ಗದಗ: ಕರ್ನಾಟಕ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯ ‘ವಚನ ದರ್ಶನ’ಕ್ಕೆ ಕೇಸರೀಕರಣ ಬಣ್ಣ

ಗದಗ ನಗರದ ನಾಗಾವಿ ಬಳಿಯ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ವಿಶ್ವವಿದ್ಯಾಲಯ ಈಗ ವಿವಾದದ ಸುಳಿಯಲ್ಲಿ ಸಿಲಿಕಿಕೊಂಡಿದೆ. ವಚನ ದರ್ಶನ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಪ್ರಗತಿಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

ಗದಗ: ಕರ್ನಾಟಕ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯ ‘ವಚನ ದರ್ಶನ’ಕ್ಕೆ ಕೇಸರೀಕರಣ ಬಣ್ಣ
ಕರ್ನಾಟಕ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯ Image Credit source: Facebook
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: Ganapathi Sharma

Updated on: Dec 15, 2023 | 11:30 AM

ಗದಗ, ಡಿಸೆಂಬರ್ 15: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ವಿಶ್ವ ವಿದ್ಯಾಲಯದಲ್ಲಿ (Karnataka Rural Development University) ರಾಷ್ಟ್ರೀಯ ಮಟ್ಟದ ‘ವಚನ ದರ್ಶನ’ ಎನ್ನುವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮ ಈವಾಗ ವಿವಾದಕ್ಕೆ ಕಾರಣವಾಗಿದೆ. ಆರ್​ಎಸ್​ಎಸ್ ಸಹಭಾಗಿ ಸಂಘಟನೆಗಳೊಂದಿಗೆ ವಚನ ದರ್ಶನ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ನಡೆಸಲು ಬಿಡೋದಿಲ್ಲ ಎಂದು ಕೆಲವು ಸಂಘಟನೆಗಳು ಎಚ್ಚರಿಕೆ ನೀಡಿವೆ. ಇದೊಂದು ಪೂರ್ವನಿಯೋಜಿತ ಕಾರ್ಯಕ್ರಮವಾಗಿದ್ದು ಮಾಡಿಯೇ ತೀರುತ್ತೇವೆ ಅಂತ ಕುಲಪತಿಗಳು ಸವಾಲು ಹಾಕಿದ್ದಾರೆ.

ಗದಗ ನಗರದ ನಾಗಾವಿ ಬಳಿಯ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ವಿಶ್ವವಿದ್ಯಾಲಯ ಈಗ ವಿವಾದದ ಸುಳಿಯಲ್ಲಿ ಸಿಲಿಕಿಕೊಂಡಿದೆ. ವಚನ ದರ್ಶನ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಪ್ರಗತಿಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಇದೇ 17 ರಿಂದ ಮೂರು ದಿನಗಳ ಕಾಲ ರಾಷ್ಟ್ರೀಯ ವಿಚಾರ ಸಂಕೀರಣ ವಚನ ದರ್ಶನ ಆಯೋಜನೆ ಮಾಡಲಾಗಿದೆ. ಈಗಾಲೇ ಗದಗನ ತೋಂಟದಾರ್ಯ ಮಠದ ಶ್ರೀಗಳು ಸೇರಿದಂತೆ, ಹಲವರನ್ನು ಕಾರ್ಯಕ್ರಮಕ್ಕೆ ಆಹ್ವಾನ ಮಾಡಲಾಗಿದೆ. ಆದ್ರೆ, ವಚನ ದರ್ಶನ ಕಾರ್ಯಕ್ರಮಕ್ಕೆ ಈಗ ತೀವ್ರ ವಿರೋಧ ವ್ಯಕ್ತಪಡೆಸಲಾಗಿದೆ. ಆರ್​​ಎಸ್​ಎಸ್ ಸಹಭಾಗಿತ್ವದ ವಿವಿಧ ಸಂಸ್ಥೆಗಳ ಮುಖಾಂತರ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಅಂತ ಗಂಭೀರವಾದ ಆರೋಪ ಕೇಳಿ ಬಂದಿದೆ. ಪ್ರಗತಿಪರ ಹಾಗೂ ದಲಿತ ಸಂಘಟನೆಗಳು ಹಾಗೂ ಸಾಹಿತಿ ಬಸವರಾಜ್ ಸೊಳಿಭಾವಿ ತೀವ್ರವಾಗಿ ವಿರೋಧ ಮಾಡಿದ್ದಾರೆ.

ವಿವಿಯನ್ನು ಕೇಸರಿ ಕರಣ ಮಾಡಲು ಹೊರಟ್ಟಿದ್ದಾರೆ ಕೆಂಡಕಾರಿದ್ದಾರೆ. ಕಾನೂನು ಸಚಿವ ಎಚ್​​ಕೆ ಪಾಟೀಲ್ ಹಾಗೂ ರಾಜ್ಯ ಸರ್ಕಾರ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿರೋ ವಚನ ದರ್ಶನ ಕಾರ್ಯಕ್ರಮ ರದ್ದು ಮಾಡಬೇಕು, ಇಲ್ಲವಾದರೆ ಚಳವಳಿ ಮಾಡೋದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಗದಗ ಜಿಲ್ಲಾ ಪಂಚಾಯತ್: ಸಿಬ್ಬಂದಿ ನೇಮಕಾತಿಗೆ ವಿಳಂಬ ಧೋರಣೆ, ಅಧಿಕಾರಿಯ ಲಂಚಾವತಾರ ಕಾರಣ?

17 ರಿಂದ ಮೂರು ದಿನಗಳ ಕಾಲ ವಿವಿಯಲ್ಲಿ ವಚನ ದರ್ಶನ ಕಾರ್ಯಕ್ರಮಕ್ಕೆ ಸಿದ್ದತೆಗಳು ನಡೆದಿವೆ‌‌. ಈ ಬಗ್ಗೆ ಮಾತನಾಡಿದ ವಿವಿಯ ಕುಲಪತಿ ಪ್ರೊ ವಿಷ್ಣುಕಾಂತ ಚಟಪಲ್ಲಿ ಅವರು, ವಚನ ದರ್ಶನ ಕಾರ್ಯಕ್ರಮದ ಉದ್ದೇಶ, ಭಕ್ತ ಕಾಯಕ, ದಾಸೋಹವಾಗಿದೆ. ಈ ಮೂರು ವಿಷಯಗಳಿಗೆ ರಾಷ್ಟ್ರೀಯ ಪ್ರಬಂಧ ಮಂಡಿಸಲು ಎಲ್ಲರಿಗೂ ಅಹ್ವಾನ ನೀಡಲಾಗಿದೆ. ಇದೊಂದು ಶೈಕ್ಷಣಿಕ, ಚಿಂತನೆಯಾಗಿದ್ದು, ಇದನ್ನು ಜನರಿಗೆ ತಲುಪಿಸುವ ಕೆಲಸವನ್ನು ನಾವು ಮಾಡ್ತಾಯಿದ್ದೇವೆ. ಆರ್​​ಎಸ್​ಎಸ್ ಸಹಭಾಗಿತ್ವದ ಸಂಸ್ಥೆಗಳೊಂದಿಗೆ ಕಾರ್ಯಕ್ರಮ ಆಯೋಜನೆ ಮಾಡಿಲ್ಲಾ, ಅವು ಸ್ವತಂತ್ರ್ಯ ಸಂಸ್ಥೆಗಳಾಗಿದ್ದು, ಇದೊಂದು ವಿಶ್ವ ವಿದ್ಯಾಲಯದ ಶೈಕ್ಷಣಿಕ ಕಾರ್ಯಕಮವಾಗಿದೆ. ನಾವು ಕಾರ್ಯಕ್ರಮ ಮಾಡೇ ಮಾಡುತ್ತೇವೆ, ಚಳುವಳಿ ಬಸವಣ್ಣವರ ಕಾಲದಿಂದಲೂ ಬಂದಿದೆ, ಅದು ಅವರ ಅಭಿವ್ಯಕ್ತಿ ಸ್ವಾತಂತ್ರ್ಯವಾಗಿದೆ, ನಾವು ಕಾರ್ಯಕ್ರಮ ಮಾಡುತ್ತೇವೆ ಎಂದು ಕುಲಪತಿ ಪ್ರೊ ವಿಷ್ಣುಕಾಂತ ಚಟಪಲ್ಲಿ ಹೇಳಿದ್ದಾರೆ.

ಒಟ್ಟಿನಲ್ಲಿ ಗದಗ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ವಿಶ್ವವಿದ್ಯಾಲಯದಲ್ಲಿ ನಡೆಯುವ ಕಾರ್ಯಕ್ರಮ ಸಾಕಷ್ಟು ಸದ್ದು ಮಾಡುತ್ತಿದೆ. ವಚನ ದರ್ಶನ ಕಾರ್ಯಕ್ರಮ ಯಶಸ್ವಿಯಾಗುತ್ತಾ ಅಥವಾ ರದ್ದಾಗುತ್ತಾ ಕಾದು ನೋಡಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತ ಹಸುಗಳು
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಪ್ರಿಯಕರನ ಜೊತೆ ಇದ್ದಾಗ ದಿಢೀರನೇ ಮನೆಗೆ ಎಂಟ್ರಿ ಕೊಟ್ಟ ಗಂಡ; ಮುಂದೆನಾಯಿತು?
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​