ರೈತನ ಬಳಿ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ
ಗದಗ: ಜಮೀನಿನ ಪಹಣೆ ಬದಲಾವಣೆಗೆ ಸಂಬಂಧಿಸಿ ರೈತನ ಬಳಿ ಲಂಚಕ್ಕೆ ಬೇಡಿಕೆಯಿಟ್ಟದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಹಣದ ಸಮೇತ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ರೈತ ರಾಮಪ್ಪ ಅಣ್ಣಿಗೇರಿ ಎಂಬುವರ ಬಳಿ ಜಮೀನಿನ ಪಹಣೆ ಬದಲಾವಣೆಗೆ ಅಧಿಕಾರಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಮನೆಯಲ್ಲಿ 14 ಸಾವಿರ ರೂಪಾಯಿ ಹಣ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ವಾಸುದೇವ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಹಣ ಸ್ವೀಕರಿಸುತ್ತಿದ್ದ ಪುಟಗಾಂವ್ ಬಡ್ನಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಫಿರೋಜ್ […]
ಗದಗ: ಜಮೀನಿನ ಪಹಣೆ ಬದಲಾವಣೆಗೆ ಸಂಬಂಧಿಸಿ ರೈತನ ಬಳಿ ಲಂಚಕ್ಕೆ ಬೇಡಿಕೆಯಿಟ್ಟದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಹಣದ ಸಮೇತ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.
ರೈತ ರಾಮಪ್ಪ ಅಣ್ಣಿಗೇರಿ ಎಂಬುವರ ಬಳಿ ಜಮೀನಿನ ಪಹಣೆ ಬದಲಾವಣೆಗೆ ಅಧಿಕಾರಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದರು. ಮನೆಯಲ್ಲಿ 14 ಸಾವಿರ ರೂಪಾಯಿ ಹಣ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ವಾಸುದೇವ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಹಣ ಸ್ವೀಕರಿಸುತ್ತಿದ್ದ ಪುಟಗಾಂವ್ ಬಡ್ನಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಫಿರೋಜ್ ಖಾನ್ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.