ಗದಗ, ಆಗಸ್ಟ್.18: ಸರ್ಕಾರಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ (Accident) ಸಂಭವಿಸಿದ್ದು ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ (Death). ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ(45), ಮಗಳು ಐಶ್ವರ್ಯ (16), ಮಗ ವಿಜಯ(12) ಮೃತ ದುರ್ದೈವಿಗಳು.
ಮೃತ ಕುಟುಂಬ ಶ್ರಾವಣ ಮಾಸದ ನಿಮಿತ್ಯ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟ್ಟಿತ್ತು. ಹೀಗಾಗಿ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರು ಹಾಘೂ ಇಳಕಲ್ ನಿಂದ ಹುಬ್ಬಳ್ಳಿಗೆ ಹೊರಟಿದ್ದ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನರಗುಂದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Karnataka Rains: ಕರ್ನಾಟಕದಾದ್ಯಂತ ಭಾರಿ ಮಳೆಯ ಮುನ್ಸೂಚನೆ, 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಟಿ.ಎನ್.ಬೆಟ್ಟದ ಹೊರವಲಯದ ಜಮೀನಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮೃತಪಟ್ಟಿದ್ದಾರೆ. ಅನಿಲ್ ಕುಮಾರ್(29), ಪುಟ್ಟರಾಜು(35) ಮೃತ ದುರ್ದೈವಿಗಳು. ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಗ್ರಾಮದ ಬಳಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ನಡೆದಿದೆ. ಬೈಕ್ನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗೆ ರಾಂಪುರ ಗ್ರಾಮದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ರಾಂಪುರ ಪಿಎಸ್ಐ ಮಹೇಶ್ ಹೊಸಪೇಟ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕೊಂಡಗುಳಿ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಜಗದೇವಿ ಮಾಲಿ ಬಿರಾದಾರ(23) ಎಂಬ ಯುವತಿ ಮೃತಪಟ್ಟಿದ್ದಾಳೆ. ನಿರಂತರ ಮಳೆಯಿಂದ ಅತಿಯಾಗಿ ತೇವಾಂಶಗೊಂಡಿದ್ದ ಗೋಡೆ ಏಕಾಏಕಿ ಕುಸಿದಿದ್ದು ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 8:52 am, Sun, 18 August 24