AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಜಿಲ್ಲೆಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ: ಸರಿಯಾದ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Gadag News: ಅಕ್ಟೋಬರ 6 ರಂದು ಗದಗ ಜಿಲ್ಲೆಗೆ ನಾಲ್ಕು ಸದಸ್ಯರನ್ನೊಳಗೊಂಡ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಲಿದ್ದು, ಅವರಿಗೆ ಜಿಲ್ಲೆಯ ಬರ ಪರಿಸ್ಥತಿಯ ಕುರಿತು ಸರಿಯಾಗಿ ಮಾಹಿತಿ ಒದಗಿಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್. ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಾಳೆ ಜಿಲ್ಲೆಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ: ಸರಿಯಾದ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ
ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Oct 05, 2023 | 10:38 PM

Share

ಗದಗ, ಅಕ್ಟೋಬರ್​​ 05: ಜಿಲ್ಲೆಯ ಮುಂಡರಗಿ ತಾಲೂಕು ಹೊರತು ಪಡಿಸಿ ಉಳಿದ ಆರು ತಾಲೂಕುಗಳನ್ನು ಈಗಾಗಲೇ ರಾಜ್ಯ ಸರ್ಕಾರ ತೀವ್ರ ಬರ ಪೀಡಿತ ತಾಲೂಕುಗಳೆಂದು ಘೋಷಿಸಿದೆ. ಅಕ್ಟೋಬರ 6 ರಂದು ಗದಗ ಜಿಲ್ಲೆಗೆ ನಾಲ್ಕು ಸದಸ್ಯರನ್ನೊಳಗೊಂಡ ಕೇಂದ್ರ ಬರ ಅಧ್ಯಯನ ತಂಡ (Central drought study team) ಭೇಟಿ ನೀಡಲಿದ್ದು, ಅವರಿಗೆ ಜಿಲ್ಲೆಯ ಬರ ಪರಿಸ್ಥತಿಯ ಕುರಿತು ಸರಿಯಾಗಿ ಮಾಹಿತಿ ಒದಗಿಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್. ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಸಂಜೆ ಜಿಲ್ಲೆಗೆ ಕೇಂದ್ರ ಬರ ಅಧ್ಯಯನ ತಂಡ ಆಗಮಿಸುವ ಹಿನ್ನಲೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಬರ ಅಧ್ಯಯನ ತಂಡದ ಸದಸ್ಯರಿಗೆ ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ಮನವರಿಕೆ ಆಗುವಂತೆ ಸಂಬಂಧಿತ ಇಲಾಖೆ ಅಧಿಕಾರಿಗಳು ಸರಿಯಾಗಿ ವಿವರಣೆ ನೀಡಬೇಕು. ಯಾವುದೇ ಕಾರಣಕ್ಕೂ ಬರ ಅಧ್ಯಯನ ತಂಡದ ಸದಸ್ಯರು ಬಂದು ಹೋಗುವವರೆಗೆ ಶಿಷ್ಠಾಚಾರ ವ್ಯವಸ್ಥೆಯಲ್ಲಿ ಅವ್ಯವಸ್ಥೆ ಆಗದಂತೆ ನಿಗಾವಹಿಸಬೇಕು ಎಂದು ನಿರ್ದೇಶನ ನೀಡಿದರು.

ಇದನ್ನೂ ಓದಿ: Swachhta Hi Seva: ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಎಚ್​ಕೆ ಪಾಟೀಲ

ಜಿಲ್ಲೆಯ ಬರ ಪೀಡಿತ ತಾಲೂಕುಗಳ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಬರ ಅಧ್ಯಯನ ತಂಡವು ಶುಕ್ರವಾರ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಈ ತಂಡದ ಮುಖ್ಯಸ್ಥರಾಗಿ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಹೆಚ್ಚುವರಿ ಸಲಹೆಗಾರರಾದ ಡಿ.ರಾಜಶೇಖರ, ಸದಸ್ಯರುಗಳಾದ ಕೇಂದ್ರ ಪಶುಸಂಗೋಪನಾ ಇಲಾಖೆ ನಿರ್ದೇಶಕ ವ್ಹಿ.ಆರ್. ಠಾಕ್ರೆ, ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಾಯಕ ಆಯುಕ್ತ ಮೋತಿ ರಾಮ, ಹಾಗೂ ಕಂದಾಯ ಇಲಾಖೆಯ ರಾಜ್ಯ ವಿಪತ್ತು ನಿರ್ವಹಣೆಯ ನಿರ್ದೇಶಕರಾದ ಕರೀಗೌಡ ಅವರುಗಳ ನಾಲ್ಕು ಜನರ ಅಧ್ಯಯನ ತಂಡವು ಜಿಲ್ಲೆಗೆ ಭೇಟಿ ನೀಡಲಿದೆ ಎಂದರು.

ಜೂನ್ ನಿಂದ ಸೆಪ್ಟೆಂಬರ ವರೆಗೆ ನೈರುತ್ಯ ಮುಂಗಾರು ಮಳೆಯು ವಾಡಿಕೆ ಮಳೆ 372 ಮೀ.ಮೀ ಆಗಬೇಕಿತ್ತು ಆದರೆ ವಾಡಿಕೆ ಮಳೆ ಆಗದೇ ಇರುವದರಿಂದ ಬರಗಾಲ ಆವರಿಸಿದೆ. ಜಿಲ್ಲೆಯಲ್ಲಿ ಜೂನ ಮಾಹೆಯಲ್ಲಿ ಶೇ.54 ರಷ್ಟು ಹಾಗೂ ಅಗಸ್ಟನಲ್ಲಿ ಶೇ.62 ರಷ್ಟು ಮಳೆ ಕೊರತೆಯಾಗಿದ್ದು ಬರಗಾಲ ಸಂಪೂರ್ಣವಾಗಿ ಆವರಿಸುವಂತಾಗಿದೆ.

ಅಧಿಕಾರಿಗಳು ಕೇಂದ್ರ ಬರ ಅಧ್ಯಯನ ಅಧಿಕಾರಿಳಿಗೆ ತಮ್ಮ ಇಲಾಖೆಗೆ ಸಂಬಂಧಿಸಿದಂತೆ ನಿಖರವಾದ ಅಂಕಿ ಸಂಖ್ಯೆಗಳನ್ನು ದಾಖಲೆಗಳೊಂದಿಗೆ ವಸ್ತು ಸ್ಥಿತಿಯ ಕುರಿತು ಮನವರಿಗೆ ಮಾಡಿಕೊಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ದಿಢೀರ್ ಹರಿದ ಹೈವೋಲ್ಟೇಜ್ ವಿದ್ಯುತ್​ಗೆ 20 ಕ್ಕೂ ಹೆಚ್ಚು ಟಿವಿ, ಇನ್ನಿತರ ವಸ್ತುಗಳು ಬ್ಲಾಸ್ಟ್

ಬರ ಅಧ್ಯಯನ ತಂಡಕ್ಕೆ ಜಿಲ್ಲೆಯ ಕುಡಿಯುವ ನೀರಿನ ನಿರ್ವಹಣೆ, ಮೇವಿನ ಅಗತ್ಯತೆ, ಅಂತರ್ಜಲ ಮಟ್ಟ ಕುಸಿತದ ವಿವರ, ಬೆಳೆ ಹಾನಿ ವಿವರವನ್ನು ಅಂಕಿ ಸಂಖ್ಯೆ ಸಮೇತ ವಿವರಿಸುವ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಉಪವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ, ಜಿ.ಪಂ.ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ತೋಟಗಾರಿಕೆ ಉಪನಿರ್ದೇಶಕ ಶಶಿಕಾಂತ ಕೋಟಿಮನಿ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಎ.ಎ.ಕಂಬಾಳಿಮಠ, ಪಂಚಾಯತ ರಾಜ್ ಇಂಜಿನಿಯರಿಂಗ ವಿಭಾಗದ ಕಾರ್ಯಪಾಲಕ ಅಭಿಯಂತರ ಶಿವಾನಂದ ಗೌಡರ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಹುಲಗನ್ನವರ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಮಿತ ಬಿದರಿ, ಆಹಾರ ಇಲಾಖೆ ಉಪನಿರ್ದೇಶಕ ಗಂಗಪ್ಪ.ಎಂ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?