AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವು, ಪ್ರವಾಸಕ್ಕೆ ಹೋಗಿದ್ದ ವಿದ್ಯಾರ್ಥಿಗಳ ಮೇಲೆ‌ ಜೇನು ನೋಣ ದಾಳಿ

ಆಕ್ಸಿಡೆಂಟ್ ಆಗುತ್ತಿದ್ದಂತೆ ಎಚ್ಚೆತ್ತ ಲಾರಿ ಚಾಲಕ ತಕ್ಷಣ ಕಾರಿನಿಂದ ನಾಲ್ವರನ್ನೂ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾನೆ. ರೋಣ ಪಟ್ಟಣದಿಂದ ಗದಗ ಕಡೆ ಬರುತ್ತಿದ್ದ ಕಾರು ಇದಾಗಿತ್ತು. ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರು ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವು, ಪ್ರವಾಸಕ್ಕೆ ಹೋಗಿದ್ದ ವಿದ್ಯಾರ್ಥಿಗಳ ಮೇಲೆ‌ ಜೇನು ನೋಣ ದಾಳಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 19, 2022 | 8:30 PM

Share

ಗದಗ: ಗದಗ ಜಿಲ್ಲೆಯ ರೋಣ ಪಟ್ಟಣದ ಬಳಿ (ron, gadag) ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗದಗ ಮೂಲದ ದರ್ಶನ್​ ರಮೇಶ್​ ರಾಜಪುರೋಹಿತ (19), ಶೌಕತ್ಅಲಿ ಪಠಾಣ್(22) ಮತ್ತು ಮೆಹಪೂಜ್ ಗದಗ(25) ಸಾವಿಗೀಡಾದವರು. ಓರ್ವನಿಗೆ ಗಂಭೀರ ಗಾಯವಾಗಿದೆ. ಮರಕ್ಕೆ ಡಿಕ್ಕಿ ಹೊಡೆದ ಬಳಿಕ ಕಾರು ಹೊತ್ತಿಕೊಂಡು ಉರಿದಿದೆ. ಓರ್ವ ಗಂಭೀರ ಗಾಯಾಳು ಮತ್ತು ಮೂವರ ಶವಗಳನ್ನು ಅದೇ ದಾರಿಯಲ್ಲಿ ಸಾಗುತ್ತಿದ್ದ ಲಾರಿ ಚಾಲಕ ಹೊರಕ್ಕೆ ತೆಗೆದಿದ್ದಾನೆ. ಆಕ್ಸಿಡೆಂಟ್ ಆಗುತ್ತಿದ್ದಂತೆ ಎಚ್ಚೆತ್ತ ಲಾರಿ ಚಾಲಕ ತಕ್ಷಣ ಕಾರಿನಿಂದ ನಾಲ್ವರನ್ನೂ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾನೆ. ರೋಣ ಪಟ್ಟಣದಿಂದ ಗದಗ ಕಡೆ ಬರುತ್ತಿದ್ದ ಕಾರು ಇದಾಗಿತ್ತು. ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರವಾಸಕ್ಕೆ ಹೋಗಿದ್ದ ವಿದ್ಯಾರ್ಥಿಗಳ ಮೇಲೆ‌ ಜೇನು ನೋಣ ದಾಳಿ ಪ್ರವಾಸಕ್ಕೆ ಹೋಗಿದ್ದ ವಿದ್ಯಾರ್ಥಿಗಳ ಮೇಲೆ‌ ಜೇನು ನೋಣಗಳು ದಾಳಿ ಮಾಡಿದ್ದು, ಜೇನು ನೋಣ ದಾಳಿಯಿಂದ 16ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಶಿರ್ವೆ ಪ್ರವಾಸಕ್ಕೆ ಹೋಗಿದ್ದ ಬೇಳೂರು ಸ್ವಾತ ನಿಕೇತನ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿಗಳ ಮೇಲೆ ಜೇನು ದಾಳಿ ನಡೆದಿದೆ. 6, 7 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗಾಗಿ ಈ ಪ್ರವಾಸ ಆಯೋಜಿಸಲಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಕ್ರಿಮ್ಸ್ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.

ಎಸಿಬಿ ದಾಳಿಗೊಳಗಾಗಿದ್ದ ಅಧಿಕಾರಿಯನ್ನು ನಿವೃತ್ತಿ ನಂತರವೂ ಹುದ್ದೆಯಲ್ಲಿ ಮುಂದುವರಿಸಿದ ಸರ್ಕಾರ! ಬೆಂಗಳೂರು: ಎಸಿಬಿ ದಾಳಿಗೊಳಗಾಗಿದ್ದ ಅಧಿಕಾರಿಯನ್ನು ಹುದ್ದೆಯಲ್ಲಿ ಮುಂದುವರಿಸಲಾಗಿದೆ. ನಿವೃತ್ತಿ ನಂತರವೂ ರಾಜ್ಯಸರ್ಕಾರ ಅಧಿಕಾರದಲ್ಲಿ ಮುಂದುವರಿಸಿದೆ. ಹುದ್ದೆಯಲ್ಲಿ ಮುಂದುವರಿಕೆಗೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ನಿವೃತ್ತಿ ನಂತರವೂ ಹುದ್ದೆಯಲ್ಲಿ ಎನ್.ಜಿ. ಗೌಡಯ್ಯ ಮುಂದುವರಿಕೆಗೆ ಅನುಮೋದನೆ ನೀಡಲಾಗಿದೆ. ಆರು ತಿಂಗಳು ಅನುಮತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. 3 ವರ್ಷಗಳ ಹಿಂದೆ ಬಿಡಿಎ ಇಂಜಿನಿಯರ್ ಆಗಿದ್ದಾಗ ACB ದಾಳಿ ನಡೆಸಲಾಗಿತ್ತು. ಹಣವಿದ್ದ ಬ್ಯಾಗ್ ಫ್ಲ್ಯಾಟ್‌ನಿಂದ ಎಸೆದು ಗೌಡಯ್ಯ ಸುದ್ದಿಯಾಗಿದ್ದರು. ಮಂತ್ರಿ ಅಪಾರ್ಟ್‌ಮೆಂಟ್‌ ಫ್ಲ್ಯಾಟ್‌ನಿಂದ ಎಸೆದು ಸುದ್ದಿಯಾಗಿದ್ದರು. ಇದೀಗ ಅವರನ್ನು ಅಧಿಕಾರದಲ್ಲಿ ಮುಂದುವರಿಸಲಾಗಿದೆ.

ನಿವೃತ್ತಿಯ ವೇಳೆಗೆ ವಸತಿ ನಿಗಮದ ಮುಖ್ಯ ಇಂಜಿನಿಯರ್ ಆಗಿದ್ದ ಅವರು ಕಳೆದ ಫೆಬ್ರವರಿ 28ರಂದು ಹುದ್ದೆಯಿಂದ ನಿವೃತ್ತಿಯಾಗಿದ್ದರು. ರಾಜ್ಯ ಪೊಲೀಸ್ ವಸತಿ ನಿಗಮದ ಮುಖ್ಯ ಇಂಜಿನಿಯರ್ ಆಗಿದ್ದ ಅವರನ್ನು ಹುದ್ದೆಯಲ್ಲಿ ಮುಂದುವರಿಸಲು ಸಂಪುಟದಲ್ಲಿ ಒಪ್ಪಿಗೆ ನೀಡಿ ಆದೇಶ ಹೊರಡಿಸಲಾಗಿದೆ. ಸಂಪುಟದಲ್ಲಿ ಒಪ್ಪಿಗೆ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಸತಿ ನಿಗಮಕ್ಕೆ ಸೇವೆ ಅಗತ್ಯವಿರುವ ಕಾರಣ ನೀಡಿ ಮುಂದುವರಿಕೆ ಮಾಡಲಾಗಿದೆ. ನಿಯಮದಲ್ಲಿ ಅವಕಾಶ ಇಲ್ಲದಿದ್ದರೂ ಮುಂದುವರಿಸಿರುವ ಸರ್ಕಾರದ ಬಗ್ಗೆ ಪ್ರಶ್ನೆ ಉದ್ಭವಿಸಿದೆ. ಕೆಎಸ್‌ಸಿಆರ್‌ ನಿಯಮದಡಿ ರಾಜ್ಯ ಸರ್ಕಾರ ಅಧಿಕಾರದಲ್ಲಿ ಮುಂದುವರಿಸಿ

ಇದನ್ನೂ ಓದಿ: ನೀರಾವರಿ ಯೋಜನೆ ಜಾರಿಗೆ ಬರಬೇಕು ಅಂದ್ರೆ ನಾಲ್ಕು ಸರ್ಕಾರ ಬದಲಾಗಬೇಕು: ಸಿಎಂ ಬಸವರಾಜ್ ಬೊಮ್ಮಾಯಿ ಇದನ್ನೂ ಓದಿ: ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಪಾವಗಡ ಬಳಿ ವಾಹನ ಉರುಳಿಬಿದ್ದು 8 ಜನರ ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

Published On - 6:28 pm, Sat, 19 March 22