ಚಲಿಸುತ್ತಿದ್ದ ಟ್ರ್ಯಾಕ್ಟರ್ ಹತ್ತುವ ವೇಳೆ ಕೆಳಗೆ ಬಿದ್ದು ಯುವಕ ಸ್ಥಳದಲ್ಲೇ ಸಾವು
ಮರಳು ತುಂಬಿದ ಐದು ಟೇಲರ್ ಜಗ್ಗಿಸುವ ಸ್ಪರ್ಧೆಯಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್ (Tractor) ಹತ್ತುವ ವೇಳೆ ಕೆಳಗೆ ಬಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ (Gadag) ತಾಲೂಕಿನ ಲಿಂಗದಾಳ ಗ್ರಾಮದಲ್ಲಿ ನಡೆದಿದೆ.
ಗದಗ, ಸೆ.30: ಮರಳು ತುಂಬಿದ ಐದು ಟೇಲರ್ ಜಗ್ಗಿಸುವ ಸ್ಪರ್ಧೆಯಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್ (Tractor) ಹತ್ತುವ ವೇಳೆ ಕೆಳಗೆ ಬಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗದಗ (Gadag) ತಾಲೂಕಿನ ಲಿಂಗದಾಳ ಗ್ರಾಮದಲ್ಲಿ ನಡೆದಿದೆ. ಬೆಳವಣಕಿ ಗ್ರಾಮದ ಪ್ರದೀಪ (21) ಮೃತ ದುರ್ದೈವಿ. ಗಣೇಶನ ಹಬ್ಬದ ಪ್ರಯುಕ್ತ ಟ್ರ್ಯಾಕರ್ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಈ ವೇಳೆ ಮರಳು ತುಂಬಿದ ಟ್ರ್ಯಾಕ್ಟರ್ ಓಡಿಸುವುದನ್ನು ವಿಡಿಯೋ ಮಾಡುತ್ತಾ ಟ್ರ್ಯಾಕ್ಟರ್ ಹತ್ತಲು ಹೋಗಿ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ. ಈ ಘಟನೆ ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗಾಂಜಾ ಬೆಳೆದು ಮಾರಾಟ ಮಾಡಲು ಮುಂದಾಗಿದ್ದ ಆರೋಪಿಗಳ ಬಂಧನ
ಬಾಗಲಕೋಟೆ: ಸಿಇಎನ್ ಪೊಲೀಸರು ಕಾರ್ಯಾಚರಣೆ ನಡೆಸಿ, ಗಾಂಜಾ ಬೆಳೆದು ಮಾರಾಟ ಮಾಡಲು ಮುಂದಾಗಿದ್ದ ಆರೋಪಿಗಳನ್ನು ಬಧಿಸಿದ ಘಟನೆ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಗ್ರಾಮದಲ್ಲಿ ನಡೆದಿದೆ. ಮನ್ನಿಕೇರಿ ಗ್ರಾಮದ ಮಂಜುನಾಥ ಅಕ್ಕೋಜಿ ಎಂಬುವರ ಹೊಲದಲ್ಲಿ ಆಕ್ರಮವಾಗಿ ಗಾಂಜಾಗಿಡಗಳನ್ನು ಬೆಳೆಯಲಾಗಿತ್ತು. ಇದೀಗ ಮಂಜುನಾಥ ಜೊತೆ ಇನ್ನಿಬ್ಬರನ್ನು ಬಂಧಿಸಲಾಗಿದ್ದು, 3 ಲಕ್ಷಕ್ಕೂ ಅಧಿಕ ಮೌಲ್ಯದ 36 ಕೆಜಿ ಹಸಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಲಾಗಿದ್ದು, ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ಜೈಲಿಗೆ ಹೋಗಿ ಬಂದರೂ ಬುದ್ಧಿ ಕಲಿಯದ ಆಸಾಮಿ: ನಟೋರಿಯಸ್ ಗಾಂಜಾ ಪೆಡ್ಲರ್ ಬಂಧನ
ಹಿರೇಕೆರೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾ ಬಲೆಗೆ
ಹಾವೇರಿ: ಜಿಲ್ಲೆಯ ಹಿರೇಕೆರೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಂಪಾಪತಿ ನಾಯ್ಕ್ ಬಲೆಗೆ ಬಿದ್ದ ಅಧಿಕಾರಿ. ಇ ಸ್ವತ್ತು ಮಾಡಿಕೊಡಲು ಇತ 20 ಸಾವಿರ ಹಣಕ್ಕೆ ಲಂಚಕ್ಕೆ ಭೇಡಿಕೆ ಇಟ್ಟಿದ್ದ. 2 ದಿನಗಳ ಹಿಂದೆ 10 ಸಾವಿರ ಲಂಚ ಪಡೆದಿದ್ದ ಪಂಪಾಪತಿ ನಾಯ್ಕ್, ಮತ್ತೆ 10 ಸಾವಿರ ಲಂಚ ಪಡೆಯುವಾಗ ಲೋಕಾಗೆ ಸಿಕ್ಕಿಬಿದ್ದಿದ್ದಾನೆ. ಈ ಕುರಿತು ಹಾವೇರಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಚಲಿಸುತ್ತಿದ್ದ ಎಲೆಕ್ಟ್ರಿಕ್ ಕಾರಿನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ
ಬೆಂಗಳೂರು: ಜೆ.ಪಿ.ನಗರದಲ್ಲಿ ಚಲಿಸುತ್ತಿದ್ದ ಎಲೆಕ್ಟ್ರಿಕ್ ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಡೆದಿದೆ. ಇನ್ನು ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರು ಚಾಲಕ ರಸ್ತೆ ಬದಿಗೆ ನಿಲ್ಲಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನೋಡನೋಡುತ್ತಿದ್ದಂತೆ ಕ್ಷಣಾರ್ಧದಲ್ಲಿ ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಈ ಕುರಿತು ಜೆ.ಪಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ