AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮಗೆ ಮನೆಯ ಮುಂದೆ ಆಟವಾಡಲು ಸಾಧ್ಯವಾಗುತ್ತಿಲ್ಲ’; ಪ್ರಧಾನಿಗೆ ಪತ್ರ ಬರೆದ 8 ನೇ ತರಗತಿ ಬಾಲಕ

ಗದಗ ಜಿಲ್ಲೆಯ ಬೆಟಗೇರಿಯಲ್ಲಿ ಹಲವು ವರ್ಷಗಳಿಂದ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದೆ. ಹದಗೆಟ್ಟ ರಸ್ತೆ, ಚರಂಡಿ ಹಾಗೂ ಕುಡಿಯುವ ನೀರಿನ ಸಮಸ್ಯೆಯಿಂದ ಗ್ರಾಮಸ್ಥರು ನರಳುತ್ತಿದ್ದಾರೆ. ನಗರಸಭೆಯ ನಿರ್ಲಕ್ಷ್ಯದ ಬಗ್ಗೆ 8ನೇ ತರಗತಿಯ ವಿದ್ಯಾರ್ಥಿ ಸಾಯಿರಾಮ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾನೆ. ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಸ್ಪಂದಿಸುತ್ತಾರೆಂಬ ಭರವಸೆಯಲ್ಲಿ ಗ್ರಾಮಸ್ಥರಿದ್ದಾರೆ.

'ನಮಗೆ ಮನೆಯ ಮುಂದೆ ಆಟವಾಡಲು ಸಾಧ್ಯವಾಗುತ್ತಿಲ್ಲ'; ಪ್ರಧಾನಿಗೆ ಪತ್ರ ಬರೆದ 8 ನೇ ತರಗತಿ ಬಾಲಕ
ಪ್ರದಾನಿಗೆ ಪತ್ರ ಬರೆದ 8 ನೇ ತರಗತಿ ಬಾಲಕ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Nov 17, 2025 | 11:56 AM

Share

ಗದಗ, ನವೆಂಬರ್ 17: ಜಿಲ್ಲೆಯ ಬೆಟಗೇರಿಯ ಜನರು ಹಲವು ವರ್ಷಗಳಿಂದ ಗ್ರಾಮದಲ್ಲಿ ಮೂಲಸೌಕರ್ಯಗಳಿಲ್ಲದೆ ಒದ್ದಾಡುತ್ತಿದ್ದಾರೆ. ಈ ಸಮಸ್ಯೆಯನ್ನು ನಗರಸಭೆಯ ಗಮನಕ್ಕೆ ತಂದರೂ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಕುರಿತು ಗ್ರಾಮದ 8 ನೇ ತರಗತಿಯ ವಿದ್ಯಾರ್ಥಿಯೋರ್ವ ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಪತ್ರ ಬರೆದಿದ್ದಾನೆ. ಗ್ರಾಮಸ್ಥರು ಬಾಲಕನ ಪತ್ರಕ್ಕೆ ಪ್ರಧಾನಿ ಸ್ಪಂದಿಸುತ್ತಾರೆಂಬ ಭರವಸೆಯಲ್ಲಿದ್ದಾರೆ.

ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯ

ಹದಗೆಟ್ಟ ರಸ್ತೆ, ಚರಂಡಿಯ ಅವ್ಯವಸ್ಥೆ ಸೇರಿದಂತೆ ಬೆಟಗೇರಿಯ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮಳೆಗಾಲದಲ್ಲಿ ಕೆಸರು ಗದ್ದೆಯಂತಾಗುವ ರಸ್ತೆಯಲ್ಲಿ ಗ್ರಾಮಸ್ಥರಿಗೆ ಓಡಾಡಲು ಕಷ್ಟವಾಗುತ್ತಿದೆ. ದಿನನಿತ್ಯ ಮನೆಯ ಮುಂದೆ ಆಟವಾಡುವದೂ ಕಷ್ಟವಾಗಿದೆ ಎಂದು ಮಕ್ಕಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಕಳೆದ 20 ವರ್ಷಗಳಿಂದ ಇದೇ ವ್ಯವಸ್ಥೆಯಲ್ಲಿರುವ ಗ್ರಾಮಸ್ಥರು ನರಕಯಾತನೆ ಅನುಭವಿಸುತ್ತಿದ್ದಾರೆ. ಇದನ್ನು ಸ್ಥಳೀಯ ಜನಪ್ರತಿನಿಧಿಗಳು, ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೆ ಬದಲಾವಣೆ ಕಾಣದಾಗಿದೆ. ಈ ಎಲ್ಲಾ ಅವ್ಯವಸ್ಥೆಯಿಂದ ನೊಂದ ಬಾಲಕ ಸಾಯಿರಾಮ್, ಪ್ರಧಾನಿಗೆ ಪತ್ರ ಬರೆದಿದ್ದಾನೆ.

ಬಾಲಕನ ಪತ್ರದಲ್ಲೇನಿದೆ?

ತಾನು ಸೇಂಟ್ ಜಾನ್ಸ್ ಶಾಲೆಯಲ್ಲಿ 8 ನೇ ತರಗತಿಯಲ್ಲಿ ಓದುತ್ತಿದ್ದು, ತನ್ನ ಮನೆಯ ಮುಂದಿನ ರಸ್ತೆ ಹಾಗೂ ಓಣಿಯ ರಸ್ತೆ ಹದಗೆಟ್ಟಿದೆ ಎಂದು ತನ್ನ ಪತ್ರದಲ್ಲಿ ಬರೆದುಕೊಂಡಿರುವ ಬಾಲಕ, ಪರಿಹಾರ ಒದಗಿಸುವಂತೆ ಮೋದಿಯವರಲ್ಲಿ ವಿನಂತಿಸಿಕೊಂಡಿದ್ದಾನೆ. ನಮ್ಮ ಮನೆಯ ಮುಂದಿನ ರಸ್ತೆಯಲ್ಲಿ ಕೆಸರು ತುಂಬಿದೆ. ನಾನೇ ಹಲವು ಬಾರಿ ಕೆಸರಲ್ಲಿ ಬಿದ್ದಿದ್ದೇನೆ ಎಂದು ತನ್ನ ಗೋಳು ಹೇಳಿಕೊಂಡಿದ್ದಾನೆ. ಅಷ್ಟೇ ಅಲ್ಲದೆ ಕುಡಿಯುವ ನೀರೂ ಸರಿಯಾದ ಸಮಯಕ್ಕೆ ಬರುವುದಿಲ್ಲ,ನಮಗೆ ಕಷ್ಟವಾಗುತ್ತಿದೆ. ಹೀಗಾಗಿ ರಸ್ತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಸರಿಪಡಿಸಿ ಎಂದು ತನ್ನ ಪತ್ರದಲ್ಲಿ ವಿನಂತಿಸಿಕೊಂಡಿದ್ದಾನೆ. ಬಾಲಕ ಮೋದಿಗೆ ಪತ್ರ ಬರೆದಿರುವುದರಿಂದ ಬಡಾವಣೆಯ ಜನರು ಆನಂದದಲ್ಲಿದ್ದು, ಪ್ರಧಾನಿಯಿಂದ ಸ್ಪಂದನೆ ಸಿಗುವ ಭರವಸೆಯಲ್ಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:32 am, Mon, 17 November 25

ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್