ಗದಗ: ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಸಾಬೀತು, ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಕುಡಿಯುವ ನೀರು ತರಲು ಹೋಗುತ್ತಿದ್ದಾಗ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣ 2019ರ ಸೆಪ್ಟೆಂಬರ್​ನಲ್ಲಿ ನಡೆದಿತ್ತು. ಈ ಪ್ರಕರಣ ಗದಗ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ ಇಂದು ಅಪರಾಧಿಗೆ ಜೈಲು ಶಿಕ್ಷೆ ವಿಧಿಸಿ ಆದೇಶಿಸಲಾಗಿದೆ.

ಗದಗ: ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಸಾಬೀತು, ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ
ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿ ಶಂಕರಗೌಡನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಗದಗ ನ್ಯಾಯಾಲಯ
Edited By: Rakesh Nayak Manchi

Updated on: Jul 17, 2023 | 10:19 PM

ಗದಗ, ಜುಲೈ 17: ಅಪ್ರಾಪ್ತ ಬಾಲಕಿ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಗದಗ (Gadag) ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗುಡ್ಡದ ಮಲ್ಲಾಪೂರ ಗ್ರಾಮದ ಶಂಕರಗೌಡ ಶಿಕ್ಷೆಗೆ ಗುರಿಯಾದ ಅಪರಾಧಿ.

ಅಪ್ರಾಪ್ತ ಬಾಲಕಿ 2019ರ ಸೆ.5 ರಂದು ಕುಡಿಯುವ ನೀರು ತರಲು ಹೋಗುತ್ತಿದ್ದಾಗ ಆರೋಪಿ ಶಂಕರಗೌಡ, ಬಾಲಕಿಯನ್ನು ರೋಣ ಪೊಲೀಸ್ ಠಾಣಾ ವ್ಯಾಪ್ತಿಯ ಜಮೀನಿನ ಎಳೆದುಕೊಂಡು ಹೋಗಿ ಹಲ್ಲೆ ನಡೆಸಿ ಅತ್ಯಾಚಾರ ಮಾಡಿದ್ದನು. ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಗುನ್ನಾ ನಂ.129/2019 ಕಲಂ 323-376(2 (ಐ), 376(3)-504-506 IPC ಕಲಂ 4&6ಪೋಕ್ಸೋ ಕಾಯ್ದೆ 2012 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಗದಗ: ಸಿಂಜೆಂಟಾ ವಿರುದ್ಧ ರೈತರ ವಿನೂತನ ಪ್ರತಿಭಟನೆ, ಸೂರ್ಯಕಾಂತಿ ಎಸ್​ಬಿ-293 ಹೈಬ್ರಿಡ್ ಬೀಜ ಮಾರಾಟಕ್ಕೆ ತಡೆ

ಅತ್ಯಾಚಾರ ಸಂಬಂಧ ಅಂದಿನ ಸಿಪಿಐ ಎಂ.ಐ. ನಡುವಿನಮನಿ ಅವರು ಪ್ರಕರಣ ದಾಖಲಿಸಿ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿಯನ್ನು 2019ರ ಅ.22 ರಂದು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ರಾಜೇಶ್ವರ ಶೆಟ್ಟಿ, ಅಪರಾಧ ಸಾಬೀತಾದ ಹಿನ್ನೆಲೆ ಆರೋಪಿ ಶಂಕರಗೌಡನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕರಾದ ಅಮರೇಶ ಹಿರೇಮಠ ಅವರು ವಾದ ಮಂಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:16 pm, Mon, 17 July 23

Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us