ಗದಗ: ರೋಣ ಜಿಗಳೂರು ಕ್ರಾಸ್ ಬಳಿ ಕ್ರೂಸರ್-ಲಾರಿ ಭೀಕರ ಅಪಘಾತ, ಮೂವರು ಸಾವು

ಗದಗ ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಲಾರಿ ಹಾಗೂ ಕ್ರೂಸರ್ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ರೋಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗದಗ: ರೋಣ ಜಿಗಳೂರು ಕ್ರಾಸ್ ಬಳಿ ಕ್ರೂಸರ್-ಲಾರಿ ಭೀಕರ ಅಪಘಾತ, ಮೂವರು ಸಾವು
ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿರುವುದು
Image Credit source: tv9
Edited By:

Updated on: Feb 05, 2026 | 9:59 AM

ಗದಗ, ಫೆಬ್ರವರಿ 5: ಕ್ರೂಸರ್ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಗದಗ (Gadag) ಜಿಲ್ಲೆಯ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ನಡೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಜೇಂದ್ರಗಡದ ಶಿವಾಜಿ ನಗರ ನಿವಾಸಿಗಳಾದ ಕೂಲಿ ಕಾರ್ಮಿಕರು ಕ್ರೂಸರ್ ವಾಹನದಲ್ಲಿ ಕೆಲಸಕ್ಕಾಗಿ ರೋಣ ಕಡೆಗೆ ತೆರಳುತ್ತಿದ್ದ ವೇಳೆ ಲಾರಿ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಪಘಾತದ ಸ್ಥಳಕ್ಕೆ ರೋಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ಸ್ಥಳಕ್ಕೆ ಗದಗ ಎಸ್ಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ, ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರು ಜನ ಕಾರ್ಮಿಕರಿಗೆ ಕೈ, ಕಾಲು ಮುರಿತವಾಗಿದ್ದು, ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾರೆ. ಗಾಯಾಳುಗಳ ಸ್ಥಿತಿ ಕಂಡು ಸಂಬಂಧಿಕರು ಕಣ್ಣೀರು ಹಾಕುವಂತಾಗಿದೆ.

ಗಾಯಾಳುಗಳ ಪೈಕಿ ನಾಗಮ್ಮ ಜಾಧವ್ ಕಾಲು , ತೊಡೆ ಮುರಿತವಾಗಿದ್ದರೆ, ಶಶಿಕಲಾ ಮರಾಠೆ ಕೈ ಮುರಿದಿದೆ. ಲಕ್ಷ್ಮವ್ವ ಹಾಲಕೇರಿ ಅವರ ಕಾಲು ಮುರಿದಿದೆ. ಲಕ್ಷ್ಮೀ ನಾಗಪ್ಪ ಹಾಲಕೇರಿ ಸೇರಿ 15 ಜನರ ತಲೆ, ಕೈ ತಲೆಗೆ ಗಂಭೀರ ಗಾಯಗಳಾಗಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:33 am, Thu, 5 February 26

ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us