AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಹುಳು ಬಿದ್ದ ಆಹಾರ ಸರಬರಾಜು; ರಕ್ತ ಹೀರುವ ತಿಗಣೆ ಕಾಟಕ್ಕೆ ವಿದ್ಯಾರ್ಥಿಗಳು ವಿಲವಿಲ

ಗದಗ ಸೂರ್ಯ ನಗರದ ಸರ್ಕಾರಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು ತೀವ್ರ ಅವ್ಯವಸ್ಥೆ ಎದುರಿಸುತ್ತಿದ್ದಾರೆ. ತಿಗಣೆಗಳ ಕಾಟ, ಹುಳು ಬಿದ್ದ ಕಳಪೆ ಆಹಾರ ಹಾಗೂ ಶುದ್ಧ ಕುಡಿಯುವ ನೀರಿನ ಕೊರತೆಯಿಂದ ಬೇಸತ್ತ ವಿದ್ಯಾರ್ಥಿಗಳು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಾಯುಕ್ತರ ಭೇಟಿ ವೇಳೆ ಮಾತ್ರ ನಾಟಕೀಯ ಸ್ವಚ್ಛತೆ ತೋರುವ ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ, ಮೂಲಭೂತ ಸೌಕರ್ಯಗಳನ್ನು ಸರಿಪಡಿಸಲು ಆಗ್ರಹಿಸಿದ್ದಾರೆ.

ಗದಗ: ಹುಳು ಬಿದ್ದ ಆಹಾರ ಸರಬರಾಜು; ರಕ್ತ ಹೀರುವ ತಿಗಣೆ ಕಾಟಕ್ಕೆ ವಿದ್ಯಾರ್ಥಿಗಳು ವಿಲವಿಲ
ಸರ್ಕಾರಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು ತೀವ್ರ ಅವ್ಯವಸ್ಥೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Aug 07, 2026 | 11:17 AM

Share

ಗದಗ ಆ. 7: ಓದಿ ಮುಂದೆ ಬರಬೇಕು, ಸಾಧನೆ ಮಾಡಬೇಕು ಎಂಬ ನೂರಾರು ಕನಸು ಹೊತ್ತು ಸರ್ಕಾರಿ ಹಾಸ್ಟೆಲ್‌ಗೆ ಬಂದ ವಿದ್ಯಾರ್ಥಿಗಳಿಗೆ ಅವ್ಯವಸ್ಥೆಯ ಬಿಸಿ ತಟ್ಟಿದೆ. ಗದಗ ನಗರದ ಸೂರ್ಯ ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯವು ಸಂಪೂರ್ಣ ಅವ್ಯವಸ್ಥೆಯ ಆಗರವಾಗಿದ್ದು, ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ಹಾಸ್ಟೆಲ್‌ನಲ್ಲಿ ತಿಗಣೆಗಳ ಕಾಟ, ಕಳಪೆ ಆಹಾರ ಸರಬರಾಜು ಹಾಗೂ ಶುದ್ಧ ಕುಡಿಯುವ ನೀರಿನ ಅಭಾವದಿಂದ ಬೇಸತ್ತ ವಿದ್ಯಾರ್ಥಿಗಳು, ವಸತಿ ನಿಲಯಕ್ಕೆ ಭೇಟಿ ನೀಡಿದ ಅಧಿಕಾರಿಗಳನ್ನು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ.

ಹಾಸ್ಟೆಲ್‌ನಲ್ಲಿ ತಿಗಣೆಗಳ ಕಾಟ ವಿಪರೀತವಾಗಿದ್ದು, ರಾತ್ರಿಯಿಡೀ ವಿದ್ಯಾರ್ಥಿಗಳು ನಿದ್ರೆಯಿಲ್ಲದೆ ಕಳೆಯುವಂತಾಗಿದೆ. ಕ್ರಿಮಿನಾಶಕ ಸಿಂಪಡಿಸಿ ತಿಗಣೆಗಳನ್ನು ನಿಯಂತ್ರಿಸಿ ಎಂದು ಮನವಿ ಮಾಡಿದರೂ ವಾರ್ಡನ್ ಕನಿಷ್ಠ ಗಮನ ಹರಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಗೋಳು ತೋಡಿಕೊಂಡಿದ್ದಾರೆ.

ಹಾಸ್ಟೆಲ್‌ನಲ್ಲಿದ್ದುಕೊಂಡು ಹೊಟ್ಟೆತುಂಬ ಊಟ ಮಾಡುವುದಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹುಳು ಬಿದ್ದಿರುವ ಜೋಳ ಹಾಗೂ ಗೋಧಿಯನ್ನು ಬಳಸಿ ಅಡುಗೆ ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ‘ವರ್ಕ್ ಫ್ರಂ ಹೋಂ’ ಹೆಸರಲ್ಲಿ ಕೋಟಿ ಕೋಟಿ ವಂಚಿಸಿದ್ದ ಖತರ್ನಾಕ್ ದಂಪತಿ ಪೊಲೀಸರ ವಶ!

ಹಾಸ್ಟೆಲ್‌ನಲ್ಲಿ ಸುಮಾರು 100 ವಿದ್ಯಾರ್ಥಿಗಳು ವಾಸಿಸುತ್ತಿದ್ದಾರೆ. ಸಾಮಾನ್ಯ ದಿನಗಳಲ್ಲಿ ಈ ಹಾಸ್ಟೆಲ್ ‘ತಿಪ್ಪೆಗುಂಡಿ’ಯಂತೆ ಇರುತ್ತದೆ. ಆದರೆ, ಲೋಕಾಯುಕ್ತ ಅಧಿಕಾರಿಗಳು ತಪಾಸಣೆಗೆ ಬರುತ್ತಾರೆ ಎಂಬ ಮಾಹಿತಿ ಸಿಕ್ಕ ತಕ್ಷಣ ಮೇಲ್ನೋಟಕ್ಕೆ ಸುಣ್ಣ-ಬಣ್ಣ ಬಳಿದು ಸ್ವಚ್ಛಗೊಳಿಸುವ ನಾಟಕವಾಡುತ್ತಾರೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುದ್ಧ ಕುಡಿಯುವ ನೀರು ಹಾಗೂ ಉತ್ತಮ ಆಹಾರ ಒದಗಿಸದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಹಾಸ್ಟೆಲ್‌ನಲ್ಲಿರುವ ಮೂಲಭೂತ ಅವ್ಯವಸ್ಥೆಗಳನ್ನು ತಕ್ಷಣವೇ ಸರಿಪಡಿಸಬೇಕೆಂದು ವಿದ್ಯಾರ್ಥಿಗಳು ಒಮ್ಮತದಿಂದ ಆಗ್ರಹಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು