇರಿ ಜಿಲ್ಲೆಯ ಕಿತ್ತೂರು ಗ್ರಾಮದ ನಿವಾಸಿ. ಗದಗ ತಾಲೂಕಿನ ಹಾತಲಕೇರಿ ಗ್ರಾಮದ ರೇಖಾ ಎನ್ನುವ ಮಹಿಳೆ ಜೊತೆಗೆ ವಿವಾಹವಾಗಿದ್ದಾನೆ. ಎರಡು ಗಂಡು ಮಕ್ಕಳು, ಒಬ್ಬಳು ಹೆಣ್ಣು ಮಗಳಿದ್ದಾಳೆ. ಇನ್ನು ಇತ ಹಾವೇರಿ ಜಿಲ್ಲೆಯ ಕಿತ್ತೂರು ಗ್ರಾಮದಲ್ಲಿ ಎರಡು ಎಕರೆ ಜಮೀನಿನಲ್ಲಿ ಕೃಷಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ. ಆದ್ರೆ, ಲಕ್ಷಾಂತರ ‌ರೂಪಾಯಿ ಸಾಲವನ್ನು ಮಾಡಿಕೊಂಡಿದ್ದ, ಸಾಲಗಾರರ ಕಿರುಕುಳಕ್ಕೆ ಬೇಸತ್ತು, ಗದಗ ತಾಲೂಕಿನ ಹಾತಲಕೇರಿ ಗ್ರಾಮದ ಪತ್ನಿ ಮನೆಯಲ್ಲಿ ಕಳೆದ ಒಂದು ವರ್ಷದಿಂದ ವಾಸ ಮಾಡ್ತಾಯಿದ್ದ.

ಇದನ್ನೂ ಓದಿ:Belagavi News: ಮನೆ ಮಹಡಿ ಮೇಲೆ ಆಟವಾಡುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಸಾವು; ಮುಗ್ಧ ಬಾಲಕಿ ಸಾವಿಗೆ ಯಾರು ಹೊಣೆ?

ಆದರೆ ಹಾತಲಗೇರಿ ಗ್ರಾಮಕ್ಕೂ ಬಂದು ಸಾಲಗಾರರು ಕಿರುಕುಳು ನೀಡಿಲು ಆರಂಭ ಮಾಡಿದ್ರಂತೆ, ಹೀಗಾಗಿ ಕಳೆದ ಮೂರು ದಿನಗಳ ಹಿಂದೆ ಕಿತ್ತೂರು ಗ್ರಾಮದಲ್ಲಿ ಜಮೀನು ಮಾರಾಟ ಮಾಡಿ, ಸಾಲವನ್ನು ತಿರುಸುವುದಾಗಿ ಹೇಳಿ, ಮನೆಯಿಂದ ಹೊರಗಡೆ ಹೋಗಿದ್ದನಂತೆ. ಇದೀಗ ಶವವಾಗಿ ಪತ್ತೆಯಾಗಿದ್ದಾ‌ನೆ ಎಂದು ಪತ್ನಿ ಗೋಳಾಡುತ್ತಿದ್ದಾಳೆ. ಜೊತೆಗೆ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಸಾವನ್ನಪ್ಪಿದ್ದಾನೆ ಎಂದು ಪತ್ನಿ ಆರೋಪಿಸಿದ್ದಾಳೆ. ಒಟ್ಟಿನಲ್ಲಿ ಸಂಗಪ್ಪ ಸಾವಿನ ಹಿಂದೆ ಹತ್ತಾರು ಅನುಮಾನದ ಹುತ್ತ ಬೆಳೆದಿದೆ. ಸಾಲಗಾರರು ಕೊಲೆ ಮಾಡಿದ್ರಾ, ಅಥವಾ ಆತನೇ ಆತ್ಮಹತ್ಯೆ ಮಾಡಿಕೊಂಡನಾ? ಎನ್ನುವ ಪ್ರಶ್ನೆ ಕಾಡುತ್ತಿದೆ. ಇದೆಲ್ಲದಕ್ಕೂ ಉತ್ತರ ಪೊಲೀಸ ತನಿಖೆಯಿಂದಲೇ ನಿಖರವಾದ ಕಾರಣ ಗೊತ್ತಾಗಬೇಕಾಗಿದೆ.

ವರದಿ: ಸಂಜೀವ ಪಾಂಡ್ರೆ, ಟಿವಿ9 ಗದಗ

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ