Bribe: ಶಾಲಾ ಕಟ್ಟಡದ ಫಿಟ್ನೆಸ್ ಸರ್ಟಿಫಿಕೇಟ್ ಕೊಡಲು ಲಂಚ ಕೇಳಿದ್ದ ಅಗ್ನಿಶಾಮಕ ದಳ ಅಧಿಕಾರಿ ಲೋಕಾಯುಕ್ತ ಬಲೆಗೆ

| Updated By: ಸಾಧು ಶ್ರೀನಾಥ್​

Updated on: Sep 28, 2022 | 7:55 PM

ಶಾಲೆಯ ಮುಖ್ಯೋಪಾಧ್ಯಾಯ ಸಿ. ಬಿ. ಮೊಗಲಿ ಎಂಬುವವರು ಲೋಕಾಯುಕ್ತರ ಕಚೇರಿಗೆ ದೂರು ನೀಡಿದ್ದರು. ಅಗ್ನಿಶಾಮಕ ದಳದ ಜಿಲ್ಲಾ ಮಟ್ಟದ ಅಧಿಕಾರಿ ಎನ್ ಎಸ್ ಕಗ್ಗಲಗೌಡರ ಅವರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು, ಪರಿಶೀಲನೆ ನಡೆಸಿದ್ದಾರೆ.

Bribe: ಶಾಲಾ ಕಟ್ಟಡದ ಫಿಟ್ನೆಸ್ ಸರ್ಟಿಫಿಕೇಟ್ ಕೊಡಲು ಲಂಚ ಕೇಳಿದ್ದ ಅಗ್ನಿಶಾಮಕ ದಳ ಅಧಿಕಾರಿ ಲೋಕಾಯುಕ್ತ ಬಲೆಗೆ
ಶಾಲಾ ಕಟ್ಟಡದ ಫಿಟ್ನೆಸ್ ಸರ್ಟಿಫಿಕೇಟ್ ಕೊಡಲು ಲಂಚ ಕೇಳಿದ್ದ ಅಗ್ನಿಶಾಮಕ ದಳ ಅಧಿಕಾರಿ ಲೋಕಾಯುಕ್ತ ಬಲೆಗೆ
Follow us on

ಗದಗ: ಅಗ್ನಿಶಾಮಕ ದಳದ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ (Gadag Lokayukta raid) ನಡೆಸಿದ್ದು, ಲಂಚ ಪಡೆಯುತ್ತಿದ್ದ ಅಧಿಕಾರಿಯನ್ನು ಬಲೆಗೆ ಕೆಡವಿದ್ದಾರೆ. ಶಾಲೆಯ ಕಟ್ಟಡದ ಫಿಟ್ನೆಸ್ ಕುರಿತು ಸುರಕ್ಷತಾ ಸರ್ಟಿಫಿಕೇಟ್ ಕೊಡಲು ಲಂಚ (bribe) ಕೇಳಿದ್ದ ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರು ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಗದಗ ನಗರದ ಎಪಿಎಂಸಿ ಆವರಣದಲ್ಲಿ ಇರುವ ಅಗ್ನಿಶಾಮಕ ದಳ ಕಛೇರಿಯಲ್ಲಿ ನಡೆದಿದೆ.

ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಎಸ್ ಎಸ್ ಕೂಡ್ಲಮಠ ಶಾಲೆಯ ಕಟ್ಟಡದ ಗುಣಮಟ್ಟದ ಸುರಕ್ಷತಾ ಪ್ರಮಾಣ ಪತ್ರ ಕೊಡಲು 7,000 ರೂಪಾಯಿ ಲಂಚ ಕೇಳಿದ (school management) ಆರೋಪದಲ್ಲಿ ಅಧಿಕಾರಿ ಎನ್ ಎಸ್ ಕಗ್ಗಲಗೌಡರ ಎಂಬುವವರು ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ, ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಶಾಲೆಯ ಮುಖ್ಯೋಪಾಧ್ಯಾಯ ಸಿ. ಬಿ. ಮೊಗಲಿ ಎಂಬುವವರು ಲೋಕಾಯುಕ್ತರ ಕಚೇರಿಗೆ ದೂರು ನೀಡಿದ್ದರು. ಅಗ್ನಿಶಾಮಕ ದಳದ ಜಿಲ್ಲಾ ಮಟ್ಟದ ಅಧಿಕಾರಿ ಎನ್ ಎಸ್ ಕಗ್ಗಲಗೌಡರ ಅವರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು, ಪರಿಶೀಲನೆ ನಡೆಸಿದ್ದಾರೆ.

ಲೋಕಾಯುಕ್ತ ಎಸ್ಪಿ ಸತೀಶ್ ಚಿಟಗುಪ್ಪಿ, ಡಿವೈಎಸ್ಪಿ ಶಂಕರ ಎಮ್ ರಾಗಿ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರಗಳಾದ ರವಿ ಪುರುಷೋತ್ತಮ್ ಹಾಗೂ ಆಜೀಜ್ ಕಲಾದಗಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಸಿಬ್ಬಂದಿಗಳಾದ ವಿರೂಪಾಕ್ಷ ಅರಿಷಿಣದ, ಎಸ್ ಎಸ್ ಅಮರಶೆಟ್ಟಿ, ಮಂಜುನಾಥ್ ಗಾರ್ಗಿ, ಲಕ್ಕನಗೌಡರ್, ಗುಬ್ಬಿ ಚಾಲಕರಾದ ನೈನಾಪೂರ ಹಾಗೂ ಹೆಬ್ಬಳ್ಳಿ ಈ ಕಾರ್ಯಾಚರಣೆಯಲ್ಲಿ ಇದ್ದರು.

Published On - 7:20 pm, Wed, 28 September 22