AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ರಸ್ತೆ ಬದಿ ಜೀವಂತ ಶಿಶು ಪತ್ತೆ, ಕಂದಮ್ಮನ ರಕ್ಷಿಸಿದ ಶಿರಹಟ್ಟಿ ತಹಶೀಲ್ದಾರ್

ಮಗುವನ್ನು ಹೀಗೆ ರಸ್ತೆಬದಿ ಬಿಟ್ಟು ಹೋದವರ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಗದಗ: ರಸ್ತೆ ಬದಿ ಜೀವಂತ ಶಿಶು ಪತ್ತೆ, ಕಂದಮ್ಮನ ರಕ್ಷಿಸಿದ ಶಿರಹಟ್ಟಿ ತಹಶೀಲ್ದಾರ್
ಶಿರಹಟ್ಟಿ ಆಸ್ಪತ್ರೆಗೆ ತಹಶೀಲ್ದಾರ್ ಮಗುವನ್ನು ದಾಖಲಿಸಿದರು.Image Credit source: Tv9Kannada
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Nov 29, 2022 | 10:08 AM

Share

ಗದಗ: ಜಿಲ್ಲೆಯ ಶಿರಹಟ್ಟಿ ಪಟ್ಟಣದಲ್ಲಿ (Shirahatti Town) ಒಂದೂವರೆ ತಿಂಗಳ ಹಸುಗೂಸು (Child) ಪತ್ತೆಯಾಗಿದೆ. ಮಗುವಿನ ಜೊತೆಗಿದ್ದವರ ವರ್ತನೆಯಿಂದ ಅನುಮಾನಗೊಂಡ ಸ್ಥಳೀಯರು ತಹಶೀಲ್ದಾರ್​ಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ತಕ್ಷಣ ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಕಲ್ಲನಗೌಡ ಪಾಟೀಲ ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ಮಗುವನ್ನು ಹೀಗೆ ರಸ್ತೆಬದಿ ಬಿಟ್ಟು ಹೋದವರ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಘಟನೆ ಕುರಿತು ಆಸ್ಪತ್ರೆಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿವರಣೆ ನೀಡಿದ ತಹಶೀಲ್ದಾರ್ ಕಲ್ಲನಗೌಡ, ‘ಯಾರೋ ಪಾಪುವನ್ನು ಜೋಪಾನ ಮಾಡ್ತಿದ್ದಾರೆ ಎಂದು ಕೆಲವರು ಮಾಹಿತಿ ನೀಡಿದರು. ಅದರಂತೆ ನಾನು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದಾಗ ಅವರ ಬಳಿ ಮಗು ಇದ್ದುದು ಕಂಡುಬಂತು. ಅವರು ಇದನ್ನೂ ತಮ್ಮದೇ ಮಗು ಎಂದು ಹೇಳುತ್ತಿದ್ದರು. ಇದರ ಜೊತೆಗೆ ಇನ್ನೂ ಎರಡು ಮಕ್ಕಳಿದ್ದವು. ಅನುಮಾನ ಬಂದು ಮಗುವನ್ನು ಆಸ್ಪತ್ರೆಗೆ ಕರೆತಂದೆ. ಮಗುವನ್ನು ಮಹಿಳಾ ಮತ್ತು ಮಕ್ಕಳ ಇಲಾಖೆ ವಶಕ್ಕೆ ಕೊಡುತ್ತೇವೆ. ಮಗುವಿನ ತಾಯಿ ಪತ್ತೆಯಾಗಿದ್ದಾರೆ. ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ಆಗಿದೆ. ಅವರು ಬಂದ ನಂತರ ಮುಂದಿನ ಮಾಹಿತಿ ತಿಳಿಸುತ್ತೇವೆ’ ಎಂದು ಹೇಳಿದರು.

(ಮತ್ತಷ್ಟು ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ)

ಇದನ್ನೂ ಓದಿ: ರಟ್ಟಿನ ಬಾಕ್ಸ್​ನಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ; ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಸಾರ್ವಜನಿಕರಿಂದ ಆಕ್ರೋಶ

ಗದಗ ಜಿಲ್ಲೆಯ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 am, Tue, 29 November 22

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?