ಗದಗ-ಬೆಟಗೇರಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ತಕ್ಷಣವೇ ನೀರು ಪೂರೈಸುವಂತೆ ಸಚಿವ ಎಚ್​ಕೆ ಪಾಟೀಲ ಖಡಕ್ ಸೂಚನೆ

ಗದಗ-ಬೆಟಗೇರಿ ಅವಳಿ ನಗರದಲ್ಲಿ ಕುಡಿಯುವ ನೀರಿಗಾಗಿ ಸಾರ್ವಜನಿಕರು ಪರದಾಟುವಂತಹ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ತಕ್ಷಣವೇ ನಾಳೆಯಿಂದಲೇ ಅವಳಿ ನಗರದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಿ ಎಂದು ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ ತಾಕೀತು ಮಾಡಿದ್ದಾರೆ.

ಗದಗ-ಬೆಟಗೇರಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ತಕ್ಷಣವೇ ನೀರು ಪೂರೈಸುವಂತೆ ಸಚಿವ ಎಚ್​ಕೆ ಪಾಟೀಲ ಖಡಕ್ ಸೂಚನೆ
ಸಚಿವ ಎಚ್ ಕೆ ಪಾಟೀಲ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jul 01, 2023 | 7:46 PM

ಗದಗ: ಕಳೆದ ಹಲವು ತಿಂಗಳಿಂದ ಗದಗ-ಬೆಟಗೇರಿ ಅವಳಿ ನಗರದಲ್ಲಿ ಕುಡಿಯುವ ನೀರಿಗಾಗಿ ಸಾರ್ವಜನಿಕರ ಪಟ್ಟ ಪರಿಪಾಟಲು ಅಷ್ಟಿಷ್ಟಲ್ಲ. ನಿತ್ಯವೂ ಕುಡಿಯುವ ನೀರಿಗಾಗಿ ರಸ್ತೆಗೆ ಇಳಿದು ಹೋರಾಟ ಮಾಡಿದರೂ ನಗರಸಭೆ ಆಡಳಿತ ಸ್ಪಂದಿಸರಲಿಲ್ಲ. ತಕ್ಷಣವೇ ನಾಳೆಯಿಂದಲೇ ಅವಳಿ ನಗರದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಿ ಎಂದು ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ (HK Patil) ತಾಕೀತು ಮಾಡಿದ್ದಾರೆ. ಎರಡು ಹೆಲ್ಪ್ ಲೈನ್ ನಂಬರ್ ಮಾಡಿ, ಯಾರಿಗೆ ನೀರು ಬೇಕಾಗಿರುತ್ತದೆ ಅವರು ಫೋನ್ ಮಾಡಿದ ತಕ್ಷಣ ಆ‌ ವಾರ್ಡ್​ಗೆ ನೀರು ಪೂರೈಕೆ ಮಾಡಿ ಎಂದು ಸೂಚಿಸಿದರು.

ಇಂದು ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರ, ನಗರಸಭೆ ಆಯುಕ್ತರನ್ನು ತರಾಟೆಗೆ ತೆಗೆದುಕೊಂಡರು. ಕೆಡಿಪಿ ಸಭೆಯಲ್ಲಿ ವಾರಕ್ಕೊಮ್ಮೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತದೆ ಎಂದು ನಗರಸಭೆ ಆಯುಕ್ತ ರಮೇಶ್ ಸುಣಗಾರ ಮಾಹಿತಿ ನೀಡಿದರು.

ಇದರಿಂದ ಆಕ್ರೋಶಗೊಂಡ ಸಂಕನೂರ, ಸಭೆಯಲ್ಲಿ ಸುಳ್ಳು ಮಾಹಿತಿ ನೀಡಬೇಡಿ, ಅವಳಿ ನಗರದಲ್ಲಿ ತಿಂಗಳಿಗೊಮ್ಮೆ ನೀರು ಪೂರೈಕೆ ಮಾಡುತ್ತಿದ್ದೀರಿ ಎಂದು ಕಿಡಿಕಾರಿದರು. ಅಷ್ಟೇ ಅಲ್ಲದೆ ಬಡ ಜನರ ಜೊತೆಗೆ ಚೆಲ್ಲಾಟವಾಡಬೇಡಿ ಎಂದು ತರಾಟೆಗೆ ತೆಗೆದುಕೊಂಡರು.

ಇದನ್ನೂ ಓದಿ: ಬೆಳೆ ವಿಮೆ ಕುರಿತು ರೈತರಲ್ಲಿ ಜಾಗೃತಿ ಮೂಡಿಸುವ ಕಾರ್ಯವಾಗಲಿ: ಸಚಿವ ಎಚ್​ಕೆ ಪಾಟೀಲ

ಜನಪರ ಆಡಳಿತ, ರಚನಾತ್ಮಕ ಕಾರ್ಯಗಳ ಮೂಲಕ ಮಾದರಿ ಜಿಲ್ಲೆಯನ್ನಾಗಿಸಲು ಕಾರ್ಯೊನ್ಮುಖವಾಗಿ ಸಚಿವ ಎಚ್.ಕೆ.ಪಾಟೀಲ

ಜಿಲ್ಲೆಯಲ್ಲಿ ಜನಪರ ಆಡಳಿತ, ರಚನಾತ್ಮಕ ಕಾರ್ಯಗಳ ಮೂಲಕ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿಸಿ ಪ್ರಥಮ ಸ್ಥಾನಕ್ಕೆ ಕೊಂಡೊಯ್ಯಲು ಎಲ್ಲ ಇಲಾಖೆಗಳು ಕಾರ್ಯೋನ್ಮುಖವಾಗಬೇಕು ಎಂದು ಸಚಿವ ಎಚ್ ಕೆ ಪಾಟೀಲ ಹೇಳಿದರು. ಗದಗ ಜಿಲ್ಲೆ ಉತ್ತಮ ಆಡಳಿತಕ್ಕೆ ಹೆಸರು ವಾಸಿಯಾಗಿದ್ದು, ಅನೇಕ ಸಾಧನೆಗಳನ್ನು ಮಾಡಿ ರಾಜ್ಯಕ್ಕೆ ತೋರ್ಪಡಿಸಿದಂತಹ ಅನೇಕ ಉದಾಹರಣೆಗೆ ಗದಗ ಜಿಲ್ಲೆ ಸಾಕ್ಷಿಯಾಗಿದೆ ಎಂದರು.

ಸರಕಾರಿ ಕಚೇರಿಗಳಿಗೆ ಆಗಮಿಸುವ ಮುಗ್ದ ಜನರನ್ನು ಗೌರವದಿಂದ ಕಾಣುವಂತಹ ಮನೋಭಾವನೆಯನ್ನು ಎಲ್ಲ ಅಧಿಕಾರಿಗಳು ಮೈಗೂಡಿಸಿಕೊಳ್ಳಲು ತಿಳಿಸಿದರು. ಅಧಿಕಾರದಲ್ಲಿರುವವರು ದರ್ಪ ಹಾಗೂ ಅಧಿಕಾರ ದುರುಪಯೋಗ ಪಡಿಸಿಕೊಳ್ಳುವಂತಹ ಮನೋಭಾವನೆಯನ್ನು ಬದಲಾಯಿಸಿಕೊಂಡು ಪ್ರಜಾಪ್ರಭುತ್ವದ ನೈಜ ಉದ್ದೇಶ ಈಡೇರಿಸಲು ಮುಂದಾಗಬೇಕು. ಈ ವಿಷಯದಲ್ಲಿ ಉದಾಸಿನ ತೋರಿಸುವಂತಹ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ನಿರ್ದಾಕ್ಷಿಣವಾಗಿ ಕ್ರಮವಾಗಿ ಕೈಗೊಳ್ಳಲಾಗುವದು ಎಂದು ಸಚಿವರು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಕಾನೂನು ಸುವ್ಯವಸ್ಥೆಗೆ ಥರ್ಡ ಐ ಯೋಜನೆ ಶೀಘ್ರ ಜಾರಿ: ಸಚಿವ ಎಚ್​ಕೆ ಪಾಟೀಲ್

ಅಧಿಕಾರಿಗಳಿಂದ ಪ್ರಾಮಾಣಿಕ ಸೇವೆ, ಶೊಷಣೆ ಮುಕ್ತ ಆಡಳಿತ ಸರಕಾರದ ಆಶಯವಾಗಿದೆ. ಸರಕಾರಿ ಅಧಿಕಾರಿ, ಸಿಬ್ಬಂದಿಗಳಿಂದ ಸಾರ್ವಜನಿಕರಿಗೆ ಶೋಷಣೆ ನಡೆಯುತ್ತಿರುವ ಕುರಿತು ದೂರುಗಳು ಬಂದಲ್ಲಿ ಅಂತಹವರ ವಿರುದ್ಧ ಕಾನೂನಿನ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ರಾಜ್ಯದಲ್ಲಿಯೇ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿಸಲು ಕಟಿಬದ್ಧರಾಗುವಂತೆ ತಿಳಿಸಿ ಎಲ್ಲರ ಸಹಕಾರವನ್ನು ಕೋರಿದರು. ಕೋವಿಡ ಸಂದರ್ಭದಲ್ಲಿ ರಾಜಕೀಯ ಮರೆತು ಸೇವೆ ಒದಗಿಸುವದರಲ್ಲಿ ಗದಗ ಜಿಲ್ಲೆ ಮಾದರಿಯಾಗಿದೆ ಎಂದು ಹೇಳಿದರು.

ರೋಣ ಶಾಸಕ ಜಿ.ಎಸ್. ಪಾಟೀಲ ಮಾತನಾಡಿ ವೈದ್ಯಕೀಯ ಕ್ಷೇತ್ರದಲ್ಲಿ ತಾಲೂಕು ಮಟ್ಟದ ಎಲ್ಲ ಆಸ್ಪತ್ರೆಗಳಿಗೂ ಹೆಚ್ಚಿನ ಗಮನ ನೀಡಬೇಕು. ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯು ಇನ್ನೂ ಹೆಚ್ಚಿನ ಪ್ರಗತಿ ಸಾಧಿಸಬೇಕಾಗಿದ್ದು ಈ ಕುರಿತು ಗಮನ ಹರಿಸಬೇಕು. ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಯಿಂದ ಸಾಮಾನ್ಯರಿಗೆ ತೊಂದರೆಯಾಗುತ್ತಿದ್ದು ಇದರ ನಿಯಂತ್ರಣಕ್ಕೆ ರಾಜ್ಯ ಮಟ್ಟದಲ್ಲಿಯೇ ಪರಿಹಾರ ಕಂಡುಕೊಳ್ಳಲು ಸಲಹೇ ನೀಡಿದ ಅವರು ಪಶು ಚಿಕಿತ್ಸಾಲಯಗಳಿಗೆ ಕಾಯಕಲ್ಪ ನೀಡುವ ಕಾರ್ಯವಾಗಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.

ಶಾಸಕರಾದ ಡಾ.ಚಂದ್ರು ಲಮಾಣಿ ಕಪ್ಪತಗುಡ್ಡವನ್ನು ಪ್ರವಾಸಿ ತಾಣವನ್ನಾಗಿಸುವದರಿಂದ ಇದರ ಸುತ್ತಮುತ್ತಲಿನ ಗ್ರಾಮಗಳು ಅಭಿವೃದ್ದಿ ಹೊಂದುವವು. ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ಭಾಗದಲ್ಲಿ ಕುಡಿಯುವ ನೀರು ಪೂರೈಕೆಗೆ ಸಮರ್ಪಕವಾಗಿ ಆಗಬೇಕಿದೆ. ಈ ಬಗ್ಗೆ ಸಂಬಂಧಿತ ಅಧಿಕಾರಿಗಳು ಗಮನಹರಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳನ್ನು ಅಭಿವೃದ್ದಿ ಪಡಿಸಿ ಜಿಮ್ಸನಲ್ಲಿ ಪದವಿ ಪಡೆದ ವಿಧ್ಯಾರ್ಥಿಗಳನ್ನು ತಾಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿಯೋಜಿಸುವಂತೆ ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
ಮನೆಯಲ್ಲಿ ಚಪ್ಪಲಿ ಹಾಕಿಕೊಂಡು ಓಡಾಡಬಾರದು, ಈ ಬಗ್ಗೆ ಆಧ್ಯಾತ್ಮದಲ್ಲೇನಿದೆ?
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
Horoscope:ಈ ರಾಶಿಯವರಿಗೆ ಪ್ರಸಿದ್ಧ ವ್ಯಕ್ತಿಗಳು ಅನಿರೀಕ್ಷಿತವಾಗಿ ಸಿಗುವರು
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
‘ನಾನು ದರ್ಶನ್ ಅವರ ಸಂಬಂಧಿ’: ಭೇಟಿ ಮಾಡಲು ಪರಪ್ಪನ ಅಗ್ರಹಾರಕ್ಕೆ ಬಂದ ಯುವತಿ
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ದರ್ಶನ್​ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದು
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಸಿಎಂ ವಿವಾದ ಸಿದ್ದರಾಮಯ್ಯ ಕಾರ್ಯವೈಖರಿ ಮೇಲೆ ಪ್ರಭಾವ ಬೀರಿದೆ: ಶೆಟ್ಟರ್
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ
ಹೋರಿ ಬೆದರಿಸುವುದನ್ನು ನೋಡಲು ವಿದ್ಯುತ್​ ಟಿಸಿ ಏರಿ ಕೂತರು: ಜನರ ಹುಚ್ಚಾಟ