AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗನವಾಡಿ ಮಕ್ಕಳ ಜೀವದ ಜೊತೆ ಚೆಲ್ಲಾಟ; ಕಳಪೆ ಆಹಾರ ನೀಡ್ತಿರುವ ಕಾರ್ಯಕರ್ತೆ, ಸಹಾಯಕಿ ವಿರುದ್ಧ ಪೋಷಕರ ಆಕ್ರೋಶ

ಗರ್ಭೀಣಿ ಮಹಿಳೆಯರು ಹಾಗೂ ಮಕ್ಕಳಿಗೆ ಸರ್ಕಾರವೇ ಉಚಿತವಾಗಿ ಪೌಷ್ಠಿಕ ಆಹಾರವಾದ ಮೊಟ್ಟೆ, ದವಸ-ಧಾನ್ಯಗಳು, ಸೇರಿದಂತೆ ಇನ್ನಿತರ ಪದ್ದಾರ್ಥವನ್ನು ಕೊಡುತ್ತದೆ. ಆದರೆ, ಗದಗ ನಗರದ ಗಂಗಾಪೂರ ಪೇಟೆಯ ಅಂಗನವಾಡಿ‌ ಕೇಂದ್ರ 178ರಲ್ಲಿಇದನ್ನು ಸರಿಯಾಗಿ ನಿರ್ವಹಣೆ ಮಾಡದೆ, ಕೊಳೆತ ಮೊಟ್ಟೆ, ಬೂಸ್ಟ್ ಹಿಡಿದ ಶೇಂಗಾ ಚಿಕ್ಕಿಗಳನ್ನು ಮಕ್ಕಳಿಗೆ ನೀಡಲಾಗುತ್ತಿದೆ.

ಅಂಗನವಾಡಿ ಮಕ್ಕಳ ಜೀವದ ಜೊತೆ ಚೆಲ್ಲಾಟ; ಕಳಪೆ ಆಹಾರ ನೀಡ್ತಿರುವ ಕಾರ್ಯಕರ್ತೆ, ಸಹಾಯಕಿ ವಿರುದ್ಧ ಪೋಷಕರ ಆಕ್ರೋಶ
ಗದಗದಲ್ಲಿ ಅಂಗನವಾಡಿ ಮಕ್ಕಳಿಗೆ ಕಳಪೆ ಮೊಟ್ಟೆ ಪೂರೈಕೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Feb 16, 2024 | 4:06 PM

Share

ಗದಗ, ಫೆ.16: ಅಂಗನವಾಡಿ ಮಕ್ಕಳ ಜೀವದ ಜೊತೆ‌ ಮಹಿಳಾ ಮತ್ತು ಮಕ್ಕಳ‌ ಅಭಿವೃದ್ಧಿ ಇಲಾಖೆ ಚೆಲ್ಲಾಟವಾಡುತ್ತಿದ್ದು, ಮಕ್ಕಳಿಗೆ ಸಂಪೂರ್ಣ ಕಳಪೆ ಆಹಾರ ಪೂರೈಕೆ ಮಾಡಿದ ಘಟನೆ ಗದಗ(Gadag) ನಗರದ ಗಂಗಾಪೂರ ಪೇಟೆಯ ಅಂಗನವಾಡಿ‌ ಕೇಂದ್ರ 178ರಲ್ಲಿ ಬೆಳಕಿಗೆ ಬಂದಿದೆ. ಕೊಳೆತ ಮೊಟ್ಟೆ, ಬೂಸ್ಟ್ ಹಿಡಿದ ಶೇಂಗಾ ಚಿಕ್ಕಿ ಹಾಗೂ ತರಕಾರಿ ಸೇರಿದಂತೆ ಆಹಾರ ಧಾನ್ಯಗಳಲ್ಲಿ ನುಸಿಗಳು ಕಂಡು ಬರುತ್ತಿವೆ. ಅದನ್ನೇ ಮಕ್ಕಳಿಗೆ ನೀಡುತ್ತಿರುವ ಹಿನ್ನಲೆ ರೊಚ್ವಿಗೆದ್ದ ಪಾಲಕರು, ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲಿಗಳು ಕಚ್ಚಿದ ತರಕಾರಿ‌ಯನ್ನೇ ಮಕ್ಕಳಿಗೆ ತಿನ್ನುಸುತ್ತಿರೋ ಕಾರ್ಯಕರ್ತೆ

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಉಪನಿರ್ದೇಶಕ ಶೆಟ್ಟೆಪ್ಪನವರ​ನ್ನು ಹಿಗ್ಗಾಮುಗ್ಗಾ ತರಾಟೆಗೆ ತಹೆದುಕೊಂಡು ಕಳಪೆ ಆಹಾರ ಧಾನ್ಯಗಳನ್ನು ಅಧಿಕಾರಿಗಳ ಎದುರೆ ಸುರಿದ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲಿಗಳು ಕಚ್ಚಿದ ತರಕಾರಿ‌ಯನ್ನೇ ಮಕ್ಕಳಿಗೆ ತಿನ್ನುಸುತ್ತಿರುವ ಕಾರ್ಯಕರ್ತೆ ಹಾಗೂ ಸಹಾಯಕಿ ವಿರುದ್ಧ ಕಿಡಿಕಾರಿದ್ದಾರೆ. ಕಳಪೆ ಆಹಾರ ತಿಂದು ಮಕ್ಕಳು ಆರೋಗ್ಯ ಹದಗೆಡುತ್ತಿದ್ದು, ಹೊಟ್ಟೆ ನೋವಿನಿಂದ ಬಳಲಿ ಫುಡ್ ಪಾಯಿಜನ್ ಆಗಿ ಆಸ್ಪತ್ರೆಗೆ ಸೇರುತ್ತಿವೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಅಂಗನವಾಡಿ ಮಕ್ಕಳಿಗೆ ಕೊಳೆತ ಮೊಟ್ಟೆ ಸರಬರಾಜು ಅಗಿರುವುದನ್ನು ಒಪ್ಪಿ ವಿಷಾದ ವ್ಯಕ್ತಪಡಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್

ಈ ಕುರಿತು ಮಾತನಾಡಿದ ಮಹಿಳಾ ಮತ್ತು ಮಕ್ಕಳ‌ ಅಭಿವೃದ್ಧಿ ಇಲಾಖೆ, ‘ಇದು ಗರ್ಭೀಣಿ ಮಹಿಳೆಯರು ಹಾಗೂ ಮಕ್ಕಳಿಗೆ ಕೊಡಬೇಕಾದಂತಹ ಆಹಾರವಾಗಿದೆ. ಆದರೆ, ಇಲ್ಲಿನ ಕಾರ್ಯಕರ್ತೆಯ ನಿರ್ಲಕ್ಷ್ಯತನದಿಂದ ಆಹಾರ ಪದ್ದಾರ್ಥಗಳನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ, ಆದ್ದರಿಂದ ಈ ಕೂಡಲೇ ಆಕೆಯ ಮೇಲೆ ಸೂಕ್ತ ಕ್ರಮಕೈಗೊಂಡು ಅಮಾನತ್ತುಗೊಳಿಸುತ್ತೇವೆ. ಜೊತೆಗೆ ಇದೇ ಗ್ರಾಮದ ಒಳ್ಳೆಯ ಕಾರ್ಯಕರ್ತೆಗೆ ಇಲ್ಲಿನ ಅಧಿಕಾರ ಕೊಟ್ಟು ನಿರ್ವಹಣೆ ಮಾಡಲು ನಾವು ವ್ಯವಸ್ಥೆ ಮಾಡುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ