AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಅನುದಾನ ಬಾರದಿದ್ದಕ್ಕೆ ಆತ್ಮಹತ್ಯೆ ಪತ್ರ ಬರೆದಿಟ್ಟು ಕೆಆರ್​ಐಡಿಎಲ್ ಎಇಇ ನಾಪತ್ತೆ! ಕುಟುಂಬಸ್ಥರು ಕಂಗಾಲು

ಸರ್ಕಾರದಿಂದ ಕೋಟ್ಯಾಂತರ ರೂಪಾಯಿ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಗದಗ ಕೆಆರ್‌ಐಡಿಎಲ್ ಎಇಇ ಫರ್ವೀಜ್ ಧಾರವಾಡ ಆತ್ಮಹತ್ಯೆ ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದಾರೆ. ಸಬ್ ಗುತ್ತಿಗೆದಾರರ ಕಿರುಕುಳ ಮತ್ತು ಮಾನಸಿಕ ಒತ್ತಡದಿಂದಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಕುಟುಂಬಸ್ಥರು ಆತಂಕಗೊಂಡಿದ್ದು, ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಗದಗ: ಅನುದಾನ ಬಾರದಿದ್ದಕ್ಕೆ ಆತ್ಮಹತ್ಯೆ ಪತ್ರ ಬರೆದಿಟ್ಟು ಕೆಆರ್​ಐಡಿಎಲ್ ಎಇಇ ನಾಪತ್ತೆ! ಕುಟುಂಬಸ್ಥರು ಕಂಗಾಲು
ಆತ್ಮಹತ್ಯೆ ಪತ್ರ ಬರೆದಿಟ್ಟು ನಾಪತ್ತೆಯಾದ ಅಧಿಕಾರಿ ಫರ್ವೀಜ್
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Sep 26, 2026 | 11:15 AM

Share

ಮುಖ್ಯಾಂಶಗಳು

  • ಅನುದಾನ ಬಾರದೆ ಗದಗ ಕೆಆರ್​ಐಡಿಎಲ್ ಎಇಇ ಫರ್ವೀಜ್ ಧಾರವಾಡ ನಾಪತ್ತೆಯಾಗಿದ್ದಾರೆ.
  • ಸಬ್ ಗುತ್ತಿಗೆದಾರರ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಪತ್ರ ಬರೆದಿಟ್ಟ ಅಧಿಕಾರಿ.
  • ಬೆಟಗೇರಿ ಬಡಾವಣೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರ ತನಿಖೆ ಮುಂದುವರಿದಿದೆ.

ಗದಗ, ಸೆಪ್ಟೆಂಬರ್ 26: ಸರ್ಕಾರದ ಅನುದಾನ ಬಿಡುಗಡೆಯಾಗದಿದ್ದಕ್ಕೆ ನೊಂದು, ಸಬ್ ಗುತ್ತಿಗೆದಾರರ ಕಿರುಕುಳ ತಾಳಲಾರದೆ ಕೆಆರ್‌ಐಡಿಎಲ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಫರ್ವೀಜ್ ಧಾರವಾಡ ಎಂಬುವವರು ಆತ್ಮಹತ್ಯೆ ಪತ್ರ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ಗದಗದಲ್ಲಿ ನಡೆದಿದೆ.

ಫರ್ವೀಜ್ ಬರೆದ ಪತ್ರದಲ್ಲೇನಿದೆ?

ಸೆಪ್ಟೆಂಬರ್ 12ರಂದು ಬೆಂಗಳೂರಿನ ಕೆಆರ್​ಐಡಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಫರ್ವೀಜ್, “ಕೋಟಿಗಟ್ಟಲೆ ಅನುದಾನ ಬಾರದ ಕಾರಣ ನಿತ್ಯ ಸಬ್ ಗುತ್ತಿಗೆದಾರರು ಮನೆ ಮುಂದೆ ಬಂದು ಕೂಗಾಟ ನಡೆಸುತ್ತಿದ್ದಾರೆ. ಫೋನ್ ಮಾಡಿ ಕಿರುಕುಳ ನೀಡುತ್ತಿದ್ದಾರೆ. ಇದರಿಂದ ನನ್ನ ಮಾನಸಿಕ ಆರೋಗ್ಯ ಸಂಪೂರ್ಣ ಹದಗೆಟ್ಟಿದೆ. ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗದೆ ಜೀವನ ಕೊನೆಗಾಣಿಸುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ. ಉಪವಿಭಾಗಕ್ಕೆ ಅನುದಾನ ನೀಡಿ ಸಮಸ್ಯೆ ಬಗೆಹರಿಸಿ, ದಯವಿಟ್ಟು ನನ್ನ ಕುಟುಂಬಕ್ಕೆ ಕಿರುಕುಳ ನೀಡಬೇಡಿ” ಎಂದು ಉಲ್ಲೇಖಿಸಿದ್ದಾರೆ.

ಕುಟುಂಬಸ್ಥರ ಅಳಲು, ದೂರು ದಾಖಲು

ಸೆಪ್ಟೆಂಬರ್ 13ರಂದು ಬೆಂಗಳೂರಿನಲ್ಲಿ ಸಭೆ ಇದೆ ಎಂದು ಹೊರಟಿದ್ದ ಫರ್ವೀಜ್, ಪತ್ನಿ ಸೆಗುಪ್ತಾರಿಗೆ ಕರೆ ಮಾಡಿ ಬೆಂಗಳೂರು ತಲುಪಿರುವುದಾಗಿ ಹೇಳಿದ್ದರು. ನಂತರ ಗಂಡನ ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಗಾಬರಿಗೊಳಗಾದ ಪತ್ನಿ, ಅತ್ತೆ ಮಾವನಿಗೆ ವಿಷಯ ತಿಳಿಸಿದ್ದರು. ಮಗನ ಕುರಿತು ವಿಚಾರಿಸಲು ಇಲಾಖೆಯ ಎಕ್ಸಿಕ್ಯೂಟಿವ್ ಇಂಜಿನಿಯರ್​ಗೆ ಕರೆ ಮಾಡಿದಾಗ, ಫರ್ವೀಜ್ ಆಫೀಸಿಗೆ ಬಂದಿಲ್ಲವೆಂಬುದು ಕುಟುಂಬಸ್ಥರಿಗೆ ತಿಳಿದಿದೆ.

LIVE TV

ಇದರಿಂದ ಆತಂಕಕ್ಕೊಳಗಾದ ಕುಟುಂಬಸ್ಥರು, ಗದಗ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಸೆಪ್ಟೆಂಬರ್ 16ರಂದು ಪ್ರಕರಣ ದಾಖಲಿಸಿದ್ದಾರೆ. ವಿಶೇಷ ಪಡೆ ರಚಿಸಿ ಅಧಿಕಾರಿಯನ್ನು ಶೀಘ್ರವೇ ಪತ್ತೆ ಹಚ್ಚಬೇಕು ಮತ್ತು ಅವರಿಗೆ ಎದುರಾಗಿರುವ ಸಮಸ್ಯೆಯನ್ನು ಸರ್ಕಾರ ತಕ್ಷಣವೇ ಬಗೆಹರಿಸಬೇಕೆಂದು ಕಂಗಾಲಾಗಿರುವ ಕುಟುಂಬಸ್ಥರು ಮನವಿ ಮಾಡಿದ್ದಾರೆ. ಬೆಟಗೇರಿ ಬಡಾವಣೆ ಪೊಲೀಸರು ಪ್ರಕರಣದ ತನಿಖೆ ಚುರುಕುಗೊಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:21 am, Sat, 26 September 26

Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More