ಮೇಕೆದಾಟು ಯೋಜನೆ ವಿಷಯದಲ್ಲಿ ನಾವು ಬದ್ಧರಾಗಿದ್ದೇವೆ: ಬಸವರಾಜ ಬೊಮ್ಮಾಯಿ

Basavaraj Bommai: ಮೇಕೆದಾಟು ಯೋಜನೆ ವಿಷಯದಲ್ಲಿ ನಾವು ಬದ್ಧರಾಗಿದ್ದೇವೆ ಎಂದು ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಹಾಳಕೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಮೇಕೆದಾಟು ಯೋಜನೆ ವಿಷಯದಲ್ಲಿ ನಾವು ಬದ್ಧರಾಗಿದ್ದೇವೆ: ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Nov 10, 2021 | 12:00 AM

ಗದಗ: ಕಾಂಗ್ರೆಸ್‌ ರಾಜಕೀಯ ಬಿಟ್ಟು ಬೇರೇನು ಮಾಡಲು ಸಾಧ್ಯ? ಹಿಂದೆ ಕಾಂಗ್ರೆಸ್‌ನವರು ಪಾದಯಾತ್ರೆ ಮಾಡಿದ್ದರು. ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಅಂತ ಪಾದಯಾತ್ರೆ ಮಾಡಿ ಏನು ಮಾಡಿದ್ರು? ಹಿಂದೆ ಕರ್ನಾಟಕ ಪವರ್ ಕಾರ್ಪೊರೇಷನ್‌ನಿಂದ ಮೇಕೆದಾಟು ಯೋಜನೆ ಬಗ್ಗೆ ಡಿಪಿಆರ್ ತಯಾರಿಸಿತ್ತು. ಅದನ್ನ ರದ್ದುಗೊಳಿಸಿ 4-5 ವರ್ಷ ಕಾಲಹರಣ ಮಾಡಿದ್ರು. ಮೇಕೆದಾಟು ಯೋಜನೆ ವಿಷಯದಲ್ಲಿ ನಾವು ಬದ್ಧರಾಗಿದ್ದೇವೆ ಎಂದು ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಹಾಳಕೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಮೇಕೆದಾಟು ಯೋಜನೆಯ ಕಾಮಗಾರಿ ವಿಳಂಬ ಹಿನ್ನೆಲೆ ಕಾಂಗ್ರೆಸ್ ಟೀಕೆ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ‌ ಕಿಡಿಕಾರಿದ್ದಾರೆ.

ವಿಧಾನಪರಿಷತ್ ಚುನಾವಣೆ ಘೋಷಣೆಯಾದ ಹಿನ್ನೆಲೆ ಸಂಜೆ ಬೆಂಗಳೂರಿನಲ್ಲಿ ಕೋರ್ ಕಮೀಟಿ ಸಭೆ ಇದೆ. ಈಗಾಗಲೇ ಎಲ್ಲ ಜಿಲ್ಲೆಗಳಲ್ಲಿ ಸಭೆ ಮಾಡಲಾಗಿದೆ. ವಿಧಾನಪರಿಷತ್ ಚುನಾವಣೆ ಯಾವ ರೀತಿ ಎದುರಿಸಬೇಕು, ಅಭ್ಯರ್ಥಿ ಆಯ್ಕೆ ಯಾವ ರೀತಿ ಇರಬೇಕು ಎಂದು ಚರ್ಚೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಕೋರ್ ಕಮಿಟಿ ಸಭೆಯ ನಂತರ ಸಿಎಂ ಬೊಮ್ಮಾಯಿ ಹೇಳಿದ್ದೇನು? 25 ಸ್ಥಳೀಯ ಸಂಸ್ಥೆಗಳ ಎಂಎಲ್​​ಸಿ ಅಭ್ಯರ್ಥಿಗಳ ಆಯ್ಕೆ ಹಾಗೂ 4 ಪದವೀಧರ & ಶಿಕ್ಷಕರ ಕ್ಷೇತ್ರಗಳ ಬಗ್ಗೆ ಚರ್ಚೆ ಆಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ರಾಜ್ಯ ಬಿಜೆಪಿ ಕಚೇರಿಯಲ್ಲಿ ಕೋರ್​​ ಕಮಿಟಿ ಸಭೆ ಬಳಿಕ ಅವರು ಮಾತನಾಡಿದ್ದಾರೆ. 2 ದಿನದಲ್ಲಿ ಚರ್ಚೆ ಮಾಡಿ ಪಟ್ಟಿ ಅಂತಿಮಗೊಳಿಸುತ್ತೇವೆ. ಎಲ್ಲಾ ಕ್ಷೇತ್ರದಲ್ಲಿ ಎರಡು ಮೂರು ಹೆಸರುಗಳು ಬಂದಿದೆ. ಅವೆಲ್ಲವನ್ನೂ ಪರಿಷ್ಕರಿಸಿ ನಿರ್ಧಾರ ಮಾಡುತ್ತೇವೆ. ರಾಜ್ಯ ಪ್ರವಾಸ ಆರಂಭವಾಗಲಿದೆ. ಜಿಲ್ಲೆಗಳಲ್ಲಿ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ನಂತರ ಈ ಬಗ್ಗೆ ಪಕ್ಷದ ಅಧ್ಯಕ್ಷರು ತೀರ್ಮಾನ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಬೇರೆ ಪಕ್ಷದಿಂದ ಬಂದವರಿಗೆ ಟಿಕೆಟ್ ನೀಡುವ ಬಗ್ಗೆ ಮಾತನಾಡಿದ ಅವರು, ಆ ಬಗ್ಗೆ ತೀರ್ಮಾನವಾಗಿಲ್ಲ ಎಂದಿದ್ದಾರೆ. ಸಂದೇಶ್ ನಾಗರಾಜ್, ಸಿ.ಆರ್. ಮನೋಹರ್ ಬಿಜೆಪಿ ಸೇರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಸಭೆಯಲ್ಲಿ ಚರ್ಚೆ ಆಗಿದೆ ಅಷ್ಟೇ. ಆದರೆ ಈ ಬಗ್ಗೆ ಯಾವುದೇ ಅಂತಿಮ ನಿರ್ಧಾರ ಆಗಿಲ್ಲ ಎಂದು ಹೇಳಿದ್ದಾರೆ. ಜನಸ್ವರಾಜ್ ಯಾತ್ರೆಯ ದಿನಾಂಕವನ್ನು ಬದಲಿಸಿರುವ ಕುರಿತು ಸಿಎಂ ಮಾಹಿತಿ ನೀಡಿದ್ದು, ಒಂದು ದಿನ ಮೊದಲೇ ಜನಸ್ವರಾಜ್ ಯಾತ್ರೆಗೆ ನಿರ್ಧಾರ ಮಾಡಲಾಗಿದ್ದು, ನ.19ರ ಬದಲು ನ.18ರಿಂದಲೇ ಜನಸ್ವರಾಜ್ ಯಾತ್ರೆ ಪ್ರಾರಂಭಿಸಲು ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ನಿರ್ಧರಿಸಿಲಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳು ಗೆಲ್ಲಲು ಪರಿಶ್ರಮ ಪಡಬೇಕು ಪ್ರಚಲಿತ ವಿದ್ಯಮಾನ ಹಾಗೂ ಮುಂಬರುವ ಚುನಾವಣೆ ಬಳಿಕ ಚರ್ಚೆ ಮಾಡಲಾಗಿದೆ. ಸಭೆ ಮುಗಿದ ಬಳಿಕ ಚುನಾವಣೆ ಘೋಷಣೆಯಾಗಿದೆ. ಉಪ ಚುನಾವಣೆಯಲ್ಲಿ ಕೆಲಸ ಮಾಡಿದವರಿಗೆ ಧನ್ಯವಾದಗಳು ಹೇಳಲಾಗಿದೆ. ಸಂಘಟನಾತ್ಮಕ ಚಟುವಟಿಕೆ ಮಾಹಿತಿ ಮತ್ತು ವರದಿ ಸ್ವೀಕರಿಸಲಾಗಿದೆ. ರಾಜ್ಯಾದ್ಯಂತ ಪಕ್ಷದ ಚಟುವಟಿಕೆ ಬಗ್ಗೆ ಸಮಗ್ರ ಚರ್ಚೆ ಮಾಡಲಾಗಿದೆ. ಜನಸ್ವರಾಜ್ ಯಾತ್ರೆ ಇದ್ದು, ನಾಲ್ಕು ತಂಡ ಬೇರೆ ಬೇರೆ ಕಡೆ ಪ್ರವಾಸ ಮಾಡಲಿದೆ. ಚುನಾವಣೆ ಘೋಷಣೆ ಬಳಿಕ, ನಾಲ್ಕು ದಿನಗಳ ವಿಸ್ತೃತ ಪ್ರವಾಸ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಕಚೇರಿಯಲ್ಲಿ ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಕ್ಯಾ. ಗಣೇಶ್ ಕಾರ್ಣಿಕ್ ಸುದ್ದಿಗೋಷ್ಟಿ ನಡೆಸಿ ತಿಳಿಸಿದ್ದಾರೆ.

ಇದರ ಯಶಸ್ಸಿಗೆ ಮಂಡಲ ತಂಡ ತೊಡಗಿಸಿಕೊಳ್ಳಬೇಕು. ನಾಮಫಲಕ ಅನಾವರಣ, ಬೂತ್ ಮಟ್ಟದ ಕಾರ್ಯಕ್ರಮ, ಸೇವಾ ಹೀ ಸಂಘಟನ್ ಕಾರ್ಯಕ್ರಮ ಮುಂದುವರೆಸಲು ಸೂಚಿಸಲಾಗಿದೆ. ರಾಷ್ಟ್ರ ಮಟ್ಟದಲ್ಲಿ ಕಮಲ ಪುಷ್ಪ ಹೆಸರಿನಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ. ರಾಜ್ಯದಲ್ಲಿ ಕಾರ್ಯಕರ್ತರನ್ನು ಗುರುತಿಸಿಕೊಂಡು ತಂಡ ರೂಪಿಸಲಾಗಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ಶೇ.90ರಷ್ಟು ಬಿಜೆಪಿ ಅಭ್ಯರ್ಥಿಗಳು ಗೆಲ್ಲಲು ಪರಿಶ್ರಮ ಪಡಬೇಕು ಅಂತ ನಿರ್ಧಾರ ಮಾಡಲಾಗಿದೆ ಎಂದು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮುಂದಿನ ಬಿಜೆಪಿ ರಾಜ್ಯ ಕಾರ್ಯಕಾರಿಣಿ ನಡೆಯಲಿದೆ. ಡಿಸೆಂಬರ್ 18, 19ರಂದು ಮುಂದಿನ ಕಾರ್ಯಕಾರಿಣಿ ನಡೆಯಲಿದೆ ಎಂದು ಪದಾಧಿಕಾರಿಗಳ ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ಬಳಿಕ ಈ ಬಗ್ಗೆ ಮಾಹಿತಿ ನೀಡಲಾಗಿದೆ.

ಬಿಬಿಎಂಪಿ ಚುನಾವಣೆಗೆ ಬಿಜೆಪಿಯಿಂದ ಭರದ ಸಿದ್ಧತೆ ನಡೆಸಲಾಗಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್​ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸಂತೋಷ್​, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ರಾಜ್ಯಾಧ್ಯಕ್ಷ ಕಟೀಲು, ಕರ್ನಾಟಕ ರಾಜ್ಯ ಬಿಜೆಪಿ ಸಹ ಉಸ್ತುವಾರಿ ಡಿ.ಕೆ.ಅರುಣಾ, ಸಚಿವರಾದ ವಿ.ಸೋಮಣ್ಣ, ಎಂಟಿಬಿ ನಾಗರಾಜ್, ಸಂಸದರು, ಶಾಸಕರಾದ ಎಸ್.ಸುರೇಶ್ ಕುಮಾರ್, ಎಸ್.ರಘು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಈಗ ಕಲಬೆರಕೆ ಪಕ್ಷ; ಒರಿಜಿನಲ್ ಬಿಜೆಪಿ ಆಗಿ ಉಳಿದಿಲ್ಲ: ಪ್ರಮೋದ್ ಮುತಾಲಿಕ್

ಇದನ್ನೂ ಓದಿ: Rafale deal ರಾಹುಲ್ ಗಾಂಧಿ ಉತ್ತರಿಸಲಿ: ಹೊಸ ರಫೇಲ್ ವರದಿ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

Published On - 5:22 pm, Tue, 9 November 21

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ