ಗದಗದ ಕೊಕ್ಕರಗುಂದಿ ಗ್ರಾಮಕ್ಕೆ ಬಂದೇ ಬಿಡ್ತು ಬಸ್; ಟಿವಿ9ನಲ್ಲಿ ವರದಿ ಪ್ರಸಾರದ ಬಳಿಕ ಎಚ್ಚೆತ್ತ ಅಧಿಕಾರಿಗಳು
ಕೊಕ್ಕರಗುಂದಿ ಗ್ರಾಮಕ್ಕೆ ಬಸ್ ಸೌಲಭ್ಯ ನೀಡಬೇಕೆಂದು ಹಲವು ವರ್ಷಗಳಿಂದ ಗ್ರಾಮಸ್ಥರು ಮನವಿ ಮಾಡುತ್ತಿದ್ದರು. ಆದರೆ ಇಲ್ಲಿಯವರೆಗೆ ಯಾವುದೇ ಪ್ರಯೋಜವಾಗಿಲ್ಲ.
ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೊಕ್ಕರಗುಂದಿ ಗ್ರಾಮದ ವಿದ್ಯಾರ್ಥಿಗಳು ಬಸ್ ಇಲ್ಲದೆ ಪರದಾಡುತ್ತಿದ್ದರು. ತುಂಬಿ ಹರಿಯುವ ಹಳ್ಳಗಳನ್ನು ದಾಟಿ ಗ್ರಾಮದ ಮಕ್ಕಳು ಶಾಲೆ ಮತ್ತು ಕಾಲೇಜಿಗೆ ಹೋಗುತ್ತಿದ್ದರು. ಜೀವದ ಹಂಗು ತೊರೆದು ಶಿಕ್ಷಣ ಪಡೆಯುವ ಪರಿಸ್ಥಿತಿ ಇಲ್ಲಿನ ಮಕ್ಕಳಿಗೆ ಇತ್ತು. ಈ ಬಗ್ಗೆ ನಿನ್ನೆ ಟಿವಿ9ನಲ್ಲಿ ವರದಿ ಪ್ರಸಾರವಾಗಿತ್ತು. ವರದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಸಾರಿಗೆ ಇಲಾಖೆ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕೊಕ್ಕರಗುಂದಿ ಗ್ರಾಮಕ್ಕೆ ಬಸ್ ಬಿಟ್ಟಿದ್ದಾರೆ.
ಕೊಕ್ಕರಗುಂದಿ ಗ್ರಾಮಕ್ಕೆ ಬಸ್ ಸೌಲಭ್ಯ ನೀಡಬೇಕೆಂದು ಹಲವು ವರ್ಷಗಳಿಂದ ಗ್ರಾಮಸ್ಥರು ಮನವಿ ಮಾಡುತ್ತಿದ್ದರು. ಆದರೆ ಇಲ್ಲಿಯವರೆಗೆ ಯಾವುದೇ ಪ್ರಯೋಜವಾಗಿಲ್ಲ. ಬಸ್ ಸೌಕರ್ಯ ನೀಡದಿದ್ದರೆ ಪ್ರತಿಭಟನೆ ನಡೆಸುತ್ತೇವೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದರು. ಈ ಬಗ್ಗೆ ಟಿವಿ9 ವರದಿ ಮಾಡಿತ್ತು. ವರದಿ ಪ್ರಸಾರವಾದ ಬಳಿಕ ಗ್ರಾಮಕ್ಕೆ ಕೆಎಸ್ಆರ್ಟಿಸಿ ಬಸ್ ಬಂದಿದೆ. ಗ್ರಾಮಕ್ಕೆ ಬಂದ ಬಸ್ಗೆ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಪೂಜೆ ಸಲ್ಲಿಸಿ, ಟಿವಿ9ಗೆ ಧನ್ಯವಾದ ಹೇಳಿದ್ದಾರೆ.
ಕೊಕ್ಕರಗುಂದಿ ಗ್ರಾಮದಲ್ಲಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹೈಸ್ಕೂಲ್, ಕಾಲೇಜಿಗೆ ಹೋಗುತ್ತಾರೆ. ಬಸ್ ಇಲ್ಲದ ಕಾರಣ ಏಳೆಂಟು ಕಿಲೋಮೀಟರ್ ಬೆಳ್ಳಟ್ಟಿಗೆ ನಡೆದುಕೊಂಡು ಹೋಗಬೇಕು. ಅಲ್ಲಿಂದ ಶಿರಹಟ್ಟಿ ಕಾಲೇಜು ವಿದ್ಯಾರ್ಥಿಗಳು ಬಸ್ ಮೂಲಕ ಹೋಗಬೇಕಾದ ಅನಿವಾರ್ಯತೆ ಇತ್ತು. ಶಾಲೆ, ಕಾಲೇಜಿಗೆ ಹೋದಾಗ ಮಳೆ ಬಂದರೆ ತುಂಬಿ ಹರಿಯವ ಹಳ್ಳಗಳು ಶಾಂತವಾಗುವವರೆಗೂ ಹಳ್ಳದ ದಡದಲ್ಲೇ ಮಕ್ಕಳು ಕಾಯಬೇಕು. ಜಿಲ್ಲಾಡಳಿತ ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಯತ್ನ ಮಾಡಿಲ್ಲ ಅಂತ ಗ್ರಾಮಸ್ಥರು ಕಿಡಿಕಾರಿದ್ದರು.
ಇದನ್ನೂ ಓದಿ
ವಿಧಾನಸೌಧ ಎದುರು ಎತ್ತಿನ ಗಾಡಿಯಿಂದ ಕೆಳಗೆ ಬಿದ್ದ ಕಾಂಗ್ರೆಸ್ ಶಾಸಕರು! ಏನಾಯ್ತು ಅಲ್ಲಿ?
(authorities have facilitated bus service to Kokkaragundi village at gadag)
Published On - 2:22 pm, Mon, 13 September 21