AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag News: ಸರ್ಕಾರಿ ಬಸ್ -ಟಾಟಾ ಸುಮೋ ನಡುವೆ ಭೀಕರ ಅಪಘಾತ, ಐವರು ದುರ್ಮರಣ

ಸರ್ಕಾರಿ ಬಸ್ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವು ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಬಳಿ ನಡೆದಿದೆ.

Gadag News: ಸರ್ಕಾರಿ ಬಸ್ -ಟಾಟಾ ಸುಮೋ ನಡುವೆ ಭೀಕರ ಅಪಘಾತ, ಐವರು ದುರ್ಮರಣ
ಬಸ್-ಟಾಟಾ ಸುಮೋ ಅಪಘಾತ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Oct 16, 2023 | 12:55 PM

Share

ಗದಗ, (ಅಕ್ಟೋಬರ್ 16): ಕೆಎಸ್​ಆರ್​ಟಿಸಿ ಬಸ್ (KSRTC Bus)ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐದು ಜನ ಸಾವನ್ನಪ್ಪಿದ್ದು, ನಾಲ್ವವರಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಬಳಿ ನಡೆದಿದೆ. ಮೃತರು ಗುಲಬರ್ಗಾ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು ಎಂದು ತಿಳಿದುಬಂದಿದೆ. ಗದಗ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಮಠಕ್ಕೆ ಹೋಗುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಟಾಟಾ ಸೊಮೊ ನಲ್ಲಿದ್ದ 5 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದರೆ. ಇನ್ನು ವಾಯುವ್ಯ ಸಾರಿಗೆ ಬಸ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಫಜಲಪುರದ ಸಚಿನ್ ಕತ್ತಿ 31, ದ್ರಾಕ್ಷಾಯಣಿ ಕತ್ತಿ-30 ಹಾಗೂ ಮಾದನ ಹಿಪ್ಪರಗಿಯ ಶಿವಕುಮಾರ್ ಕಲಶೆಟ್ಟಿ 50, ಚಂದ್ರಕಲಾ 42, ರಾಣಿ-32 ಮೃತರು.

ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದಿಂದ ಟಾಟಾ ಸೊಮೊನಲ್ಲಿ ಶಿರಹಟ್ಟಿಯ ಫಕ್ಕೀರೇಶ್ವರ ಮಠಕ್ಕೆ ಹೊರಟಿದ್ದರು. ಆದರೆ, ಏಕಾಏಕಿ ಬಸ್‌ಗೆ ಡಿಕ್ಕಿ ಹೊಡೆದಿದ್ದು, ಆದ್ರೆ, ವಿಧಿ ದೇವಸ್ಥಾನಕ್ಕೆ ಹೊರಟವರನ್ನು ಮಸಣಕ್ಕೆ ಕರೆದೊಯ್ದಿದೆ. ಘಟನೆ ನಡೆದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಸ್ಥಳಕ್ಕೆ ದೌಡಾಯಿಸಿ ರಸ್ತೆಯಲ್ಲಿ ಉಂಟಾಗಿದ್ದ ಟ್ರಾಫಿಕ್‌ ಕ್ಲಿಯರ್ ಮಾಡಿದರು.

ರಸ್ತೆ ಬದಿಯ ಮನೆಗೆ ನುಗ್ಗಿದ ಕೆಎಸ್ ಆರ್ ಟಿಸಿ ಬಸ್

ಹಾಸನ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಬಸ್ ರಸ್ತೆ ಬದಿಯ ಮನೆಗೆ ನುಗ್ಗಿದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಆಗ್ಗುಂದ ಗ್ರಾಮ ಬಳಿ ನಡೆದಿದೆ. ಅರಸೀಕೆರೆಯಿಂದ ಹುಳಿಯಾರಕ್ಕೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಆಗ್ಗುಂದ ಗ್ರಾಮದ ಮನಯೊಂದಕ್ಕೆ ನುಗ್ಗಿದೆ. ಘಟನೆಯಲ್ಲಿ ನಾಲ್ಕೈದು ಜನಕ್ಕೆ ಸಣ್ಣ ಪುಟ್ಚ ಗಾಯಗಳಾಗಿದ್ದು, ಅವರನ್ನು ಅರಸೀಕೆರೆಯ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಿಟಿ ವಾಹನ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿ 6 ಜನರಿಗೆ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರಸಮೀಪದ ದೇವನಗೂಲ ಗ್ರಾಮದ ಬಳಿ ನಡೆದಿದೆ. ಶಿರಸಿಯಿಂದ ಹೊರನಾಡು ದೇವಾಲಯಕ್ಕೆ ಪ್ರವಾಸಕ್ಕೆ ತೆರಳುವಾಗ ಈ ದುರ್ಘಟನೆ ಸಂಭವಿಸಿದ್ದು, ಟಿ.ಟಿ ವಾಹನದಲ್ಲಿದ್ದ 6 ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಗಾಯಾಳುಗಳನ್ನ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:44 am, Mon, 16 October 23

Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ