AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಮತ ಹಾಕದಂತೆ ಆಣೆ, ಪ್ರಮಾಣ ಆರೋಪ: ನೀತಿ ಸಂಹಿತೆ ಉಲ್ಲಂಘಣೆ ಅಡಿ ಸ್ವಾಮೀಜಿ ವಿರುದ್ಧ ದೂರು ದಾಖಲು

ಲಕ್ಷ್ಮೇಶ್ವರ ತಾಲೂಕಿನ ಆದ್ರಳ್ಳಿಯ ಲಂಬಾಣಿ ಸಮುದಾಯದ ಶ್ರೀ ಕುಮಾರ ಮಹಾರಾಜ ಸ್ವಾಮೀಜಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪದಡಿ ಅವರ ಮೇಲೆ ಗುರುವಾರ ಪ್ರಕರಣ ದಾಖಲಿಸಲಾಗಿದೆ.

ಬಿಜೆಪಿಗೆ ಮತ ಹಾಕದಂತೆ ಆಣೆ, ಪ್ರಮಾಣ ಆರೋಪ: ನೀತಿ ಸಂಹಿತೆ ಉಲ್ಲಂಘಣೆ ಅಡಿ ಸ್ವಾಮೀಜಿ ವಿರುದ್ಧ ದೂರು ದಾಖಲು
ಶ್ರೀ ಕುಮಾರ ಮಹಾರಾಜ ಸ್ವಾಮೀಜಿ
ಗಂಗಾಧರ​ ಬ. ಸಾಬೋಜಿ
|

Updated on:Apr 13, 2023 | 10:19 PM

Share

ಗದಗ: ಲಕ್ಷ್ಮೇಶ್ವರ ತಾಲೂಕಿನ ಆದ್ರಳ್ಳಿಯ ಲಂಬಾಣಿ ಸಮುದಾಯದ ಶ್ರೀ ಕುಮಾರ ಮಹಾರಾಜ ಸ್ವಾಮೀಜಿ ಚುನಾವಣಾ ನೀತಿ ಸಂಹಿತೆ (model code of conduct) ಉಲ್ಲಂಘಿಸಿದ್ದಾರೆ ಎಂಬ ಆರೋಪದಡಿ ಅವರ ಮೇಲೆ ಗುರುವಾರ ಪ್ರಕರಣ ದಾಖಲಿಸಲಾಗಿದೆ. ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ಒಳ ಮೀಸಲಾತಿಯಿಂದ ಸಮಾಜಕ್ಕೆ ಅನ್ಯಾಯವಾಗಿದ್ದು, ಮುಂಬರುವ ಚುನಾವಣೆಯಲ್ಲಿ ಲಂಬಾಣಿ ಸಮಾಜದ ಯಾರೊಬ್ಬರೂ ಬಿಜೆಪಿಗೆ ಮತ ಹಾಕದಂತೆ ಸ್ವಾಮೀಜಿಯವರು ಬಹಿರಂಗ ಸಭೆಯಲ್ಲಿ ಲಂಬಾಣಿ ಸಮಾಜ ಬಾಂಧವರಿಂದ ಆಣೆ-ಪ್ರಮಾಣ ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಒಳ ಮೀಸಲಾತಿಯಿಂದ ಕಿಚ್ಚಿಗೆ ತುಪ್ಪ ಸವರಿದಂತಾಗಿದೆ. ಒಳಮೀಸಲಾತಿ ಆದೇಶ ವಿರೋಧಿಸಿ ಶಿರಹಟ್ಟಿ ಮತಕ್ಷೇತ್ರದ ಲಂಬಾಣಿ, ಕೊರಚ, ಕೊರಮ, ಜತೆಗೆ ಮುಸ್ಲಿಂ ಜನಾಂಗದವರನ್ನು ಒಳಗೊಂಡು ಲಕ್ಷ್ಮೇಶ್ವರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸುವ ಸಮಾಜದ ನಿರ್ಧಾರವನ್ನು ಜನಾಂಗದವರಿಗೆ ತಿಳಿಸುವ ವೇಳೆ ಸ್ವಾಮೀಜಿ ಈ ರೀತಿ ಹೇಳಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಕುರಿತು ಫ್ಲೈಯಿಂಗ್ ಸ್ಕ್ವಾಡ್ ಆಗಿರುವ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರಾದ ಮಾರುತಿ ರಾಠೋಡ್ ಅವರು, ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದು, 0048/2023-ಕಲಂ-295, 171-ಸಿ, ಐಪಿಸಿ ಮತ್ತು ಜನ ಪ್ರಾತಿನಿಧ್ಯ ಕಾಯ್ದೆ-1951 u/s-125(2) ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಚುನಾವಣೆಯಲ್ಲಿ ಒಳ ಮೀಸಲಾತಿ ಕಿಚ್ಚು; ಬಿಜೆಪಿಗೆ ಮತ ಹಾಕದಂತೆ ಪ್ರಮಾಣ ಮಾಡಿಸಿದ ಸ್ವಾಮೀಜಿ

ನಾಳೆ ತಹಶೀಲ್ದಾರಗೆ ಮನವಿ ಸಲ್ಲಿಸಲು ಮುಂದಾದ ಸ್ವಾಮೀಜಿ 

ಗವಿಮಠದ ಶ್ರೀ ಕುಮಾರ ಮಹಾರಾಜ ಸ್ವಾಮೀಜಿಯವರು ಒಳ ಮೀಸಲಾತಿ ವಿರೋಧಿಸಿ ಏ.14 ರಂದು ಲಕ್ಷ್ಮೇಶ್ವರ ಪಟ್ಟಣದಲ್ಲಿ ಪ್ರತಿಭಟನೆಗೆ ಯೋಜನೆ ರೂಪಿಸಿದ್ದರು. ನಾಳೆ ತಹಶೀಲ್ದಾರ ಅವರಿಗೆ ಮನವಿ ಸಲ್ಲಿಸುತ್ತೇವೆ, ಎಲ್ಲರೂ ಬನ್ನಿ, ಇದು ನಮ್ಮ ಮಕ್ಕಳ ಭವಿಷ್ಯ, ನಮ್ಮನ್ನ ಎಸ್ಸಿ ಪಟ್ಟಿಯಿಂದ ತೆಗೆದರೆ ಮುಂದಿನ ದಿನಗಳಲ್ಲಿ ಬಾರಿ ತೊಂದರೆಯಾಗುತ್ತದೆ. ಹಾಗಾಗಿ ನಾವು ಇವಾಗ ಹೋರಾಡಬೇಕಿದೆ. ನಮ್ಮನ್ನ ಹೊರಗಿಟ್ಟ ಬಿಜೆಪಿಗೆ ಮಾತ್ರ ನಮ್ಮ ಮತ ಹಾಕಬಾರದು ಎಂದು ಆದರಹಳ್ಳಿ ಗ್ರಾಮಸ್ಥರಿಂದ ಸ್ವಾಮೀಜಿಯವರು ಸೇವಾಲಾಲ, ಸಿದ್ದರಾಮೇಶ್ವರ‌ ಮೇಲೆ ಆಣೆ ಪ್ರಮಾಣ‌ ಮಾಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:19 pm, Thu, 13 April 23