ಬೇರೆ ಸ್ಥಳಗಳಿಂದ ಆಗಮಿಸುವ ಸಾರ್ವಜನಿಕರು ಮನೆಯಲ್ಲಿಯೇ ಇರಿ; ಗದಗ ಜಿಲ್ಲಾಧಿಕಾರಿ ಮನವಿ

ಬೇರೆ ಜಿಲ್ಲೆ ಹಾಗೂ ಪ್ರದೇಶಗಳಿಂದ ಆಗಮಿಸುವ ಸಾರ್ವಜನಿಕರ ಮೇಲೆ ಆಯಾ ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ನಗರ ಪ್ರದೇಶಗಳಲ್ಲಿ ಆಯಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಿಗಾ ವಹಿಸಲು ಸೂಚನೆ ನೀಡಲಾಗಿದೆ.

  • TV9 Web Team
  • Published On - 9:28 AM, 29 Apr 2021
ಬೇರೆ ಸ್ಥಳಗಳಿಂದ ಆಗಮಿಸುವ ಸಾರ್ವಜನಿಕರು ಮನೆಯಲ್ಲಿಯೇ ಇರಿ; ಗದಗ ಜಿಲ್ಲಾಧಿಕಾರಿ ಮನವಿ
ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು

ಗದಗ: ಕೊರೊನಾ ನಿಯಂತ್ರಿಸಲು ಜಿಲ್ಲಾದ್ಯಂತ ಕಠಿಣ ಕರ್ಪ್ಯೂ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಬೇರೆ ಸ್ಥಳಗಳಿಂದ ಆಗಮಿಸುವ ಸಾರ್ವಜನಿಕರು ಕಡ್ಡಾಯವಾಗಿ ಮನೆಯಲ್ಲಿಯೇ ಇರುವ ಮೂಲಕ ಸೋಂಕು ನಿಯಂತ್ರಣ ಕಾರ್ಯಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಮನವಿ ಮಾಡಿದ್ದಾರೆ. ಈ ಕುರಿತು ಟಿವಿ9 ಡಿಜಿಟಲ್​ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸುಂದರೇಶ್ ಬಾಬು, ಬೇರೆ ಕಡೆಯಿಂದ ಜಿಲ್ಲೆಗೆ ಆಗಮಿಸುವ ಸಾರ್ವಜನಿಕರಲ್ಲಿ ಕೊರೊನಾ ಸೋಂಕು ಲಕ್ಷಣಗಳು ಕಂಡು ಬಂದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡುವ ಮೂಲಕ ಸೋಂಕಿನ ಪರೀಕ್ಷೆಗೆ ಒಳಗಾಗಬೇಕು ಎಂದು ಹೇಳಿದರು.

ಬೇರೆ ಜಿಲ್ಲೆ ಹಾಗೂ ಪ್ರದೇಶಗಳಿಂದ ಆಗಮಿಸುವ ಸಾರ್ವಜನಿಕರ ಮೇಲೆ ಆಯಾ ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ನಗರ ಪ್ರದೇಶಗಳಲ್ಲಿ ಆಯಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಿಗಾ ವಹಿಸಲು ಸೂಚನೆ ನೀಡಲಾಗಿದೆ. ಗದಗ ಜಿಲ್ಲೆಗೆ ಆಗಮಿಸುವವರ ಮೇಲೆ ಒಟ್ಟಾರೆಯಾಗಿ ಆರೋಗ್ಯ ಇಲಾಖೆಯ ಎಲ್ಲ ಹಂತದ ಅಧಿಕಾರಿಗಳು ನಿಗಾ ವಹಿಸಿ, ಸೋಂಕು ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ.

ಅಲ್ಲದೇ ಕೊರೊನಾ ಸೋಂಕು ನಿಯಂತ್ರಣಕ್ಕೆ ಜಾರಿ ಮಾಡಲಾದ ಮಾರ್ಗಸೂಚಿಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು. ಉಲ್ಲಂಘಿಸಿದವರ ಮೇಲೆ ಶಿಸ್ತು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ

ಕಿಲ್ಲರ್ ಕೊರೊನಾ: ಆ್ಯಂಬುಲೆನ್ಸ್ ಚಾಲಕರಿಂದಲೇ ಅಂತ್ಯಸಂಸ್ಕಾರ, ವಿಡಿಯೋ ನೋಡಿ ವಿದಾಯ ಹೇಳುತ್ತಿರುವ ಕುಟುಂಬಸ್ಥರು

ಕೊರೊನಾ ಸೋಂಕಿಗೆ ತಾಯಿ ಬಲಿ; ವಿಷಯ ತಿಳಿದು 19 ವರ್ಷದ ಮಗಳು ಎದೆನೋವಿಗೆ ಬಲಿ

(Gadag District Collector sayas people coming from other places must be at home)