ಲಕ್ಕುಂಡಿ ಗ್ರಾಮದಲ್ಲಿ ಮಳೆಗೆ ಸೋರುತ್ತಿರುವ ಮನೆಗಳು; ತವರಿಗೆ ಹೋದ ಬಾಣಂತಿ, ದೇವಸ್ಥಾನದಲ್ಲಿ ಪತಿ ವಾಸ್ತವ್ಯ

ನಿರಂತರ ಮಳೆಗೆ ಗದಗ ಜಿಲ್ಲೆಯ ಜನರು ತತ್ತರಿಸುತ್ತಿದ್ದಾರೆ. ಕೆಲವರ ಮನೆಗಳು ಸೋರಲಾರಂಭಿವಿವೆ. ಅದರಂತೆ ಬಾಣಂತಿಯೊಬ್ಬರು, ಆಶ್ರಯ ಪಡೆಯಲು ಗಂಡನ ಮನೆ ಬಿಟ್ಟು ತವರು ಮನೆಗೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ.

ಲಕ್ಕುಂಡಿ ಗ್ರಾಮದಲ್ಲಿ ಮಳೆಗೆ ಸೋರುತ್ತಿರುವ ಮನೆಗಳು; ತವರಿಗೆ ಹೋದ ಬಾಣಂತಿ, ದೇವಸ್ಥಾನದಲ್ಲಿ ಪತಿ ವಾಸ್ತವ್ಯ
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ನೂರಾರು ಮನೆಗಳು ಮಳೆಗೆ ಸೋರುತ್ತಿವೆ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: Rakesh Nayak Manchi

Updated on: Jul 27, 2023 | 8:36 PM

ಗದಗ, ಜುಲೈ 27: ಜಿಲ್ಲೆಯಲ್ಲಿ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಗ್ರಾಮೀಣ ಭಾಗದ ಜನರು ಕಂಗಾಲಾಗಿದ್ದಾರೆ. ಲಕ್ಕುಂಡಿ ಗ್ರಾಮದಲ್ಲಿ ನೂರಾರು ಮನೆಗಳು ಸೋರುತ್ತಿದೆ. ಈ ಪೈಕಿ ಮನೆಯೊಂದರ ಬಾಣಂತಿ, ಗಂಡನ ಮನೆ ಸೋರುತ್ತಿದ್ದ ಹಿನ್ನೆಲೆ ದೇವಸ್ಥಾನದಲ್ಲಿ ಎರಡು ದಿನ ಆಶ್ರಯ ಪಡೆದು ಇದೀಗ ತವರು ಮನೆಗೆ ತೆರಳಿದ್ದಾರೆ.

ನಿರಂತರ ಮಳೆಗೆ ಲಕ್ಕುಂಡಿ ಗ್ರಾಮದಲ್ಲಿ ಹತ್ತಾರು ಮನೆಗಳು ಸೋರುತ್ತಿದ್ದು, ಬಾಣಂತಿ ಪವಿತ್ರಾ ಅವರ ಗಂಡನ ಮನೆಯೂ ಇದರಲ್ಲಿ ಒಂದಾಗಿದೆ. ಮನೆ ಜರಿಯುವ ಆತಂಕ ಪವಿತ್ರಾಳ ಕುಟುಂಬಸ್ಥರನ್ನು ಕಾಡುತ್ತಿದೆ. ಹೀಗಾಗಿ ಮಳೆ ಕಡಿಮೆಯಾಗುವ ವರೆಗೆ ತವರು ಮನೆಯಲ್ಲೇ ಆಶ್ರಯ ಪಡೆಯುವುದಾಗಿ ಪವಿತ್ರಾ ಹೇಳಿದ್ದಾರೆ. ಇತ್ತ, ಈಕೆಯ ಪತಿ ದೇವಸ್ಥಾನದಲ್ಲಿ ವಾಸ್ತವ್ಯ ಹೂಡುವಂತಾಗಿದೆ.

ಇದನ್ನೂ ಓದಿ: Uttara Kannada:ಅಬ್ಬರದ ಮಳೆಗೆ ಸಂಪರ್ಕ ಕಡಿತ, ಹೃದಯಾಘಾತವಾದ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಹರಸಾಹಸಪಟ್ಟ ಕುಟುಂಬಸ್ಥರು

ಲಕ್ಕುಂಡಿ ಗ್ರಾಮದ ಅನೇಕ ಕುಟುಂಬಗಳು ಮನೆಗಳು ಸೋರುತ್ತಿರುವ ಸಮಸ್ಯೆ ಎದುರಿಸುತ್ತಿದ್ದಾರೆ. ಮನೆಗಳಲ್ಲಿ ಅಡುಗೆ ಮಾಡಲು ಕೂಡಲು ಕಷ್ಟಸಾಧ್ಯವಾಗುತ್ತಿದೆ. ಹಲವರ ಮನೆಗಳ ಮೇಲ್ಛಾವಣಿಗೆ ಪ್ಲಾಸ್ಟಿಕ್​ ಹಾಳೆಗಳನ್ನು ಹಾಕಲಾಗಿದೆ. ಆದರೂ ಮನೆಗಳು ಸೋರುತ್ತಿವೆ. ಇಂತಹ ಪರಿಸ್ಥಿತಿ ಎದುರಿಸುತ್ತಿದ್ದರೂ ಜಿಲ್ಲಾಡಳಿತವು ಸ್ಥಳಕ್ಕೆ ಆಗಮಿಸಿಲ್ಲ. ಇನ್ನಾದರೂ ನೆರವಿಗೆ ದಾವಿಸಂತೆ ಗ್ರಾಮಸ್ಥ ವೀರುಪಾಕ್ಷ ಮನವಿ ಮಾಡಿದ್ದಾರೆ. ಸಮಸ್ಯೆ ಎದುರಿಸುತ್ತಿರುವ ಕುಟುಂಬಗಳಿಗೆ ಕಾಳಜಿ ಕೇಂದ್ರ ತೆರೆಯುವ ಮೂಲಕ ಜಿಲ್ಲಾಡಳಿತ ಮಾನವೀಯತೆ ತೋರುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ