ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಸುಂದರಿಗೆ 25 ಲಕ್ಷ ರೂ ಕೊಟ್ಟ: ಮುಂದೇನಾಯ್ತು?

ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿಗೆ ಓರ್ವ ವ್ಯಕ್ತಿ 25 ಲಕ್ಷ ರೂ ನೀಡಿ ಯಾಮಾರಿರುವಂತಹ ಘಟನೆ ಗದಗಿನಲ್ಲಿ ನಡೆದಿದೆ. ಈ ವಿಚಾರವಾಗಿ ದೂರು ನೀಡಲು ಹೋದ ವ್ಯಕ್ತಿಗೆ ರೋಣ ಸಿಪಿಐ ಬೆದರಿಕೆ ಹಾಕಿ 15 ಲಕ್ಷ ರೂ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ.

ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಸುಂದರಿಗೆ 25 ಲಕ್ಷ ರೂ ಕೊಟ್ಟ: ಮುಂದೇನಾಯ್ತು?
ರಾಘವೇಂದ್ರ ರಾಠೋಡ, ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿ
Edited By:

Updated on: Apr 27, 2025 | 11:32 AM

ಗದಗ, ಏಪ್ರಿಲ್ 27: ದೂರು ನೀಡಲು ಬಂದ ವ್ಯಕ್ತಿಯನ್ನು ಬೆದರಿಸಿದ (Threatens) ಸಿಪಿಐ, ಆತನಿಂದಲೇ 15 ಲಕ್ಷ ರೂ ಬೇಡಿಕೆ ಇಟ್ಟಿರುವಂತಹ ಘಟನೆ ನಗರಲ್ಲಿ ನಡೆದಿದೆ. ಗದಗ ಜಿಲ್ಲೆಯ ರೋಣ ಸಿಪಿಐ (CPI) ಸಿದ್ದಪ್ಪ ಬೀಳಗಿ ವಿರುದ್ಧ ಗಜೇಂದ್ರಗಡದ ರಾಘವೇಂದ್ರ ರಾಠೋಡ ಎಂಬಾತ ಗಂಭೀರ ಆರೋಪ ಮಾಡಿದ್ದಾರೆ. ಈಗಾಗಲೇ ಹೆದರಿಸಿ 3 ಲಕ್ಷ ರೂ. ಹಣ ವಸೂಲಿ‌ ಮಾಡಿದ್ದು, ಉಳಿದ ಹಣಕ್ಕಾಗಿ ನಿತ್ಯ ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ SP ಕಚೇರಿಗೆ ಲಿಖಿತ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದ್ದಾರೆ. ಸದ್ಯ ಸಿದ್ದಪ್ಪ ಬೀಳಗಿ ಕಿರುಕುಳಕ್ಕೆ ರಾಘವೇಂದ್ರ ಕಂಗಾಲಾಗಿದ್ದಾರೆ.

ಘಟನೆ ‌ಹಿನ್ನಲೆ

ರಾಘವೇಂದ್ರ ರಾಠೋಡಗೆ ಇನ್​ಸ್ಟಾಗ್ರಾಂನಲ್ಲಿ ಓರ್ವ ಯುವತಿ ಪರಿಚಯವಾಗಿದ್ದಾಳೆ. ದಿನಕಳೆದಂತೆ ಪರಿಚಯ ಬಳಿಕ ಪ್ರೀತಿಗೆ ತಿರುಗಿತ್ತು. ಬಳಿಕ ಕಷ್ಟ ಹೇಳಿಕೊಂಡ ಯುವತಿಗೆ ರಾಘವೇಂದ್ರ ಹಂತ ಹಂತವಾಗಿ ಬರೋಬ್ಬರಿ 25 ಲಕ್ಷ ರೂ ನೀಡಿದ್ದಾರೆ. ಬಳಿಕ ಹಣ ವಾಪಸ್ ಕೇಳಿದರೆ ಯುವತಿ ನೀಡಿಲ್ಲ. ಹೀಗಾಗಿ ರಾಘವೇಂದ್ರ ಆತ್ಮಹತ್ಯೆ ಯತ್ನಿಸಿದ್ದರು.

ಇದನ್ನೂ ಓದಿ: ಗದಗ: ಮಾಜಿ ಪ್ರೇಮಿಯಿಂದ ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್, ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ

ಇನ್ನು ಹಣ ಪಡೆದ ಯುವತಿ ಸಿಪಿಐ ಸಿದ್ದಪ್ಪ ಬೀಳಗಿ ಸಂಬಧಿಕಳಂತೆ. ಈ ವಿಚಾರಕ್ಕೆ ದೂರು ನೀಡಲು ಬಂದ ರಾಘವೇಂದ್ರಗೆ ಸಿಪಿಐನಿಂದ ಬೆದರಿಕೆ ಹಾಕಿ, ಹಲ್ಲೆ ಮಾಡಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಿದ ದೃಶ್ಯ ಠಾಣೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾಹಿತಿ ಹಕ್ಕಿನಡಿ ಸಿಸಿಟಿವಿ ದೃಶ್ಯಗಳು ನೀಡುವಂತೆ ಕೇಳಿದ್ದೇನೆ ಎಂದಿದ್ದಾರೆ. ಆಗ ನಿನ್ನ ಮೇಲೆ ರೇಪ್ ಕೇಸ್ ಹಾಕಿಸ್ತಿನಿ ಅಂತ ಸಿಪಿಪಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿದ್ದಾರೆ.

ಬೆದರಿಕೆ ಹಾಕಿ ಲಂಚ ಪಡೆದಿದ್ರೆ‌ ಸಿಪಿಐ ವಿರುದ್ಧ ಕ್ರಮ ಎಂದ ಎಸ್​​ಪಿ ಬಿಎಸ್ ನೇಮಗೌಡ

ಘಟನೆ ಬಗ್ಗೆ ಗದಗ ಎಸ್​​ಪಿ ಬಿಎಸ್ ನೇಮಗೌಡ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಈ ವಿಷಯದ ಬಗ್ಗೆ ಮಾಹಿತಿ ಪಡೆಯಲಾಗಿದೆ. ಬೆದರಿಕೆ, ಲಂಚ ಪಡೆದಿರುವ ಆರೋಪ ಸುಳ್ಳು. ಆ ಮಹಿಳೆಗೆ ನೀಡಿದ ಹಣ ಕೊಡಿಸುವಂತೆ ನಮ್ಮ ಅಧಿಕಾರಿಗಳಿಗೆ ದುಂಬಾಲು ಬಿದ್ದಿದ್ದ. ಹಣ ಕೊಡಿಸದ ಕಾರಣ ಅಧಿಕಾರಿಗಳ ವಿರುದ್ಧ ಆರೋಪ ಮಾಡುತ್ತಿದ್ದಾನೆ. ಈ ಬಗ್ಗೆ ನರಗುಂದ ಡಿವೈಎಸ್​​ಪಿ ನೇತೃತ್ವದಲ್ಲಿ ತನಿಖೆ ಮಾಡಿಸುತ್ತೇನೆ. ಒಂದು ವೇಳೆ ಸಿಪಿಐ ಬೆದರಿಕೆ ಹಾಕಿ, ಲಂಚ ಪಡೆದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Loading...
Unable to load recommendations.
Follow Us