AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಸರ್ಕಾರಿ ಬಸ್, ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು

ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟ್ಟಿದ್ದ ಕಾರ್ ಮತ್ತು ಇಳಕಲ್ ನಿಂದ ಹುಬ್ಬಳ್ಳಿಗೆ ಹೊರಟಿದ್ದ ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿದೆ.

ಗದಗ: ಸರ್ಕಾರಿ ಬಸ್, ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು
ಸರ್ಕಾರಿ ಬಸ್, ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Aug 18, 2024 | 9:06 AM

Share

ಗದಗ, ಆಗಸ್ಟ್​.18: ಸರ್ಕಾರಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ (Accident) ಸಂಭವಿಸಿದ್ದು ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ (Death). ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ(45), ಮಗಳು ಐಶ್ವರ್ಯ (16), ಮಗ ವಿಜಯ(12) ಮೃತ ದುರ್ದೈವಿಗಳು.

ಮೃತ ಕುಟುಂಬ ಶ್ರಾವಣ ಮಾಸದ ನಿಮಿತ್ಯ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟ್ಟಿತ್ತು. ಹೀಗಾಗಿ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರು ಹಾಘೂ ಇಳಕಲ್ ನಿಂದ ಹುಬ್ಬಳ್ಳಿಗೆ ಹೊರಟಿದ್ದ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನರಗುಂದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Karnataka Rains: ಕರ್ನಾಟಕದಾದ್ಯಂತ ಭಾರಿ ಮಳೆಯ ಮುನ್ಸೂಚನೆ, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಜಮೀನಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವು

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಟಿ.ಎನ್.ಬೆಟ್ಟದ ಹೊರವಲಯದ ಜಮೀನಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮೃತಪಟ್ಟಿದ್ದಾರೆ. ಅನಿಲ್ ಕುಮಾರ್(29), ಪುಟ್ಟರಾಜು(35) ಮೃತ ದುರ್ದೈವಿಗಳು. ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್​ ಡಿಕ್ಕಿಯಾಗಿ ಸವಾರ ಸಾವು

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಗ್ರಾಮದ ಬಳಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್​ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ನಡೆದಿದೆ. ಬೈಕ್​ನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗೆ ರಾಂಪುರ ಗ್ರಾಮದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ರಾಂಪುರ ಪಿಎಸ್​ಐ ಮಹೇಶ್ ಹೊಸಪೇಟ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೊಂಡಗುಳಿ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಯುವತಿ ದುರ್ಮರಣ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕೊಂಡಗುಳಿ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಜಗದೇವಿ ಮಾಲಿ ಬಿರಾದಾರ(23) ಎಂಬ ಯುವತಿ ಮೃತಪಟ್ಟಿದ್ದಾಳೆ. ನಿರಂತರ ಮಳೆಯಿಂದ ಅತಿಯಾಗಿ ತೇವಾಂಶಗೊಂಡಿದ್ದ ಗೋಡೆ ಏಕಾಏಕಿ ಕುಸಿದಿದ್ದು ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:52 am, Sun, 18 August 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್