ಮನೆ ಕಟ್ಟುವ ಕೆಲಸ ಮಾಡಬೇಕು ವಿನಃ ಒಡೆಯುವ ಕೆಲಸವಲ್ಲ: ಜಗದೀಶ್ ಶೆಟ್ಟರ್‌ಗೆ ವಿಜಯೇಂದ್ರ ಟಾಂಗ್
ಗದಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮನೆ ಕಟ್ಟುವಂತ ಕೆಲಸ ಮಾಡಬೇಕು ವಿನಃ ಮನೆ ಒಡೆಯುವ ಕೆಲಸ ಮಾಡಬಾರದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ತಿರುಗೇಟು ನೀಡಿದ್ದಾರೆ. ಸ್ವಾರ್ಥ ರಾಜಕಾರಣಕ್ಕಾಗಿ ಕಾಂಗ್ರೆಸ್ನವರು ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ ಎಂದು ಕಿಡಿಕಾರಿದ್ದಾರೆ.
ಗದಗ, ಡಿಸೆಂಬರ್ 24: ಮನೆ ಕಟ್ಟುವಂತ ಕೆಲಸ ಮಾಡಬೇಕು ವಿನಃ ಮನೆ ಒಡೆಯುವ ಕೆಲಸ ಮಾಡಬಾರದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಟಾಂಗ್ ನೀಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರತ್ಯೇಕ ಲಿಂಗಾಯತ ಕೂಗು ಶೆಟ್ಟರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಜಗದೀಶ ಶೆಟ್ಟರ್ ಅವರ ಮಾತನ್ನು ಕೇಳಿದೆ. ಕಳೆದ ಬಾರಿ ಸಿದ್ದರಾಮಯ್ಯ ಅವರು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಅನ್ನುವುದು ಖಾತ್ರಿ ಆದ ಬಳಿಕ ವೀರಶೈವ ಲಿಂಗಾಯತ ಸಮಾಜವನ್ನು ಪ್ರತ್ಯೇಕ ಧರ್ಮ ಅಂತ ಬೆಂಕಿ ಹಚ್ಚುವ ಕೆಲಸ ಮಾಡಿದರು ಎಂದಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಬಹಿರಂಗವಾಗಿ ಪ್ರತ್ಯೇಕ ಲಿಂಗಾಯತ ಧರ್ಮದ ವಿಷಯಕ್ಕೆ ಕೈ ಹಾಕಬಾರದು ಅಂತ ಕ್ಷಮೆಯಾಚನೆ ಮಾಡಿದ್ದರು. ಸ್ವಾರ್ಥ ರಾಜಕಾರಣಕ್ಕಾಗಿ ಕಾಂಗ್ರೆಸ್ನವರು ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ ಎಂಬುದು ಮತ್ತೊಮ್ಮೆ ರುಜುವಾತಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಕೆಂಡ
ಐಷಾರಾಮಿ ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ ಇದು ಅವಶ್ಯಕತೆ ಇತ್ತಾ ಅಂತ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಜೊತೆಗೆ ಇರುವ ಮಂತ್ರಿ ಫ್ಯಾಷನ್ ಶೋ ಮಾಡಿದ್ದರು. 500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಬಗ್ಗೆ ಇವರಿಗೆ ಕಾಳಜಿ ಇಲ್ಲ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ನನ್ನ ತಂಟೆಗೆ ಬಂದ್ರೆ ಸುಮ್ಮನೆ ಬಿಡಲ್ಲ!ವಿರೋಧಿಗಳಿಗೆ ಜಗದೀಶ್ ಶೆಟ್ಟರ್ ವಾರ್ನ್
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಬೆಳಗಾವಿ ಘಟನೆ ಸಾಕ್ಷಿ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮಹಿಳೆಯನ್ನ ಭೇಟಿ ಮಾಡಿ ಸಾಂತ್ವನ ಹೇಳುವಷ್ಟು ಸಮಯ ಇರಲಿಲ್ಲ. ಇದು ಬಡವರ ವಿರೋಧಿ ಸರ್ಕಾರ ಎಂದು ವಾಗ್ದಾಳಿ ಮಾಡಿದ್ದಾರೆ.
2024ರ ಚುನಾವಣೆಯಲ್ಲಿ INDIA ಮೈತ್ರಿಕೂಟ ಧೂಳಿಪಟವಾಗುತ್ತದೆ. ಹಿರಿಯರ ಮಾರ್ಗದರ್ಶನದಿಂದ ಯುವಕರಲ್ಲಿ ಉತ್ಸಾಹ ತುಂಬಿದೆ. 28 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಗೆದ್ದು ನರೇಂದ್ರ ಮೋದಿ ಕೈ ಬಲಪಡಿಸುತ್ತೇವೆ ಎಂದು ಹೇಳಿದ್ದಾರೆ.
ಜಾತಿ ಗಣತಿ ಅವೈಜ್ಞಾನಿಕ ಸರ್ವೆ
ರಾಜ್ಯ ಸರ್ಕಾರಕ್ಕೆ ಜನಗಣತಿ ಮಾಡುವ ಅಧಿಕಾರ ಇದೆಯಾ? ರಾಜ್ಯದ ಹಿಂದುಳಿದ ಸಮಾಜಗಳ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಅಧ್ಯಯನ ಅಂತಾ ಹೇಳಿ, ಈಗ ಜಾತಿಗಣತಿ ಅಂತಾ ಪರಿವರ್ತನೆ ಮಾಡಿಕೊಂಡಿದ್ದಾರೆ. ಬಿಜೆಪಿ ವಿರೋಧ ಮಾಡುತ್ತಿಲ್ಲ. ಆದರೆ ಜಾತಿ ಗಣತಿಯನ್ನ ರಾಜಕೀಯ ದುರುಪಯೋಗ ಮಾಡಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಈ ರೀತಿ ಮಾಡುತ್ತಿರುವುದು ಖಂಡನೀಯ ಎಂದಿದ್ದಾರೆ.
ಹಿಂದುಳಿದವರಿಗೆ ಸೌಲಭ್ಯ ಸಿಗಬೇಕು ಅನ್ನೋದು ಬಿಜೆಪಿ ನಿಲುವು. ಬಿಜೆಪಿ ಸರ್ಕಾರದಲ್ಲಿ ಹಿಂದುಳಿದವರಿಗಾಗಿ ಅನೇಕ ಯೋಜನೆ ಮಾಡಿದ್ದಾರೆ. ಆದರೆ ಕಾಂಗ್ರೆಸ್ಗೆ ಚುನಾವಣೆ ಬಂದಾಗ ಪ್ರತ್ಯೇಕ ಧರ್ಮ, ಜಾತಿಗಣತಿ ಬಗ್ಗೆ ಮಾತನಾಡುತ್ತಾರೆ.
ಚುನಾವಣೆ ಬಂದಾಗ ಹಿಂದುಳಿದ ವರ್ಗ, ಹಿಜಾಬ್ ನೆನಪಾಗುತ್ತದೆ. ಚುನಾವಣೆ ಬಂದಾಗ ಹಿಂದೂ ಹೆಣ್ಣುಮಕ್ಕಳ ಮಂಗಳ ಸೂತ್ರ ತೆಗೆದಿಡಿಸಬೇಕು. ರಾಜ್ಯ ಸರ್ಕಾರ ಯಾವ ದಿಕ್ಕಿನಲ್ಲಿ ಸಾಗುತ್ತಿದೆ. ಬರ ವಿಚಾರದಲ್ಲಿ ವಿಫಲವಾಗಿ ಜಾತಿ ಗಣತಿ, ಹಿಜಾಬ್ ವಿಷಯ ತಂದಿದೆ. ತನ್ನ ವೈಫಲ್ಯ ಮುಚ್ಚಿಹಾಕಲು ಈ ರೀತಿ ಮಾಡುತ್ತಿವೆ ಎಂದು ಕಿಡಿಕಾರಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.