AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ದೇಶವನ್ನು ಕೇವಲ ಹಿಂದೂ ರಾಷ್ಟ್ರವನ್ನಾಗಿ ಮಾಡಲು ಆಗುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ

‘ಶ್ರೀರಾಮಮಂದಿರ ಉಳಿಯಬೇಕಾದರೆ ಹಿಂದೂ ರಾಷ್ಟ್ರ ಆಗಬೇಕು’ ಎಂಬ ಉಡುಪಿ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಗದಗದಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಈ ದೇಶ ಹಿಂದೂ ರಾಷ್ಟ್ರ ಆಗಬೇಕೆಂಬುದು ಬಿಜೆಪಿಯವರ ಸಿದ್ಧಾಂತ. ಕೇವಲ ಹಿಂದೂ ರಾಷ್ಟ್ರವನ್ನು ಮಾಡಲು ಆಗುವುದಿಲ್ಲ ಎಂದು ಹೇಳಿದ್ದಾರೆ.

ಈ ದೇಶವನ್ನು ಕೇವಲ ಹಿಂದೂ ರಾಷ್ಟ್ರವನ್ನಾಗಿ ಮಾಡಲು ಆಗುವುದಿಲ್ಲ ಎಂದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 17, 2023 | 2:39 PM

ಗದಗ, ಡಿಸೆಂಬರ್​​ 17: ಈ ದೇಶ ಹಿಂದೂ ರಾಷ್ಟ್ರ ಆಗಬೇಕೆಂಬುದು ಬಿಜೆಪಿಯವರ ಸಿದ್ಧಾಂತ. ನಮ್ಮ ದೇಶ ಹಿಂದೂಗಳ ರಾಷ್ಟ್ರ ಅಲ್ಲ, ಇದು ಬಹುತ್ವದ ದೇಶವಾಗಿದೆ. ಕೇವಲ ಹಿಂದೂ ರಾಷ್ಟ್ರವನ್ನು ಮಾಡಲು ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ‘ಶ್ರೀರಾಮಮಂದಿರ ಉಳಿಯಬೇಕಾದರೆ ಹಿಂದೂ ರಾಷ್ಟ್ರ ಆಗಬೇಕು’ ಎಂಬ ಉಡುಪಿ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಅವರು ಮಾತನಾಡಿದ್ದು, ಪ್ರಶ್ನೆ ಕೇಳುತ್ತಿದ್ದಂತೆ ಕೆಂಡಾಮಂಡಲರಾಗಿದ್ದಾರೆ.

ನಮ್ಮ ದೇಶದಲ್ಲಿ ಕ್ರಿಶ್ಚಿಯನ್, ಮುಸ್ಲಿಂ, ಬೌದ್ಧ, ಜೈನರು ಸಹ ಇದ್ದಾರೆ. 1950ರಲ್ಲಿ ಜನಸಂಘ ಸ್ಥಾಪಿಸಿ ಹಿಂದೂ ರಾಷ್ಟ್ರ ಮಾಡುತ್ತೇವೆ ಅಂದರು. 1925ರಲ್ಲಿ ಹೆಡ್ಗೇವಾರ್​ ಆರ್​ಎಸ್​​ಎಸ್​ ಸ್ಥಾಪನೆ ಮಾಡಿದ್ದರು. ಈ ಬಗ್ಗೆ ಬಿಜೆಪಿಯವರನ್ನು ಕೇಳಿ, ಅವರಿಗೆ ಇವೆಲ್ಲವೂ ಗೊತ್ತೇ ಇಲ್ಲ. ಬಿಜೆಪಿಯವರು ಸುಮ್ಮನೆ ಬುರುಡೆ ಬಿಡುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ತನಿಖೆ ಮಾಡಲು ನಮ್ಮ ಪೊಲೀಸರೇ ಸಮರ್ಥರಿದ್ದಾರೆ

ಬೆಳಗಾವಿ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸುವ ವಿಚಾರವಾಗಿ ಮಾತನಾಡಿದ ಅವರು, ತನಿಖೆಯನ್ನು ಎಲ್ಲಿಗೆ ಬೇಕಾದರೂ ವಹಿಸಲು ತಯಾರಾಗಿದ್ದೇನೆ. ತನಿಖೆಯಾಗಿ ತಪ್ಪಿತಸ್ಥರಿಗೆ‌ ಶಿಕ್ಷೆಯಾಗಬೇಕು. ಪ್ರಕರಣದ ತನಿಖೆ ಮಾಡಲು ನಮ್ಮ ಪೊಲೀಸರೇ ಸಮರ್ಥರಿದ್ದಾರೆ. ಸಾಕ್ಷ್ಯ ಸಂಗ್ರಹಿಸಿ ಶಿಕ್ಷೆ‌ ಕೊಡಿಸಲು ಪೊಲೀಸರೇ ತಯಾರಾಗಿದ್ದಾರೆ ಎಂದಿದ್ದಾರೆ.

ತಪ್ಪಿತಸ್ಥರು ಯಾರೇ ಇದ್ದರೂ ನಾವು ಕ್ರಮ ಕೈಗೊಳ್ಳುತ್ತೇವೆ

ಗದಗ ಸಾರಿಗೆ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣ ವಿಚಾರವಾಗಿ ಮಾತನಾಡಿದ ಅವರು, ತಪ್ಪಿತಸ್ಥರು ಯಾರೇ ಇದ್ದರೂ ನಾವು ಕ್ರಮ ಕೈಗೊಳ್ಳುತ್ತೇವೆ. ಭ್ರಷ್ಟಾಚಾರ ಪ್ರಕರಣವಿದ್ದರೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ಈ ಬಗ್ಗೆ ತನಿಖೆ ಮಾಡಿ ತಪ್ಪಿತಸ್ಥರಿಗೆ ಶಿಕ್ಷೆಗೆ ಒಳಪಡಿಸುತ್ತೇವೆ. ಹೊಸ ಬಸ್​ ಖರೀದಿಸಿ ಅಗತ್ಯವಿರುವ ಕಡೆ ಬಿಡಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೊಸ ವಂಟಮುರಿ ಘಟನೆಯಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಸಿದ್ದರಾಮಯ್ಯ

ರಾಜ್ಯದ ಅತಿಥಿ ಉಪನ್ಯಾಸಕರ ಬೇಡಿಕೆಗಳ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಒಂದು ಸೂತ್ರ ಕಂಡು ಹಿಡಿಯುತ್ತಿದ್ದಾರೆ. ಸಭೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ. ತ್ವರಿತವಾಗಿ ವರದಿ ಸಲ್ಲಿಸಲು ಸೂಚಿಸಿದ್ದೆ‌ನೆ ಎಂದರು.

ಕಾಂತರಾಜು ವರದಿ ಇನ್ನೂ ಸಲ್ಲಿಕೆನೇ ಆಗಿಲ್ಲ, ಸ್ವೀಕಾರ ಮಾಡಲು ಹೇಗೆ ಸಾಧ್ಯ

ಚಳಿಗಾಲ ಅಧಿವೇಶನದಲ್ಲಿ ಕಾಂತರಾಜು ವರದಿ ಸ್ವೀಕರಿಸುವ ಹೇಳಿಕೆ ವಿಚಾರವಾಗಿ ಮಾತನಾಡಿ, ಕಾಂತರಾಜು ವರದಿ ಇನ್ನೂ ಸಲ್ಲಿಕೆನೇ ಆಗಿಲ್ಲ, ಸ್ವೀಕಾರ ಮಾಡಲು ಹೇಗೆ ಸಾಧ್ಯ. ಶಾಶ್ವತ ಹಿಂದೂಳಿದ ವರ್ಗದ ಆಯೋಗದವರು ಇನ್ನೂ ವರದಿ ಕೊಟ್ಟಿಲ್ಲ. ವರದಿ‌ ಕೊಡಲು ಬಂದಾಗ ವಿಚಾರ ಮಾಡುತ್ತೇವೆ. ವರದಿಯಲ್ಲಿ ಏನಿದೆ ಅಂತ ಸಿಎಂ ಆದ ನನಗೆ ಗೊತ್ತಿಲ್ಲ. ಕೆಲವರು ಊಹಾಪೋಹಗಳ ಆಧಾರದ ಮೇಲೆ ವಿರೋಧ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ತಂತ್ರಕ್ಕೆ ಬಿಕೆ ಹರಿಪ್ರಸಾದ್ ಪ್ರತಿತಂತ್ರ, ಬೃಹತ್ ಹಿಂದುಳಿದ ಸಮಾವೇಶಕ್ಕೆ ಸಜ್ಜು

ವರದಿ ಬಂದ ನಂತರವೇ ವೈಜ್ಞಾನಿಕನಾ ಅವೈಜ್ಞಾನಿಕನಾ ಅಂತ ಗೊತ್ತಾಗುತ್ತೆ. ವರದಿ ಬಂದ ನಂತರ ನೋಡೋಣ. ಶಕ್ತಿ ಯೋಜನೆಯಡಿ ಎಷ್ಟು ಹಣ ಖರ್ಚು ಆಗುತ್ತೊ ಅಷ್ಟು ಹಣ ಕೊಡುತ್ತೇವೆ. ಸರ್ಕಾರ ಆ ಹಣವನ್ನು ತುಂಬಿಕೊಡುತ್ತೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ