ಗದಗ, (ಅಕ್ಟೋಬರ್ 16): ಕೆಎಸ್ಆರ್ಟಿಸಿ ಬಸ್ (KSRTC Bus)ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐದು ಜನ ಸಾವನ್ನಪ್ಪಿದ್ದು, ನಾಲ್ವವರಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಬಳಿ ನಡೆದಿದೆ. ಮೃತರು ಗುಲಬರ್ಗಾ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದವರು ಎಂದು ತಿಳಿದುಬಂದಿದೆ. ಗದಗ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದ ಮಠಕ್ಕೆ ಹೋಗುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ ಟಾಟಾ ಸೊಮೊ ನಲ್ಲಿದ್ದ 5 ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದರೆ. ಇನ್ನು ವಾಯುವ್ಯ ಸಾರಿಗೆ ಬಸ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಫಜಲಪುರದ ಸಚಿನ್ ಕತ್ತಿ 31, ದ್ರಾಕ್ಷಾಯಣಿ ಕತ್ತಿ-30 ಹಾಗೂ ಮಾದನ ಹಿಪ್ಪರಗಿಯ ಶಿವಕುಮಾರ್ ಕಲಶೆಟ್ಟಿ 50, ಚಂದ್ರಕಲಾ 42, ರಾಣಿ-32 ಮೃತರು.
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾದನಹಿಪ್ಪರಗಿ ಗ್ರಾಮದಿಂದ ಟಾಟಾ ಸೊಮೊನಲ್ಲಿ ಶಿರಹಟ್ಟಿಯ ಫಕ್ಕೀರೇಶ್ವರ ಮಠಕ್ಕೆ ಹೊರಟಿದ್ದರು. ಆದರೆ, ಏಕಾಏಕಿ ಬಸ್‌ಗೆ ಡಿಕ್ಕಿ ಹೊಡೆದಿದ್ದು, ಆದ್ರೆ, ವಿಧಿ ದೇವಸ್ಥಾನಕ್ಕೆ ಹೊರಟವರನ್ನು ಮಸಣಕ್ಕೆ ಕರೆದೊಯ್ದಿದೆ. ಘಟನೆ ನಡೆದ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಸ್ಥಳಕ್ಕೆ ದೌಡಾಯಿಸಿ ರಸ್ತೆಯಲ್ಲಿ ಉಂಟಾಗಿದ್ದ ಟ್ರಾಫಿಕ್ ಕ್ಲಿಯರ್ ಮಾಡಿದರು.
ಹಾಸನ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಬಸ್ ರಸ್ತೆ ಬದಿಯ ಮನೆಗೆ ನುಗ್ಗಿದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಆಗ್ಗುಂದ ಗ್ರಾಮ ಬಳಿ ನಡೆದಿದೆ. ಅರಸೀಕೆರೆಯಿಂದ ಹುಳಿಯಾರಕ್ಕೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಆಗ್ಗುಂದ ಗ್ರಾಮದ ಮನಯೊಂದಕ್ಕೆ ನುಗ್ಗಿದೆ. ಘಟನೆಯಲ್ಲಿ ನಾಲ್ಕೈದು ಜನಕ್ಕೆ ಸಣ್ಣ ಪುಟ್ಚ ಗಾಯಗಳಾಗಿದ್ದು, ಅವರನ್ನು ಅರಸೀಕೆರೆಯ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿ 6 ಜನರಿಗೆ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರಸಮೀಪದ ದೇವನಗೂಲ ಗ್ರಾಮದ ಬಳಿ ನಡೆದಿದೆ. ಶಿರಸಿಯಿಂದ ಹೊರನಾಡು ದೇವಾಲಯಕ್ಕೆ ಪ್ರವಾಸಕ್ಕೆ ತೆರಳುವಾಗ ಈ ದುರ್ಘಟನೆ ಸಂಭವಿಸಿದ್ದು, ಟಿ.ಟಿ ವಾಹನದಲ್ಲಿದ್ದ 6 ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಗಾಯಾಳುಗಳನ್ನ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:44 am, Mon, 16 October 23