AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಕೆರೆಯಲ್ಲಿ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿಗಳಿಬ್ಬರು ಸಾವು; ಓರ್ವ ಬಚಾವ್​

ಗದಗ ತಾಲೂಕಿನ ಚಿಂಚಲಿ ಗ್ರಾಮದ ಕೆರೆಯಲ್ಲಿ ಈಜಲು ತೆರಳಿದ್ದ 9ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟಿದ್ದಾರೆ. ಮೂವರ ಪೈಕಿ ಒಬ್ಬ ವಿದ್ಯಾರ್ಥಿ ಪಾರಾಗಿದ್ದಾನೆ. ಅಗ್ನಿಶಾಮಕ ದಳ ತಡವಾಗಿ ಬಂದಿದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಳಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಗದಗ: ಕೆರೆಯಲ್ಲಿ ಈಜಲು ತೆರಳಿದ್ದ 9ನೇ ತರಗತಿ ವಿದ್ಯಾರ್ಥಿಗಳಿಬ್ಬರು ಸಾವು; ಓರ್ವ ಬಚಾವ್​
ಕೆರೆImage Credit source: tv9 kannada
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Feb 28, 2026 | 8:36 PM

Share

ಗದಗ, ಫೆಬ್ರವರಿ 28: ಕರೆಯಲ್ಲಿ ಈಜಲು ತೆರಳಿ 9ನೇ ತರಗತಿಯ ಮೂವರ ಪೈಕಿ ಇಬ್ಬರು ವಿದ್ಯಾರ್ಥಿಗಳು (Students) ಸಾವನ್ನಪ್ಪಿರುವಂತಹ (death) ಘಟನೆ ಗದಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ನಡೆದಿದೆ. ಡಾ. ಅಂಬೇಡ್ಕರ ಮೆಟ್ರಿಕ್ ಪೂರ್ವ ವಸತಿ ನಿಲಯದ ಪರಶುರಾಮ ವಡ್ಡರ ಮತ್ತು ಬಸವರಾಜ ಬಡಿಗೇರ ಮೃತ ವಿದ್ಯಾರ್ಥಿಗಳು. ಓರ್ವ ವಿದ್ಯಾರ್ಥಿ ಬಚಾವ್ ಆಗಿದ್ದಾನೆ. ಮುಳಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಪರಶುರಾಮ ವಡ್ಡರ, ಬೆಳದಡಿ ಗ್ರಾಮದ ಬಸವರಾಜ ಬಡಿಗೇರ ಮತ್ತು ಇನ್ನೋರ್ವ ವಿದ್ಯಾರ್ಥಿ ಖಾಸಗಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದರು. ಇಂದು ಶಾಲೆ ಮುಗಿಸಿಕೊಂಡು 3 ವಿದ್ಯಾರ್ಥಿಗಳು ಕೆರೆಯಲ್ಲಿ ಈಜಲು ತೆರಳಿದ್ದಾರೆ.

ಇದನ್ನೂ ಓದಿ: ಕುಡಿದ ನಶೆಯಲ್ಲಿ ವ್ಯಕ್ತಿ ಮೇಲೆ ಕಾರು ಹರಿಸಿ ಕೊಲೆ; ಪ್ರಭಾವಿ ಮುಖಂಡರ ಮಕ್ಕಳು ಅಂದರ್!

ಈ ವೇಳೆ ಇಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದು, ಓರ್ವ ವಿದ್ಯಾರ್ಥಿ ಬಚಾವ್​ ಆಗಿದ್ದಾನೆ. ಸದ್ಯ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರೂ ಬರದಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಇನ್ನು 20 ಅಡಿ ಆಳದ ಕೆರೆಯಲ್ಲಿ ಸ್ಥಳೀಯರು ಮತ್ತು ಮುಳುಗು ತಜ್ಞರಿಂದ ಸತತ ಆರು ಗಂಟೆಗಳ ನಿರಂತರ ಶೋಧ ಬಳಿಕ ಬಾಲಕರ ಶವ ಪತ್ತೆಯಾಗಿವೆ.

ದುಷ್ಕರ್ಮಿಗಳಿಂದ ಯುವಕನ ಕತ್ತುಕೊಯ್ದು ಬರ್ಬರ ಹತ್ಯೆ

ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಹೊರವಲಯದಲ್ಲಿ ದುಷ್ಕರ್ಮಿಗಳಿಂದ ಯುವಕನ ಕತ್ತುಕೊಯ್ದು ಬರ್ಬರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಶಿಗ್ಲಿ ಗ್ರಾಮದ ಮೊಹ್ಮದ್ ಫಾರೂಕ್ ಶೇಖ್ ಸನದಿ(25) ಕೊಲೆ ಆದ ಯುವಕ. ಘಟನಾ ಸ್ಥಳಕ್ಕೆ ಲಕ್ಷ್ಮೇಶ್ವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ SSLC ವಿದ್ಯಾರ್ಥಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​: ಸಂಕೇತ್ ಕೊಲೆ ರಹಸ್ಯ ಬಯಲು!

ಸದ್ಯ ಪೊಲೀಸರಿಗೆ ಯುವಕನ ಕೊಲೆ ಕೇಸ್​ ತಲೆನೋವಾಗಿದೆ. ಹಂತಕರ ಸುಳಿವಿಗಾಗಿ ಖಾಕಿ ತೀವ್ರ ಶೋಧ ನಡೆಸಿದೆ. ಸೋಕೋ ತಂಡದಿಂದ ಪರಿಶೀಲನೆ ನಡೆಸಿದ್ದು, ಹಂತಕರ ಪತ್ತೆಗಾಗಿ ಶ್ವಾನ ದಳದಿಂದ ಶೋಧ ಮಾಡಲಾಗಿದೆ. ನಿನ್ನೆ ಮಧ್ಯಾಹ್ನ ಫೋನ್ ಕಾಲ ಬಂದ ಬಳಿಕ ಮನೆಯಿಂದ ಹೋಗಿದ್ದ ಯುವಕ ಇದೀಗ ಹೆಣವಾಗಿ ಪತ್ತೆ ಆಗಿದ್ದಾನೆ. ಸದ್ಯ ಯುವಕನ ಹತ್ಯೆ ಲಕ್ಷ್ಮೇಶ್ವರ ಪಟ್ಟಣವನ್ನು ಬೆಚ್ಚಿಬಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:55 pm, Sat, 28 February 26

Follow Us