AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಅನೈತಿಕ ಸಂಬಂಧವೇ ಮುಳುವಾಯ್ತು, ಮೂವರು ಅರೆಸ್ಟ್!

ಗದಗದ ಚಂದ್ರು ಕುರಿ ಕೊಲೆ ಪ್ರಕರಣವನ್ನು 48 ಗಂಟೆಗಳಲ್ಲಿ ಭೇದಿಸಿರುವ ಪೊಲೀಸರು, ಪ್ರೇಯಸಿ ರತ್ನಾ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ರತ್ನಾಳ ಪತಿ ಮತ್ತು ಸಹೋದರ ಸೇರಿ ಚಂದ್ರುನನ್ನು ಬ್ರಿಡ್ಜ್ ಕೆಳಗೆ ಕರೆದೊಯ್ದು ಕೊಲೆ ಮಾಡಿ, ನಂತರ ಸಾಕ್ಷ್ಯ ನಾಶಕ್ಕೆ ಶವವನ್ನು ಸುಟ್ಟು ಹಾಕಿದ್ದರು ಎಂಬುದು ಇದೀಗ ಬಯಲಾಗಿದೆ.

ಗದಗ: ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಅನೈತಿಕ ಸಂಬಂಧವೇ ಮುಳುವಾಯ್ತು, ಮೂವರು ಅರೆಸ್ಟ್!
ಗದಗ ಎಸ್ಪಿ ರೋಹನ್ ಜಗದೀಶ್ ಹಾಗೂ ಬಲ ಚಿತ್ರದಲ್ಲಿ ಕೊಲೆಯಾದ ಚಂದ್ರು ಕುರಿImage Credit source: tv9
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Apr 03, 2026 | 7:39 AM

Share

ಗದಗ, ಏಪ್ರಿಲ್ 3: ಗದಗ (Gadag) ಜಿಲ್ಲೆಯ ಹುಯಿಲಗೋಳ ಗ್ರಾಮದ ಯುವಕ ಚಂದ್ರು ಕುರಿ ನಾಪತ್ತೆಯಾಗಿ, ನಂತರ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಈಗ ದೊಡ್ಡ ತಿರುವು ಸಿಕ್ಕಿದೆ. ಇದೊಂದು ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ನಡೆದ ಪಕ್ಕಾ ಪ್ಲಾನ್ಡ್ ಮರ್ಡರ್ ಎಂಬುದು ಪೊಲೀಸ್ ತನಿಖೆಯಿಂದ ಬಹಿರಂಗವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪ್ರೇಯಸಿ ರತ್ನಾ, ಆಕೆಯ ಪತಿ ಈರಪ್ಪ ಮತ್ತು ಸಹೋದರ ಮಹಾಂತೇಶ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ಹಿನ್ನೆಲೆ

ಹುಯಿಲಗೋಳ ಗ್ರಾಮದ ಚಂದ್ರು ಕುರಿ ಮತ್ತು ಅದೇ ಗ್ರಾಮದ ರತ್ನಾ ಕುದರಿ ನಡುವೆ ಕಳೆದ ಕೆಲವು ಸಮಯದಿಂದ ಅನೈತಿಕ ಸಂಬಂಧವಿತ್ತು. ರತ್ನಾಳಿಗೆ ಶಿರಹಟ್ಟಿ ತಾಲೂಕಿನ ಹೊಳಲಾಪುರ ಗ್ರಾಮದ ಈರಪ್ಪ ಎಂಬಾತನೊಂದಿಗೆ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೂ ಗಂಡನ ಜೊತೆ ಸರಿಯಾಗಿ ಸಂಸಾರ ಮಾಡದ ರತ್ನಾ, ಪದೇ ಪದೇ ತವರು ಮನೆಗೆ ಬಂದು ಚಂದ್ರು ಜೊತೆಗಿನ ಸಂಬಂಧ ಮುಂದುವರಿಸಿದ್ದಳು. ಈ ವಿಷಯ ರತ್ನಾಳ ಪತಿ ಈರಪ್ಪ ಹಾಗೂ ಸಹೋದರ ಮಹಾಂತೇಶನಿಗೆ ತಿಳಿದು ಹಲವು ಬಾರಿ ಬುದ್ಧಿವಾದ ಹೇಳಿದ್ದರೂ ಇಬ್ಬರೂ ಕೇಳಿರಲಿಲ್ಲ.

ಪಕ್ಕಾ ಪ್ಲಾನ್ ಮಾಡಿ ಹತ್ಯೆ

ಚಂದ್ರು ಕುರಿಯನ್ನು ಮುಗಿಸಲು ಪ್ಲಾನ್ ಮಾಡಿದ ಪತಿ ಈರಪ್ಪ ಮತ್ತು ಸಹೋದರ ಮಹಾಂತೇಶ, ಮಾರ್ಚ್ 25ರ ಮಧ್ಯರಾತ್ರಿ ರತ್ನಾಳ ಕೈಯಿಂದಲೇ ಚಂದ್ರುಗೆ ಫೋನ್ ಮಾಡಿಸಿ ಮನೆಗೆ ಕರೆಸಿಕೊಂಡಿದ್ದಾರೆ. ಚಂದ್ರು ಬಂದಾಗ ಮನೆಯ ಶೌಚಾಲಯದಲ್ಲಿ ಅಡಗಿ ಕುಳಿತಿದ್ದ ಈರಪ್ಪ ಮತ್ತು ಮಹಾಂತೇಶ ಆತನ ಮೇಲೆರಗಿದ್ದಾರೆ. ನಂತರ ‘ನಿನ್ನ ಜೊತೆ ಮಾತನಾಡೋದಿದೆ ಬಾ’ ಎಂದು ನಿರ್ಜನ ಪ್ರದೇಶದ ಬ್ರಿಡ್ಜ್ ಬಳಿ ಕರೆದೊಯ್ದು ಮಾರಕಾಸ್ತ್ರಗಳಿಂದ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಸಾಕ್ಷ್ಯ ನಾಶಪಡಿಸಲು ಶವದ ಮೇಲೆ ಪೆಟ್ರೋಲ್ ಸುರಿದು ಸುಟ್ಟು ಹಾಕಿ ಅಲ್ಲಿಂದ ಪರಾರಿಯಾಗಿದ್ದರು.

48 ಗಂಟೆಯಲ್ಲಿ ಆರೋಪಿಗಳ ಬಂಧನ

ಮಾರ್ಚ್ 28ರಂದು ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆಯಾದಾಗ ಗದಗ ಎಸ್ಪಿ ರೋಹನ್ ಜಗದೀಶ್ ನೇತೃತ್ವದ ತಂಡ ತನಿಖೆ ಚುರುಕುಗೊಳಿಸಿತ್ತು. ಮೊದಲು ಚಂದ್ರು ಮನೆಯವರೇ ಕೊಲೆ ಮಾಡಿರಬಹುದು ಎಂದು ಶಂಕೆ ವ್ಯಕ್ತವಾಗಿತ್ತಾದರೂ, ಚಂದ್ರು ಹೊಂದಿದ್ದ ಮಹಿಳೆಯರ ಸಂಪರ್ಕದ ಜಾಡನ್ನು ಹಿಡಿದು ತನಿಖೆ ನಡೆಸಿದಾಗ ರತ್ನಾ ಹಾಗೂ ಆಕೆಯ ಕುಟುಂಬದ ಕೈವಾಡವಿರುವುದು ಪತ್ತೆಯಾಯಿತು. ಧಾರವಾಡ ಜಿಲ್ಲೆಯ ಸಂಬಂಧಿಕರ ಮನೆಯಲ್ಲಿ ಅಡಗಿದ್ದ ಮೂವರು ಆರೋಪಿಗಳನ್ನು ಪೊಲೀಸರು 48 ಗಂಟೆಯೊಳಗೆ ಹೆಡೆಮುರಿ ಕಟ್ಟಿದ್ದಾರೆ.

ಇದನ್ನೂ ಓದಿ: ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ?

ಕಂಡವರ ಹೆಂಡತಿಯ ಸಹವಾಸ ಮಾಡಿದ ಯುವಕ ಹೆಣವಾದರೆ, ಇಬ್ಬರು ಮಕ್ಕಳ ತಾಯಿ ಸೇರಿದಂತೆ ಮೂವರು ಜೈಲು ಪಾಲಾಗಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ಪ್ರಧಾನಿ ಮೋದಿ ಸಮ್ಮುಖದಲ್ಲಿ 'ವಿಂಗ್ಸ್ ಓವರ್ ಗಂಗಾ' ಏರ್ ಶೋ!
ಪ್ರಧಾನಿ ಮೋದಿ ಸಮ್ಮುಖದಲ್ಲಿ 'ವಿಂಗ್ಸ್ ಓವರ್ ಗಂಗಾ' ಏರ್ ಶೋ!
ಬೈಪಾಸ್​​ಗೆ ಆಗ್ರಹಿಸಿ ಕಗ್ಗಲಿಪುರ ನಿವಾಸಿಗಳಿಂದ ವಿನೂತನ ಪ್ರತಿಭಟನೆ
ಬೈಪಾಸ್​​ಗೆ ಆಗ್ರಹಿಸಿ ಕಗ್ಗಲಿಪುರ ನಿವಾಸಿಗಳಿಂದ ವಿನೂತನ ಪ್ರತಿಭಟನೆ
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ಪರಿಷತ್​​​ ಬಿಜೆಪಿ ಅಭ್ಯರ್ಥಿ ಸುರೇಶ್​​ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಪರಿಷತ್​​​ ಬಿಜೆಪಿ ಅಭ್ಯರ್ಥಿ ಸುರೇಶ್​​ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್