ಗದಗಿನಲ್ಲೊಂದು ಭೀಕರ ಅಪಘಾತ: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ, ಮೂವರು ದುರ್ಮರಣ
ಗದಗ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಅಪರಿಚಿತ ವಾಹನ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಗದಗ, ಮಾರ್ಚ್ 02: ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣ (death) ಹೊಂದಿರುವಂತಹ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ನಿಂಗಪ್ಪ ಮಾದರ, ಯಮನಪ್ಪ ಮತ್ತು ಮಂಜುನಾಥಗೌಡ ಮೃತರು. ಅಪಘಾತದ ಬಳಿಕ ವಾಹನದ ಸಮೇತ ಚಾಲಕ ಎಸ್ಕೇಪ್ ಆಗಿದ್ದಾನೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಮೊಮ್ಮಗ-ಅಜ್ಜಿ ಸಾವು
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಮಂಜಲ್ಪಡ್ಪು ಎಂಬಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆಟೋ ದಲ್ಲಿದ್ದ ಮೊಮ್ಮಗ-ಅಜ್ಜಿ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಆಟೋ ಚಾಲಕನಿಗೆ ಗಂಭೀರ ಗಾಯವಾಗಿದೆ. ಜಮೀಲಾ (49), ತಮ್ಸೀರ್(4) ಮೃತ ದುರ್ದೈವಿಗಳು.
ಇದನ್ನೂ ಓದಿ: ಡಬ್ಬಲ್ ಮರ್ಡರ್ ಮಾಡಿ ಜೈಲುಪಾಲಾಗಿದ್ದ ವಿಚಾರಣಾಧೀನ ಖೈದಿ ಜೈಲಿನಲ್ಲಿ ನೇಣಿಗೆ ಶರಣು
ಮಂಗಳೂರಿನಿಂದ ಪುತ್ತೂರಿಗೆ ಕೆಎಸ್ಆರ್ಟಿಸಿ ಬಸ್ ಬರುತ್ತಿದ್ದು, ಪುತ್ತೂರಿನಿಂದ ಕಬಕ ಕಡೆಗೆ ಆಟೋ ಹೋಗುತ್ತಿತ್ತು. ಕೆದಂಬಾಡಿಯ ಮಹಮ್ಮದ್ ಎಂಬವರು ಆಟೋ ಚಲಾಯಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದೆ. ಎದುರಿಗೆ ಬರುತ್ತಿದ್ದ ಬಸ್ಗೆ ಆಟೋ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಮಹಮ್ಮದ್ ಪತ್ನಿ ಜಮೀಳಾ ಹಾಗೂ ಮೊಮ್ಮಗ ತಮ್ಸೀರ್ ಸಾವನ್ನಪ್ಪಿದ್ದಾರೆ. ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿವೈಡರ್ಗೆ ಡಿಕ್ಕಿಯಾಗಿ ಎದುರಿಗೆ ಬರ್ತಿದ್ದ ಲಾರಿಗೆ ಕಾರು ಡಿಕ್ಕಿ: ಐವರು ಅದೃಷ್ಟವಶಾತ್ ಪಾರು
ಡಿವೈಡರ್ಗೆ ಡಿಕ್ಕಿಯಾಗಿ ಎದುರಿಗೆ ಬರ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಐವರು ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ರಾಮೇಶ್ವರ ಗೇಟ್ ಬಳಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.
ಇದನ್ನೂ ಓದಿ: ಕಾಂಗ್ರೆಸ್ ಶಾಸಕ ಆಪ್ತನ ಕೊಲೆಗೆ ಬಿಬಿಎಂಪಿ ಎಲೆಕ್ಷನ್ ಕಾರಣವಾಯ್ತಾ? ಹತ್ಯೆ ಹಿಂದಿನ ಸಿಕ್ರೇಟ್
ಮದುವೆ ಮುಗಿಸಿ ವಾಪಸಾಗುವಾಗ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಚಿಕ್ಕಮಗಳೂರು ಮೂಲದ ಐವರಿಗೆ ಗಾಯಗಳಾಗಿದ್ದು, ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.