ಗದಗ: ಪ್ರಧಾನಿ ಮೋದಿ ಫೋಟೋ ಸ್ಟೇಟಸ್ ಇಟ್ಟಿದ್ದಕ್ಕೆ ಯುವಕನ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ

ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ಸ್ಟೇಟಸ್ ಇಟ್ಟಿದ್ದಕ್ಕೆ ಯುವಕನೋರ್ವನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿರುವ ಘಟನೆ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ನಡೆದಿದೆ.

ಗದಗ: ಪ್ರಧಾನಿ ಮೋದಿ ಫೋಟೋ ಸ್ಟೇಟಸ್ ಇಟ್ಟಿದ್ದಕ್ಕೆ ಯುವಕನ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ
ಹಲ್ಲೆಗೊಳಗಾದವರು
Follow us
ವಿವೇಕ ಬಿರಾದಾರ
|

Updated on:Mar 20, 2023 | 7:05 AM

ಗದಗ: ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು (PM Narendra Modi Photo) ಸ್ಟೇಟಸ್ ಇಟ್ಟಿದ್ದಕ್ಕೆ ಯುವಕನೋರ್ವನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು (Congress Activist) ಹಲ್ಲೆ ಮಾಡಿರುವ ಘಟನೆ ಗದಗ (Gadag) ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ ಪೂಜಾರ (33) ಹಲ್ಲೆಗೊಳಗಾದ ಯುವಕ. ಕಾಂಗ್ರೆಸ್​ ಕಾರ್ಯಕರ್ತರಾದ ಮಲ್ಲರಡ್ಡಿ ಅಗಸನಕೊಪ್ಪ, ಶ್ರೀನಿವಾಸ ಅಗಸನಕೊಪ್ಪ ಮತ್ತು ಹಲವರ ವಿರುದ್ಧ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಕಾರ್ಯಕರ್ತರು, ರಾಘವೇಂದ್ರ ಪೂಜಾರ ಅವರ ಮನೆಗೆ ನುಗ್ಗಿ, ಪ್ರಧಾನಿ ಮೋದಿಯವರ ಭಾವಚಿತ್ರ ಸ್ಟೇಟಸ್ ಇಡ್ತೀಯಾ, ಮೋದಿ ಪೋಸ್ಟ್​ಗೆ ಲೈಕ್‌ ಕೋಡ್ತಿಯಾ ಅಂತ ಹಲ್ಲೆ ಮಾಡಿದ್ದಾರೆಂದು ಆರೋಪ ವ್ಯಕ್ತವಾಗಿದೆ.

ಇದನ್ನೂ ಓದಿ:  ಬಿಜೆಪಿ, ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ: ಗೋವಿಂದರಾಜನಗರ ಠಾಣೆಯಲ್ಲಿ 3 ಪ್ರತ್ಯೇಕ ಪ್ರಕರಣ ದಾಖಲು

ಕಾರ್ಯಕರ್ತರು ಥರ್ಮಕೋಲ್ ಕಟರ್, ಕಲ್ಲು ಸಮೇತ ಬಂದು ಹಲ್ಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಹಲ್ಲೆ ವಿಷಯ ತಿಳಿಯುತ್ತಿದ್ದಂತೆ ಬಿಜೆಪಿ (BJP) ಟಿಕೆಟ್ ಆಕಾಂಕ್ಷಿ ರಾಜು ಕುರುಡಗಿ ಹಾಗೂ ಕಾರ್ಯಕರ್ತರು ಪೊಲೀಸ್ ಠಾಣೆಗೆ ತೆರಳಿ ಕೂಡಲೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಕ್ಕೆ ಮನೆಯ ಕಾಂಪೌಂಡ್ ಧ್ವಂಸ ಮಾಡಿಸಿದ ಬಿಜೆಪಿ ಮುಖಂಡ

ನೆಲಮಂಗಲ: ನೆಲಮಂಗಲದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದಕ್ಕೆ ಬಿಜೆಪಿ ಮುಖಂಡ (BJP Leader), ಕಾಂಗ್ರೆಸ್​ ಕಾರ್ಯಕರ್ತನ ​ಮನೆ ಕಾಂಪೌಂಡ್​ ಧ್ವಂಸಗೊಳಿದ್ದ ಘಟನೆ ನಿನ್ನೆ (ಮಾ.19) ರಂದು  ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿತ್ತು. ನವೀನ್ ಎಂಬುವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಇದರಿಂದ ಕೋಪಗೊಂಡ ​ಮಾಚೋಹಳ್ಳಿ ಬಿಜೆಪಿ ಮುಖಂಡ, ಜಿಲ್ಲಾ ಪಂಚಾಯತ್​ ಮಾಜಿ ಸದಸ್ಯ ಉಮೇಶ್,​ ಜೆಸಿಬಿ ಮೂಲಕ ನವೀನ್ ಅವರ ಮನೆಯ ಕಂಪೌಂಡ್ ಒಡೆದು ಹಾಕಿದ್ದರು.

ಇದನ್ನು ನವೀನ್​ ತಾಯಿ ರಂಗಮ್ಮ ಪ್ರಶ್ನಿಸಿದ್ದಕ್ಕೆ ಬಿಜೆಪಿ ಮುಖಂಡ ಉಮೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದರು. ನವೀನ್ 3 ದಿನಗಳ ಹಿಂದೆ ಕಾಂಪೌಂಡ್​ ನಿರ್ಮಿಸಿದ್ದರು. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:59 am, Mon, 20 March 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ