ಡೇಂಜರ್ ಕಾಲೇಜು, ಪರ್ಯಾಯ ಕಟ್ಟಡದ ವ್ಯವಸ್ಥೆಗೆ ಕ್ರಮ: ಗದಗ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೇಳಿಕೆ
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೇಲ್ಛಾವಣಿ ಕುಸಿಯುತ್ತಿರುವ ಬಗ್ಗೆ ಹೇಳಿಕೆ ನೀಡಿದ ಗದಗ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶ ಎಂ.ಎಂ ಕಾಂಬಳೆ,
ಗದಗ: ಜಿಲ್ಲೆಯ ರೋಣ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೇಲ್ಛಾವಣಿ ಕುಸಿಯುತ್ತಿದ್ದು, ಈ ಬಗ್ಗೆ ಸುದ್ದಿವಾಹಿನಿಯಲ್ಲಿ ವರದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಗದಗ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶ ಎಂ.ಎಂ ಕಾಂಬಳೆ ಅವರು ಹೇಳಿಕೆ ನೀಡಿದ್ದು, ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾಗಿ ಹಾಗೂ ಕೊಠಡಿಗಳ ನಿರ್ಮಾಣಕ್ಕೆ ಮಂಜೂರಾತಿ ನೀಡುವಂತೆ ಮನವಿ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: ಕುಸಿಯುತ್ತಿರುವ ಗದಗ ಜಿಲ್ಲೆ ಸರ್ಕಾರಿ ಪದವಿ ಪೂರ್ವ ಕಾಲೇಜ್ ಮೇಲ್ಛಾವಣಿ: ಭಯದ ನಡುವೆ ಉಪನ್ಯಾಸಕರ ಪಾಠ
ನೆಲ ಕುಸಿಯುತ್ತಿದೆ. ಮೇಲ್ಛಾವಣಿ ಉದುರುತ್ತಿದೆ. ಕಾಲೇಜು ಬಹಳ ಅಪಾಯದಲ್ಲಿ ಇದೆ. ವಿದ್ಯಾರ್ಥಿಗಳು ಪಾಠ ಕೇಳುವಾಗ ಹಾಗೂ ಉಪನ್ಯಾಸಕರು ಪಾಠ ಮಾಡುವಾಗ ಮೇಲ್ಛಾವಣಿ ಉದುರುತ್ತಿದೆ. ಇದರಿಂದ ಅನಾಹುತ ಆಗುವ ಸಂಭವ ಇದೆ. ನನ್ನ ಗಮನಕ್ಕೆ ಬಂದ ತಕ್ಷಣ ಭೇಟಿ ನೀಡಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಈ ಬಗ್ಗೆ ನಾನು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಜನವರಿ 29, 2022 ರಂದೇ ಪತ್ರ ಬರೆದಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.
ಕಟ್ಟಡ ಬಹಳ ಸಿಥಿಲಗೊಂಡಿದೆ. ಅಪಯದ ಮಟ್ಟದಲ್ಲಿ ಇದ್ದು, ಕುಸಿಯುವ ಹಂತದಲ್ಲಿ ಇದೆ. ಹೀಗಾಗಿ 10 ಕೊಠಡಿಗಳ ನಿರ್ಮಾಣಕ್ಕೆ ಮಂಜೂರು ಮಾಡುವಂತೆ ಪತ್ರದಲ್ಲಿ ಮನವಿ ಮಾಡಿದ್ದೇನೆ. ಬಹಳ ಡೇಂಜರ್ ಸ್ಥಿತಿಯಲ್ಲಿ ಕಾಲೇಜ್ ಕಟ್ಟಡವಿದೆ. ರೋಣ ಶಾಸಕ ಕಳಕಪ್ಪ ಬಂಡಿ ಅವರು ಕೂಡ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಪತ್ರ ಬರೆದಿದ್ದಾರೆ. ಕಟ್ಟಡ ಸಂಪೂರ್ಣ ನೆಲಸಮ ಮಾಡಿ ಹೊಸ ಕಟ್ಟಡಕ್ಕೆ ಮನವಿ ಮಾಡಿದ್ದಾರೆ. ಸದ್ಯ ಪರ್ಯಾಯ ಕಟ್ಟಡ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕಾಲೇಜಿಗೆ ಹೊಸದಾಗಿ ದಾಖಲಾಗಲು ಬಂದ ವಿದ್ಯಾರ್ಥಿಗಳು ಕಾಲೇಜು ಕಟ್ಟಡ ನೋಡಿ ದಂಗಾಗಿದ್ದಾರೆ. ಎಪ್ಪಾ ಇಂಥಾ ಕಟ್ಟಡದಲ್ಲಿ ಕಲಿಯಬೇಕಾ ಅಂತ ಆತಂಕ ವ್ಯಕ್ತಪಡಿಸಿದ್ದಾರೆ. TV9 ಜೊತೆ ಮಾತನಾಡಿದ ವಿದ್ಯಾರ್ಥಿಗಳು ಸಿಎಂ ಸರ್ ಬಡ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಳಜಿ ತೋರಿಸಿ ಎಂದು ಮನವಿ ಮಾಡಿಕೊಂಡಿದ್ದರು. ಅಪಾಯಕಾರಿ ಕಾಲೇಜ್ ಕಟ್ಟಡದ ಚಿತ್ರಣ, ವಿಡಿಯೋ ಸಮೇತ ಪತ್ರ ಬರೆದರೂ ಸಿಎಂ ಮತ್ತು ಸಚಿವರು, ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ ಅಂತ ವಿದ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ