AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ?

ಗದಗದ ಹುಯಿಲಗೋಳದಲ್ಲಿ ಯುವಕನೋರ್ವನ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಎದುರು ಮನೆಯವರ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ಹಳೆಯ ದ್ವೇಷವೇ ಕೃತ್ಯಕ್ಕೆ ಕಾರಣ ಎಂದು ಹೇಳಿದ್ದಾರೆ. ಮಗನ ಸಾವಿಗೆ ಸೇಡು ತೀರಿಸಿಕೊಳ್ಳುವುದಾಗಿ ಯುವಕನ ತಂದೆ ಪ್ರತಿಜ್ಞೆ ಮಾಡಿದ್ದು, ಪೊಲೀಸರ ತನಿಖೆಯಿಂದ ಘಟನೆಗೆ ಕಾರಣ ಏನೆಂಬ ಅಸಲಿ ಸತ್ಯ ಹೊರಬೀಳಬೇಕಿದೆ.

ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ?
ಮೃತ ಯುವಕ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Mar 29, 2026 | 9:07 AM

Share

ಗದಗ, ಮಾರ್ಚ್​​ 29: ಸುಟ್ಟ ಸ್ಥಿತಿಯಲ್ಲಿ ಯುವಕನೊರ್ವನ ಶವ ಗದಗ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ಪತ್ತೆಯಾಗಿದೆ. ಮೃತ ಯುವಕನನ್ನು ಚಂದ್ರು ಕುರಿ (27) ಎಂದು ಗುರುತಿಸಲಾಗಿದ್ದು, ಮಂಗಳವಾರ ರಾತ್ರಿ ಮನೆಯಿಂದ ಹೊರ ಹೋದ ಚಂದ್ರು ಮೃತದೇಹ ಸೇತುವೆಯೊಂದರ ಕೆಳಭಾಗ ಕಂಡುಬಂದಿದೆ. ಕೊಲೆ ಅನುಮಾನ ವ್ಯಕ್ತವಾಗಿದ್ದು, ಮಗನನ್ನು ಸಾಯಿಸಿ ಬಳಿಕ ದೇಹವನ್ನು ಸುಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮನೆಯ ಹೆಣ್ಣು ಮಕ್ಕಳನ್ನು ನೋಡ್ತಾನೆ ಎಂದು ಆರೋಪಿಸಿ ಎದುರಿನ ಮನೆ ಕುಟುಂಬಸ್ಥರು ಹಲವು ಬಾರಿ ಜಗಳ ತೆಗೆದಿದ್ದರು. ಮೈ ಮೇಲೆ ಬೈಕ್​​ ಹತ್ತಿಸಲೂ ಬಂದಿದ್ದರು. ಹೀಗಾಗಿ ಅವರೇ ಕೃತ್ಯ ಎಸಗಿರಬಹುದೆಂದು ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ.

ತಂದೆಯ ಪ್ರತಿಜ್ಞೆ

ಇನ್ನು ಮಗ ಚಂದ್ರುವಿನ ಅನುಮಾನಾಸ್ಪದ ಸಾವಿನ ಬೆನ್ನಲ್ಲೇ ತಂದೆ ಬಸವರಾಜ್​​ ಪ್ರತಿಜ್ಞೆಯೊಂದನ್ನು ಮಾಡಿದ್ದಾರೆ. ಟಿವಿ9 ಜೊತೆ ಮಾತನಾಡಿರುವ ಅವರು, ತನಗೆ ಮೂರು ಎಕರೆ ಹೊಲ ಇದೆ. ಅದನ್ನು ಕಳೆದುಕೊಂಡರೂ ಚಿಂತೆ ಇಲ್ಲ. ಸಾಲ ಮಾಡಿಯಾದರೂ ಹಣ ತರ್ತೀನಿ. ಆದರೆ ಮಗನನ್ನು ಕೊಂದ ಆರೋಪಿಗಳನ್ನು ಮಾತ್ರ ಯಾವುದೇ ಕಾರಣಕ್ಕೂ ಸುಮ್ಮೆನ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಚಂದ್ರು ಬಹಳ ಒಳ್ಳೆಯ ಹುಡುಗ, ಯಾರ ಜೊತೆ ತಂಟೆ-ತಕರಾರು ಮಾಡಿದವನಲ್ಲ. ತಾನಾಯ್ತು, ತನ್ನ ಕೆಲಸವಾಯ್ತು ಎಂಬಂತಿದ್ದ. ನಿತ್ಯ ಕೆಲಸಕ್ಕೆ ಹೋಗುವಾಗ 100 ರೂಪಾಯಿ ನನ್ನ ಕೇಳಿ ಪಡೆಯುತ್ತಿದ್ದ ಎಂದು ಭಾವುಕರಾಗಿದ್ದಾರೆ.

ಇದನ್ನೂ ಓದಿ: ಸಾಲಗಾರರ ಕಾಟಕ್ಕೆ ಒಂದೇ ಕುಟುಂಬದ ಇಬ್ಬರು ಬಲಿ; ಮತ್ತೆರಡು ಮಂದಿ ಸ್ಥಿತಿ ಗಂಭೀರ

ಹಿರಿಯ ಪುತ್ರನಾಗಿದ್ದ ಚಂದ್ರು ಸೇರಿ ಎರಡನೇ ಮಗ ಸುರೇಶ್​​ ಮದುವೆಗೆ ತಂದೆ ಬಸವರಾಜ್​​ ತಯಾರಿ ನಡೆಸಿದ್ದರು. ಬೀರಲಿಂಗೇಶ್ವರ ಜಾತ್ರೆಯ ಬಳಿಕ ಹುಡುಗಿ ನೋಡಬೇಕೆಂದು ನಿರ್ಧರಿಸಿದ್ದರು. ಆದರೆ ಅಷ್ಟರೊಳಗಾಗಲೇ ಮಗನ ಪ್ರಾಣಪಕ್ಷಿ ಹಾರಿಹೋಗಿದೆ. ಮಗನ ಮದುವೆ ಕಣ್ತುಂಬಿಕೊಳ್ಳಬೇಕೆಂದಿದ್ದ ಪೋಷಕರು, ಕರುಳ ಕುಡಿಯ ಅಂತ್ಯ ಸಂಸ್ಕಾರವನ್ನು ತಾವೇ ಮುಂದೆ ನಿಂತು ನೆರವೇರಿಸಬೇಕಾದ ಸ್ಥಿತಿ ಬಂದಿದೆ. ಹೀಗಾಗಿ ಮಗನ ಸಾವಿಗೆ ಸೇಡು ತೀರಿಸಿಕೊಳ್ಳೋದಾಗಿ ಬಸವರಾಜ್​​ ಅವರು ಹೇಳಿದ್ದಾರೆ. ಅಷ್ಟಕ್ಕೂ ಚಂದ್ರುಗೆ ಆಗಿದ್ದೇನು? ಕುಟುಂಬಸ್ಥರು ಹೇಳುವಂತೆ ಇದು ನಿಜಕ್ಕೂ ಕೊಲೆಯಾ? ಅಥವಾ ಘಟನೆ ಹಿಂದೆ ಬೇರೆ ಏನಾದರೂ ಕಾರಣಗಳಿವೆಯಾ? ಎಂಬುದು ಪೊಲೀಸರ ತನಿಖೆ ಬಳಿಕವಷ್ಟೇ ಬಯಲಾಗಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್
114 ಎಸೆತಗಳ ನಂತರ ಮೊದಲ ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ
114 ಎಸೆತಗಳ ನಂತರ ಮೊದಲ ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ
ತಿಲಕ್ ವರ್ಮಾ ಶತಕ ಬಾರಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಹಾರ್ದಿಕ್
ತಿಲಕ್ ವರ್ಮಾ ಶತಕ ಬಾರಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಹಾರ್ದಿಕ್
ಪವರ್‌ಪ್ಲೇನಲ್ಲೇ ಮುಂಬೈ ಪವರ್ ಕಸಿದ ಕಗಿಸೋ ರಬಾಡ
ಪವರ್‌ಪ್ಲೇನಲ್ಲೇ ಮುಂಬೈ ಪವರ್ ಕಸಿದ ಕಗಿಸೋ ರಬಾಡ
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ