ಬಿಜೆಪಿಯಲ್ಲಿ ನಾಯಕತ್ವ ಕೊರತೆ ಇದೆ, ಅದು ಲೀಡರ್ ಲೆಸ್ ಪಾರ್ಟಿ:​ ಎಂಎಲ್​ಸಿ ಜಗದೀಶ್ ಶೆಟ್ಟರ್ ವಾಗ್ದಾಳಿ

ಬಿಜೆಪಿಯ ಮಾಜಿ‌ ಶಾಸಕರು, ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಕಾಂಗ್ರೆಸ್ ಪಕ್ಷ ಸೇರಲು ಬಹಳಷ್ಟು ಜನ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಬಿಜೆಪಿಯಲ್ಲಿ ನಾಯಕತ್ವ ಕೊರತೆ ಇದೆ, ಅದು ಲೀಡರ್ ಲೆಸ್ ಪಾರ್ಟಿ ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ಮಾಡಿದ್ದಾರೆ.

ಬಿಜೆಪಿಯಲ್ಲಿ ನಾಯಕತ್ವ ಕೊರತೆ ಇದೆ, ಅದು ಲೀಡರ್ ಲೆಸ್ ಪಾರ್ಟಿ:​ ಎಂಎಲ್​ಸಿ ಜಗದೀಶ್ ಶೆಟ್ಟರ್ ವಾಗ್ದಾಳಿ
ಜಗದೀಶ್​ ಶೆಟ್ಟರ್
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ

Updated on: Sep 03, 2023 | 4:47 PM

ಗದಗ, ಸೆಪ್ಟೆಂಬರ್​ 3: ಬಿಜೆಪಿಯಲ್ಲಿ ನಾಯಕತ್ವ ಕೊರತೆ ಇದೆ, ಅದು ಲೀಡರ್ ಲೆಸ್ ಪಾರ್ಟಿ ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್​ (Jagadish Shettar) ವಾಗ್ದಾಳಿ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಮದುರ್ಗದಲ್ಲಿ ಹಣ ಇದ್ದ ವ್ಯಕ್ತಿಗೆ ಬಿಜೆಪಿ ಟಿಕೆಟ್​​ ಕೊಟ್ಟರು. ಬೈಂದೂರು ಸುಕುಮಾರ್ ಶೆಟ್ಟಿಗೆ ಟಿಕೆಟ್ ತಪ್ಪಿಸಿದರು. ಬಿಜೆಪಿಯ ಮಾಜಿ‌ ಶಾಸಕರು, ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ. ಕಾಂಗ್ರೆಸ್ ಪಕ್ಷ ಸೇರಲು ಬಹಳಷ್ಟು ಜನ ಅಪೇಕ್ಷೆ ವ್ಯಕ್ತಪಡಿಸಿದ್ದಾರೆ. ಯಾರು ಸೇರುತ್ತಾರೆಂದು ಹೇಳಲ್ಲ, ನಿರ್ಧಾರವಾದಾಗ ಹೆಸರು ಹೇಳುತ್ತೇನೆ. ಮಾಜಿ ಸಚಿವ ಬಿ.ಸಿ.ಪಾಟೀಲ್​ ಸಂಪರ್ಕದಲ್ಲಿಲ್ಲ ಎಂದು ಹೇಳಿದ್ದಾರೆ.

40-45 ಶಾಸಕರು ಸಂಪರ್ಕದಲ್ಲಿದ್ದಾರೆಂದು ಬಿ.ಎಲ್.ಸಂತೋಷ್ ಹೇಳಿಕೆ ವಿಚಾರವಾಗಿ ಅವರು ಮಾತನಾಡಿ, ಈಗ ಬಿ.ಎಲ್​.ಸಂತೋಷ್ ಅವರೇ ಸ್ಪಷ್ಟೀಕರಣ ಕೊಡಬೇಕು.​ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕರ ಆಯ್ಕೆ ವಿಳಂಬ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಚೀಟಿ ಮೂಲಕವಾದರೂ ತಾತ್ಕಾಲಿಕ ವಿಪಕ್ಷ ನಾಯಕರ ಆಯ್ಕೆ ಮಾಡಿ ಎಂದರು.

ಇದನ್ನೂ ಓದಿ: ಬಿಜೆಪಿಯವರ ಡಿಎನ್​ಎ ಆಪರೇಶನ್ ಕಮಲ: ವಿವಾದಾತ್ಮಕ ಹೇಳಿಕೆ ನೀಡಿದ ಸಲೀಂ ಅಹ್ಮದ್

ಸರ್ಕಾರ ರಚಿಸಿ 100 ದಿನವಾದರೂ ವಿಪಕ್ಷ ನಾಯಕ ಆಯ್ಕೆಯಾಗಿಲ್ಲ. ಸೋಚನೀಯ ಪರಿಸ್ಥಿತಿಯಲ್ಲಿದೆ ಅನ್ನೋದನ್ನ ಅರ್ಥಮಾಡಿಕೊಳ್ಳಬೇಕು. ರಾಜ್ಯ ಬಿಜೆಪಿ ಕೆಲವರ ಮುಷ್ಟಿಯಲ್ಲಿದೆ, ಹೀಗಾಗಿ ಸುಧಾರಣೆಯಾಗಿಲ್ಲ ಎಂದು ಕಿಡಿಕಾರಿದರು.

ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವಿರುದ್ಧ ಕಣಕ್ಕಿಳಿಯುವ ಸಾಧ್ಯತೆ ವಿಚಾರವಾಗಿ ಮಾತನಾಡಿದ ಅವರು, ಎಂಪಿಗೆ ಯಾರು ನಿಲ್ಲಬೇಕು ಅನ್ನೋದನ್ನ ಕಾಂಗ್ರೆಸ್ ಹೈ ಕಮಾಂಡ್ ನಿರ್ಧಾರ ಮಾಡುತ್ತೆ ಎಂದರು.

ನನ್ನ ರಾಜಕೀಯ ಅನುಭವದ ಮೇಲೆ ಹೇಳುವುದಾದರೆ ಇದು ಸಾಧ್ಯವಿಲ್ಲ

5 ವರ್ಷಗಳಿಂದ ಒಂದು ದೇಶ ಒಂದು ಚುನಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ನರೇಂದ್ರ ಮೋದಿ ಅಧಿಕಾರಕ್ಕೆ ಬಂದು 9 ವರ್ಷ 3 ತಿಂಗಳು ಕಳೆದಿದೆ. ಇನ್ನೆಂಟು ತಿಂಗಳಲ್ಲಿ ಲೋಕಸಭೆ ಚುನಾವಣೆ ಬರುತ್ತಿದೆ. ಈಗ ಕಮಿಟಿ ಮಾಡಿದ್ದು ಯಾಕೆ ಎಂದು ನನಗೆ ಅರ್ಥವಾಗುತ್ತಿಲ್ಲ. ನನ್ನ ರಾಜಕೀಯ ಅನುಭವದ ಮೇಲೆ ಹೇಳುವುದಾದರೆ ಇದು ಸಾಧ್ಯವಿಲ್ಲ. ಭಾರತ ದೊಡ್ಡ ದೇಶ, ಬೇರೆ ಬೇರೆ ರಾಜ್ಯಗಳಲ್ಲಿ ಬೇರೆ ಬೇರೆ ವ್ಯವಸ್ಥೆಯಿದೆ. ದೇಶಾದ್ಯಂತ ಒಂದೇ ಹಂತದಲ್ಲಿ ಚುನಾವಣೆ ಸಾಧ್ಯವಿಲ್ಲ ಎಂದು ಹೇಳುವೆ.

ಇದನ್ನೂ ಓದಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರ ಅಸಮಾಧಾನ ಸ್ಫೋಟ: ನಾಯಕತ್ವ, ಉಸ್ತುವಾರಿ ಬದಲಾವಣೆಗೆ ಪಟ್ಟು

ನಮ್ಮ ರಾಜ್ಯದಲ್ಲಿ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆದಿದೆ. 2024ರ ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ವಿಧಾನಸಭಾ, ಲೋಕಸಭಾ ಚುನಾವಣೆ ಹೇಗೆ ಹೊಂದಾಣಿಕೆ ಮಾಡಿತ್ತೀರಿ. ಒಂದೇ ಅವಧಿಯಲ್ಲಿ ಚುನಾವಣೆ ನಡೆಸಬೇಕಾದರೆ ವಿಸರ್ಜಿಸಬೇಕಾಗುತ್ತೆ. ಅವಧಿಗೂ ಮುನ್ನವೇ ಕೆಲ ರಾಜ್ಯಗಳ ವಿಧಾನಸಭೆ ವಿಸರ್ಜಿಸಬೇಕಾಗುತ್ತೆ. ಅಧಿಕಾರ ಕಡಿತಕ್ಕೆ ಯಾರೂ ಒಪ್ಪಲ್ಲ, ಸಂವಿಧಾನದಲ್ಲಿ ಇದಕ್ಕೆ ಅವಕಾಶವಿಲ್ಲ ಎಂದು ಹೇಳಿದರು.

ಬಿಜೆಪಿಗೆ ಭಯ ಶುರುವಾಗಿರುವುದರಿಂದ ಇಂತಹ ಚರ್ಚೆ ಹುಟ್ಟಾಕಿದ್ದಾರೆ. ಇವತ್ತಿನ ವಾತಾವರಣ ನೋಡಿದರೆ ಅವಧಿಗೂ ಮುನ್ನವೇ ಚುನಾವಣೆ ಸಾಧ್ಯತೆ ಇದೆ. ಅವಧಿಗೂ ಮುನ್ನವೇ ಲೋಕಸಭೆ ಚುನಾವಣೆ ಲಕ್ಷಣಗಳು ಕಾಣಿಸುತ್ತಿದೆ. ಮಮತಾ ಬ್ಯಾನರ್ಜಿ, ನಿತೀಶ್ ಕುಮಾರ್​ ಅನುಮಾನ ವ್ಯಕ್ತಪಡಿಸಿದ್ದಾರೆ. ಕೆಲವೇ ತಿಂಗಳಲ್ಲಿ 4-5 ರಾಜ್ಯಗಳ ವಿಧಾನಸಭಾ ಚುನಾವಣೆ ಬರಲಿದೆ. ಅಲ್ಲೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆ ಹೇಳುತ್ತಿದೆ. ಹೀಗಾಗಿ ಲೋಕಸಭೆ, ವಿಧಾನಸಭೆ ಚುನಾವಣೆ ಒಟ್ಟಿಗೆ ನಡೆಸುವ ಸಾಧ್ಯತೆಯಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್