ಗೋವುಗಳ ಸಾಗಾಟ, ಅನ್ಯಕೋಮಿನ ವ್ಯಕ್ತಿಗೆ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಥಳಿತ ಆರೋಪ

ಅಕ್ರಮವಾಗಿ ಗೋವುಗಳ ಸಾಗಾಣೆ ಮಾಡುತ್ತಿದ್ದ ಎಂದು ಅನ್ಯಕೋಮಿನ ವ್ಯಕ್ತಿಗೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಥಳಿಸಿರುವ ಆರೋಪ ಕೇಳಿಬಂದಿದೆ. ನರಗುಂದ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಗೋವುಗಳ ಸಾಗಾಟ, ಅನ್ಯಕೋಮಿನ ವ್ಯಕ್ತಿಗೆ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಥಳಿತ ಆರೋಪ
ನರಗುಂದ ಪೊಲೀಸ್​ ಠಾಣೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 10, 2023 | 12:12 PM

ಗದಗ ಸೆ.10: ನರಗುಂದ (Naragund) ಪಟ್ಟಣದ ಹೊರವಲಯದಲ್ಲಿ ಅಕ್ರಮವಾಗಿ ಗೋವುಗಳ (Catteles) ಸಾಗಾಣೆ ಮಾಡುತ್ತಿದ್ದ ಎಂದು ಅನ್ಯಕೋಮಿನ ವ್ಯಕ್ತಿಗೆ ಹಿಂದೂಪರ ಸಂಘಟನೆ ಕಾರ್ಯಕರ್ತರು (Hindu Activists) ಥಳಿಸಿರುವ ಆರೋಪ ಕೇಳಿಬಂದಿದೆ. ಅಷ್ಫಾಕ್ ಬೇಪಾರಿ, ಮೊಹಮ್ಮದ್ ಗೌಸ್ ಬೇಪಾರಿ ಹಲ್ಲೆಗೊಳಗಾದವರು. ಬಸವರಾಜ ಮಮಟಗೇರಿ, ಮಲ್ಲಿಕಾರ್ಜುನ ಹಿರೇಮಠ, ಶರಣಪ್ಪ ಹಂಚಿನಾಳ, ಅಜಯ ಅಣ್ಣಿಗೇರಿ, ದೇವರಾಜು ಕಮ್ಮಾರ ಹಲ್ಲೆ ಮಾಡಿದ ಆರೋಪಿಗಳು. ವಾಹನ ಚಾಲಕ ಮೊಹಮ್ಮದ್ ಗೌಸ್​​ರಿಗೆ  ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ನರಗುಂದ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಮೊಹಮ್ಮದ್, ಅಷ್ಫಾಕ್ ಗದಗ ಜಾನುವಾರು ಸಂತೆಯಿಂದ ಎಮ್ಮೆ ಹೇರಿಕೊಂಡು ಟಾಟಾ ಏಸ್ ವಾಹನದಲ್ಲಿ  ನರಗುಂದಕ್ಕೆ ಬರುತ್ತಿದ್ದರು. ಈ ವೇಳೆ ಡಿಸೇಲ್ ಖಾಲಿಯಾಗಿದೆ ಎಂದು ನರಗುಂದ ಹೊರವಲಯದ ಕುರ್ಲಗೇರಿ ಬಳಿ ನಿಂತಿದ್ದಾಗ ಆರೋಪಿಗಳು ಹಲ್ಲೆ ಮಾಡಿದ್ದಾರೆ.  ಮೊಹಮ್ಮದ್ ಗೌಸ್ ಬೇಪಾರಿ ಎಂಬುವರಿನಿಗೆ ತಲೆ, ಹೊಟ್ಟೆ, ಎದೆಯ ಭಾಗಕ್ಕೆ ಗಾಯಗಳಾಗಿದೆ.  ನರಗುಂದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಇದನ್ನೂ ಓದಿ: ಗೋ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ, ಗುಳೇದಗುಡ್ಡ ಬಂದ್​​​

ಇನ್ನು ನರಗುಂದ ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ ಮಾಡಿದ್ದಾರೆ. ಇಬ್ಬರು ಡಿವೈಎಸ್​ಪಿ ನೇತೃತ್ವದಲ್ಲಿ ಎರಡು ಡಿಆರ್ ತುಕಡಿ ಸೇರಿದಂತೆ 150 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:33 am, Sun, 10 September 23

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ