ಹಾಲಕೆರೆ ಶ್ರೀ ಅಭಿನವ ಅನ್ನದಾನೇಶ್ವರ ಸ್ವಾಮಿಗಳು ಲಿಂಗೈಕ್ಯ; ಅಂತಿಮ ದರ್ಶನಕ್ಕೆ ವ್ಯವಸ್ಥೆ

ಮಠಕ್ಕೆ ಎಸ್​ಪಿ ಶಿವಪ್ರಕಾಶ್ ದೇವರಾಜು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮಠದಲ್ಲಿ ಬಂದೋಬಸ್ತ್, ಮತ್ತಿತರೆ ವ್ಯವಸ್ಥೆ ಬಗ್ಗೆ ಪರಿಶೀಲನೆ ಮಾಡಲಾಗಿದೆ. ನಾಳೆ (ನವೆಂಬರ್ 23) ಸಂಜೆ ಪೊಲೀಸ್​ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಲಿದೆ.

ಹಾಲಕೆರೆ ಶ್ರೀ ಅಭಿನವ ಅನ್ನದಾನೇಶ್ವರ ಸ್ವಾಮಿಗಳು ಲಿಂಗೈಕ್ಯ; ಅಂತಿಮ ದರ್ಶನಕ್ಕೆ ವ್ಯವಸ್ಥೆ
ಹಾಲಕೆರೆಯ ಅನ್ನದಾನೇಶ್ವರ ಮಠದ ಡಾ. ಅಭಿನವ ಅನ್ನದಾನ ಸ್ವಾಮೀಜಿ

ಗದಗ: ಹಾಲಕೆರೆಯ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠದ ಅಭಿನವ ಅನ್ನದಾನೇಶ್ವರ, ಡಾ. ಸಂಗನಬಸವ ಮಹಾಸ್ವಾಮಿಗಳು ಲಿಂಗೈಕ್ಯ ಹಿನ್ನಲೆ, ಡಾ. ಸಂಗನಬಸವ ಸ್ವಾಮೀಜಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಹಾಲಕೆರೆ ಗ್ರಾಮದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ರಾತ್ರಿ 8ಕ್ಕೆ ಹಾಲಕೆರೆ ಗ್ರಾಮದ ಮಠಕ್ಕೆ ಪಾರ್ಥಿವ ಶರೀರ ಆಗಮಿಸಲಿದೆ. ಶ್ರೀಅನ್ನದಾನೇಶ್ವರ ಮಠದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಮಠಕ್ಕೆ ಎಸ್​ಪಿ ಶಿವಪ್ರಕಾಶ್ ದೇವರಾಜು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮಠದಲ್ಲಿ ಬಂದೋಬಸ್ತ್, ಮತ್ತಿತರೆ ವ್ಯವಸ್ಥೆ ಬಗ್ಗೆ ಪರಿಶೀಲನೆ ಮಾಡಲಾಗಿದೆ. ನಾಳೆ (ನವೆಂಬರ್ 23) ಸಂಜೆ ಪೊಲೀಸ್​ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಲಿದೆ.

ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಹಾಲಕೆರೆಯ ಡಾ ಅಭಿನವ ಅನ್ನದಾನ ಸ್ವಾಮೀಜಿಗಳು ಹೃದಯ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ. ಹಾಲಕೆರೆ ಶ್ರೀ ಅನ್ನದಾನೇಶ್ವರ ಸಂಸ್ಥಾನ ಮಠ ಹೊಸಪೇಟೆ, ಬಳ್ಳಾರಿಯ ಕೊಟ್ಟೂರು ಸ್ವಾಮಿಮಠ, ಶ್ರೀಮದ ಶಿವಯೋಗಿ ಮಂದಿರದ ಅಧ್ಯಕ್ಷರಾಗಿದ್ದರು. ಇಂದು ಸಂಜೆ ಅಥವಾ ನಾಳೆ ಹಾಲಕೆರೆ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.

ಈ ಮಠ 28 ಶಾಖಾ ಮಠಗಳನ್ನು ಹೊಂದಿದೆ. ಹಾಗೂ ಇದೇ ನವೆಂಬರ್ 10ಕ್ಕೆ ಹಾಲಕೇರಿಯ 13ನೇ ಪೀಠಾಧಿಪತಿಯಾಗಿ ನೂತನ ಮುಪ್ಪಿನ ಬಸವಲಿಂಗ ಸ್ವಾಮೀಜಿ ಅಧಿಕಾರ ವಹಿಸಿಕೊಂಡಿದ್ದರು.

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಕೊಟ್ಟೂರು ಮಠ ಸಂಸ್ಥಾನದ ಜಗದ್ಗುರು ಡಾ.ಸಂಗನ ಬಸವ ಮಹಾಸ್ವಾಮಿ (87) ಲಿಂಗೈಕ್ಯರಾಗಿದ್ದಾರೆ. ಅಲ್ಲದೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಹಾಲಕೆರೆಯ ಅನ್ನದಾನೇಶ್ವರ ಸಂಸ್ಥಾನ ಮಠದ ಡಾ.ಅಭಿನವ ಅನ್ನದಾನ ಸ್ವಾಮೀಜಿ (85) ಕೂಡ ಲಿಂಗೈಕ್ಯರಾಗಿದ್ದಾರೆ.

ಉತ್ತರ ಕರ್ನಾಟಕದ ಹಿರಿಯ ವೀರಶೈವ ಲಿಂಗಾಯತ ಜಗದ್ಗುರುಗಳಾಗಿದ್ದ ಡಾ.ಸಂಗನ ಬಸವ ಮಹಾಸ್ವಾಮಿ ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ‌ ಅಪೋಲೊ ಅಸ್ಪತ್ರೆಯಲ್ಲಿ ದಾಖಲಾಗಿದ್ರು. ಆದ್ರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ 5.30 ಕ್ಕೆ ಲಿಂಗೈಕ್ಯರಾಗಿದ್ದಾರೆ.

ಇದನ್ನೂ ಓದಿ: ಕೊಟ್ಟೂರು ಮಠದ ಡಾ. ಸಂಗನ ಬಸವ ಮಹಾಸ್ವಾಮಿ, ಹಾಲಕೆರೆ ಅನ್ನದಾನೇಶ್ವರ ಮಠದ ಡಾ. ಅಭಿನವ ಸ್ವಾಮೀಜಿ ಲಿಂಗೈಕ್ಯ

ಇದನ್ನೂ ಓದಿ: ಪತ್ನಿಯೊಂದಿಗೆ ವಿಶ್ವ ಪರ್ಯಟನೆಗೆ ಹೆಸರುವಾಸಿಯಾಗಿದ್ದ ಕೇರಳದ ಟೀ ಮಾರಾಟಗಾರ ನಿಧನ

Click on your DTH Provider to Add TV9 Kannada