ಗಾಂಧೀಜಿ ಬೆಳಗಾವಿ ಸಭೆಗೆ 100 ವರ್ಷ, ಜಂಟಿ ಅಧಿವೇಶನಕ್ಕೆ ಒಬಾಮಾಗೆ ಆಹ್ವಾನ: ಹೆಚ್​ಕೆ ಪಾಟೀಲ್​

ಬೆಳಗಾವಿಯಲ್ಲಿ 1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಎಐಸಿಸಿ ಅಧಿವೇಶನದ ಶತಮಾನೋತ್ಸವ ಆಚರಣೆಗೆ ಸರ್ಕಾರ ಯೋಜನೆ ರೂಪಿಸಿದೆ. ಈ ಸಮಾರಂಭಕ್ಕೆ ಮಾಜಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಆಹ್ವಾನಿಸಲಾಗಿದೆ. ಗಾಂಧೀಜಿ ಅವರ ತತ್ವಗಳನ್ನು ಯುವಜನರಿಗೆ ಪರಿಚಯಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ.

ಗಾಂಧೀಜಿ ಬೆಳಗಾವಿ ಸಭೆಗೆ 100 ವರ್ಷ, ಜಂಟಿ ಅಧಿವೇಶನಕ್ಕೆ ಒಬಾಮಾಗೆ ಆಹ್ವಾನ: ಹೆಚ್​ಕೆ ಪಾಟೀಲ್​
ಹೆಚ್​ಕೆ ಪಾಟೀಲ್​, ಬರಾಕ್​ ಒಬಮಾ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ವಿವೇಕ ಬಿರಾದಾರ

Updated on:Nov 04, 2024 | 9:30 AM

ಗದಗ, ನವೆಂಬರ್​ 04: ಬೆಳಗಾವಿಯಲ್ಲಿ ಮಹಾತ್ಮಾ ಗಾಂಧೀಜಿ (Mahatma Gandhi) ಅವರ ಅಧಕ್ಷತೆಯಲ್ಲಿ ‌ನಡೆದ ಎಐಸಿಸಿ ಸಭೆಗೆ 100 ವರ್ಷ ಆಗಿರುವ ಹಿನ್ನೆಲೆಯಲ್ಲಿ ವಿಧಾನಮಂಡಲ ಜಂಟಿ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ. ವಿಧಾನಮಂಡಲ ಜಂಟಿ ಅಧಿವೇಶನ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ. ವಿಧಾನಮಂಡಲ ಜಂಟಿ ಅಧಿವೇಶನಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್​ ಒಬಾಮ (Barack Obama) ಅವರಿಗೆ ಆಹ್ವಾನಿಸಲಾಗಿದೆ. ಈಗಾಗಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರಾಕ ಒಬಮಾ ಅವರಿಗೆ ಪತ್ರ ಬರೆದು ಆಮಂತ್ರಣ ನೀಡಿದ್ದಾರೆ ಎಂದು ಕಾನೂನು ಸಚಿವ ಹಾಗೂ ಶತಮಾನೋತ್ಸವ ಸಮಿತಿ ಅಧ್ಯಕ್ಷ ಹೆಚ್‌.ಕೆ. ಪಾಟೀಲ್ ತಿಳಿಸಿದರು.

ಗದಗನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬರಾಕ್ ಒಬಾಮಾ ಅವರು ನೀಡುವ ತಾರೀಖು ನೋಡಿಕೊಂಡು ಜಂಟಿ ಅಧಿವೇಶನ ದಿನಾಂಕ ನಿರ್ಣಯ ಮಾಡುತ್ತೇವೆ. ಮಹಾತ್ಮ ಗಾಂಧಿಜಿ ಅವರು ಕೇವಲ ಭಾರತದ ನಾಯಕನಲ್ಲ. ಮಹಾತ್ಮ ಗಾಂಧಿಜಿ ಅವರು ಜಗತ್ತಿನ ನಾಯಕ ಅಂತ ಸಾರುವ ಗಾಂಧಿ ಅನುಯಾಯಿ, ಅಭಿಮಾನಿಗೆ ಆಹ್ವಾನ ನೀಡಿದ್ದೇವೆ. ಇದೊಂದು ಉತ್ತಮವಾದ ಕಾರ್ಯಕ್ರಮ ಆಗಲಿದೆ ಎಂದು ಹೇಳಿದರು.

ಗಾಂಧೀಜಿ ಅವರು ಕರ್ನಾಟಕದ 120 ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಗಾಂಧೀಜಿ ಅವರು ಭೇಟಿ ನೀಡಿದ ರಾಜ್ಯದ 40 ಸ್ಥಳಗಳಲ್ಲಿ ಸ್ಮಾರಕ ನಿರ್ಮಾಣ ಮಾಡುತ್ತೇವೆ. ಬೇರೆ ಬೇರೆ ಜಿಲ್ಲೆಗಳು ರಥಯಾತ್ರೆಯ ಜ್ಯೋತಿಗಳು ಡಿಸೆಂಬರ್ 26 ಮತ್ತು 27ಕ್ಕೆ ಬೆಳಗಾವಿಗೆ ತಲುಪಲಿವೆ. ಯುವ, ಮಹಿಳಾ, ಸಾಮರಸ್ಯ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಮಹಾತ್ಮ ಗಾಂಧಿಜಿ ಅವರು ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿಯಲ್ಲಿ ನಡೆದ 39ನೇ ಎಐಸಿಸಿ ಸಭೆಯ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಈ ಸಭೆಯ ಮುಖಾಂತರ ಮಹಾತ್ಮ ಗಾಂಧಿಜಿಯವರು ಸರ್ವರೂ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಳ್ಳಬೇಕು ಅಂತ ಕರೆ ಕೊಟ್ಟರು. ಗಾಂಧಿಜಿ ಅವರ ಕರೆಯಿಂದ ಅನೇಕರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡರು.

ಇದನ್ನೂ ಓದಿ: ಗಾಂಧಿ ಕಾಂಗ್ರೆಸ್​ ನಾಯಕತ್ವಕ್ಕೆ 100 ವರ್ಷ: ಪಕ್ಷ ಮತ್ತು ಸರ್ಕಾರದಿಂದ ಗಾಂಧಿ ನಡಿಗೆ; ಡಿಕೆ ಶಿವಕುಮಾರ್​

ಗಾಂಧೀಜಿ ಅಧ್ಯಕ್ಷತೆ ವಹಿಸಿದ ಸಭೆಯ ಶತಮಾನೋತ್ಸವ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಕರ್ನಾಟಕದಲ್ಲಿ ಅದರಲ್ಲೂ ಬೆಳಗಾವಿಯಲ್ಲಿ ನಡೆದ ಸಭೆ ಬಹಳ ಮಹತ್ವದ್ದಾಗಿದೆ. ಗದಗ ಜಿಲ್ಲೆಯವರಿಗೆ ಇನ್ನೂ ಬಹಳ ಮಹತ್ವದ್ದಾಗಿದೆ. ಹುಯಿಲಗೋಳ ನಾರಾಯಣರಾಯರು ಬರೆದ “ಉದಯವಾಗಲಿ ಚೆಲುವ ಕನ್ನಡನಾಡು” ಗೀತೆ ಮೊಟ್ಟಮೊದಲ ಬಾರಿಗೆ ಈ ಸಭೆಯಲ್ಲಿ ಹಾಡಲಾಗಿತ್ತು. ಈ ಹಾಡನ್ನು ಗಂಗೂಬಾಯಿ ಹಾನಗಲ್ ಅವರು ಹಾಡಿದ್ದರು. ಗಾಂಧೀಜಿ ತತ್ವ, ಸಿದ್ಧಾಂತಗಳು ಯುವಕರ ಮನಕ್ಕೆ ತಲಪುವ ದೊಡ್ಡ ಪ್ರಯತ್ನ ಮಾಡಬೇಕಾಗಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನನ್ನು (ಹೆಚ್​ಕೆ ಪಾಟೀಲ್​) ಶತಮಾನೋತ್ಸವ ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಾರೆ. ಈ ಸಮಿತಿ ಮಂಗಳವಾರ (ನ.5) ರಂದು ಬೆಳಗಾವಿಗೆ ಭೇಟಿ ನೀಡಲಿದೆ. 2025ರ ಅಕ್ಟೋಬರ್ 2 ರವರೆಗೆ ಶತಮಾನೋತ್ಸವ ಮಾಡಲಾಗುತ್ತದೆ ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:49 am, Mon, 4 November 24

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ