ಬೆಂಕಿಯ ಕೆನ್ನಾಲಿಗೆಯಲ್ಲಿ ಕಪ್ಪತ್ತಗುಡ್ಡ.. ಮೂರು ದಿನದಲ್ಲಿ 5 ಸಾವಿರ ಹೆಕ್ಟೇರ್​ಗೂ ಹೆಚ್ಚು ಪ್ರದೇಶ ಬೆಂಕಿಗೆ ಆಹುತಿ

ಅದು ಉತ್ತರ ಕರ್ನಾಟಕದ ಸಹ್ಯಾದ್ರಿ. ಅಪಾರ ಆಯುರ್ವೇದ ಔಷಧಿ ಸಸ್ಯಗಳ ತಾಣ. ಆದ್ರೆ ಹಸಿರು ಕಾಶಿಗೆ ಕಂಟಕ ಎದುರಾಗಿದೆ. ಈಗಾಗಲೇ ಗಣಿ ಹಾಗೂ ಭೂಗಳ್ಳರಿಂದ ನಶಿಸಿ ಹೋಗಿರೋ ಗುಡ್ಡಕ್ಕೆ ಬೆಂಕಿ ಆಪತ್ತು ತಂದಿದೆ. ಮೂರೇ ದಿನದಲ್ಲಿ ಸುಮಾರು 5 ಸಾವಿರ ಹೆಕ್ಟೇರ್​ಗೂ ಹೆಚ್ಚು ಪ್ರದೇಶ ಬೆಂಕಿಗೆ ಆಹುತಿಯಾಗಿದೆ.

ಬೆಂಕಿಯ ಕೆನ್ನಾಲಿಗೆಯಲ್ಲಿ ಕಪ್ಪತ್ತಗುಡ್ಡ.. ಮೂರು ದಿನದಲ್ಲಿ 5 ಸಾವಿರ ಹೆಕ್ಟೇರ್​ಗೂ ಹೆಚ್ಚು ಪ್ರದೇಶ ಬೆಂಕಿಗೆ ಆಹುತಿ
ಕಪ್ಪತ್ತಗುಡ್ಡದಲ್ಲಿ ಕಾಣಿಸಿಕೊಂಡ ಬೆಂಕಿ
Follow us
ಆಯೇಷಾ ಬಾನು
|

Updated on: Mar 04, 2021 | 8:03 AM

ಗದಗ: ಉತ್ತರ‌ ಕರ್ನಾಟದ ಸಸ್ಯಕಾಶಿ, ಅಪಾರ ಆಯುರ್ವೇದ ಔಷಧಿಗಳ ಸಸ್ಯತಾಣ ಕಪ್ಪತ್ತಗುಡ್ಡಕ್ಕೆ ಬೆಂಕಿಯ ಕಂಟಕ ಎದುರಾಗಿದೆ. ಗದಗ ಜಿಲ್ಲೆಯ ಕಪ್ಪತ್ತಗುಡ್ಡ ಸತತ 3 ದಿನಗಳಿಂದ ಬೆಂಕಿಯಲ್ಲಿ ಬೆಂದು ಹೋಗಿದೆ. ಕಿಡಿಗೇಡಿಗಳ ಕೃತ್ಯಕ್ಕೆ ಕಪ್ಪತ್ತಗುಡ್ಡ ಅಕ್ಷರಶಃ ಕಾದ ಕಬ್ಬಿಣವಾಗಿದೆ.

ಕಪ್ಪತ್ತಗುಡ್ಡಕ್ಕೆ ಕಿಡಿಗೇಡಿಗಳಿಂದ ಬೆಂಕಿ? ಕಾಡ್ಗಿಚ್ಚಿನಿಂದ ಔಷಧಿ ಕಾಡು ಹಾಗೂ ಪ್ರಾಣಿ, ಪಕ್ಷಿಗಳು ನಲುಗಿ ಹೋಗಿವೆ. ಹೀಗೆ 5 ಸಾವಿರ ಹೆಕ್ಟೇರ್ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಪ್ರತಿವರ್ಷವೂ ಬೇಸಿಗೆ ಆರಂಭವಾದ್ರೆ ಸಾಕು ಕಪ್ಪತ್ತಗುಡ್ಡಕ್ಕೆ ಬೆಂಕಿ ಕಂಟಕ ಶುರುವಾಗುತ್ತೆ. ಹಿಂದೆ ಬೆಂಕಿ ದುರಂತಕ್ಕೆ ಕುತಂತ್ರ, ಕೈವಾಡ ಇತ್ತು. ಆದ್ರೆ, ಈ ಬಾರಿ ಸ್ಥಳೀಯರಿಂದಲೇ ಕಂಟಕ ಎದುರಾಗಿದೆ ಅನ್ನೋ ಅರೋಪ ಕೇಳಿ ಬಂದಿದೆ. ಮುಂಡರಗಿ ತಾಲೂಕಿನ ಡೋಣಿ ತಾಂಡಾದ ಬಳಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಅಂತಾ ಆರೋಪಿಸಲಾಗಿದೆ. ಮೊದಲು ಒಂದು ಕಡೆಗೆ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು ಮತ್ತೆ ಬೇರೆ ಬೇರೆ ಪ್ರದೇಶದಲ್ಲಿ 10 ಕಡೆ ಬೆಂಕಿ ಇಟ್ಟಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗುತ್ತಿದೆ. ಹೀಗೆ ಹಗಲು, ರಾತ್ರಿ ಎನ್ನದೆ ಬೆಂಕಿಯ ಕೆನ್ನಾಲಿಗೆಗೆ ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ.

kappata gudda

ಗದಗದ ಕಪ್ಪತ್ತಗುಡ್ಡ

ಅರಣ್ಯ ಇಲಾಖೆಗೆ ದೊಡ್ಡ ಸವಾಲು ಕಪ್ಪತ್ತಗುಡ್ಡಕ್ಕೆ ಬೆಂಕಿ ಕಾಟ ಹೊಸದೇನಲ್ಲ. ಬೆಂಕಿ ಬೀಳಬಾರದು ಅಂತಾನೆ ಅರಣ್ಯ ಇಲಾಖೆ ಸಿಬ್ಬಂದಿ ಸಾಕಷ್ಟು ಮುಂಜಾಗ್ರತೆ ವಹಿಸಿದ್ದಾರೆ. ಈ ಹಿಂದೆ ಫೈರ್​ಲೈನ್ ಕಾಮಗಾರಿ ನಡೆಸಲಾಗ್ತಿತ್ತು. ಅದರೆ ಕೊರೊನಾ ಕಾರಣ ಸಿಬ್ಬಂದಿ ಕಡಿತಗೊಳಿಸಿದ್ದರಿಂದ ಪೂರ್ಣ ಪ್ರಮಾಣದಲ್ಲಿ ಫೈರ್​ಲೈನ್ ಮಾಡಲಾಗಿಲ್ಲ. ಹೀಗಾಗಿ ಈ ಬಾರಿ ಬೆಂಕಿ ಕೆನ್ನಾಲಿಗೆಯನ್ನ ತಣ್ಣಗಾಗಿಸೋದು ಅರಣ್ಯ ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕಪ್ಪತ್ತಗುಡ್ಡ ಉಳಿಸಬೇಕೆಂದರೆ ಸ್ಥಳಿಯರೂ ಇಲ್ಲಿ ಕೈಜೋಡಿಸಬೇಕು ಅನ್ನೋದು ಪರಿಸರ ಪ್ರೇಮಿಗಳ ಆಗ್ರಹವಾಗಿದೆ.

kappata gudda

ಕಪ್ಪತ್ತಗುಡ್ಡ

ಕಪ್ಪತ್ತಗುಡ್ಡಕ್ಕೆ ನಿರಂತರವಾಗಿ ಕಂಟಕ ಎದುರಾಗ್ತಿದೆ. ಅದರಲ್ಲೂ ಬೇಸಿಗೆಯ ಸಮಯದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ನಲುಗುವ ಹಸಿರುಧಾಮಕ್ಕೆ ರಕ್ಷಾಕವಚ ಇಲ್ಲದಂತಾಗಿದೆ. ಮತ್ತೊಂದ್ಕಡೆ ಬೇಲಿಯೇ ಎದ್ದು ಹೊಲಮೇಯ್ದಂತೆ ಸ್ಥಳಿಯರೇ ಕೃತ್ಯ ಎಸಗುತ್ತಿದ್ದಾರಾ ಅನ್ನೋ ಅನುಮಾನ ಮೂಡಿದೆ. ಹೀಗಾಗಿ ಉತ್ತರ ಕರ್ನಾಟಕದ ಹಸಿರು ಧಾಮವಾದ ಕಪ್ಪತ್ತಗುಡ್ಡವನ್ನ ರಕ್ಷಣೆ ಮಾಡಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕಿದೆ.

kappata gudda

ಕಪ್ಪತ್ತಗುಡ್ಡ

ಇದನ್ನೂ ಓದಿ: ಕಪ್ಪತಗುಡ್ಡ ವ್ಯಾಪ್ತಿಯಲ್ಲಿ ನಿಲ್ಲದ ಕಲ್ಲುಗಣಿಗಾರಿಕೆ, ನೋಟಿಸ್ ನೀಡಿದ್ರೂ ಡೋಂಟ್ ಕೇರ್..

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ