AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗಿನಲ್ಲಿ ಮುಸುಕುದಾರಿ ಕಳ್ಳರ ಗ್ಯಾಂಗ್ ಆ್ಯಕ್ಟಿವ್: ರಾತ್ರೋರಾತ್ರಿ ಮನೆಗೆ ನುಗ್ಗಿ ಕಳ್ಳತನ ಮಾಡಿ ಪರಾರಿ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮತ್ತು ಶಿರಹಟ್ಟಿ ತಾಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ಮುಸುಕುಧಾರಿ ಕಳ್ಳರ ಹಾವಳಿ ಹೆಚ್ಚಾಗಿದೆ. ಕಳ್ಳರು ಮಾರಕಾಸ್ತ್ರಗಳೊಂದಿಗೆ ಮನೆಗಳಿಗೆ ನುಗ್ಗಿ ಚಿನ್ನ, ನಗದು ಕಳ್ಳತನ ಮಾಡುತ್ತಿದ್ದಾರೆ. 40 ಗ್ರಾಂ ಚಿನ್ನ ಮತ್ತು ಆರು ಸಾವಿರ ರೂ ನಗದು ಕಳ್ಳತನವಾಗಿರುವ ಘಟನೆ ವರದಿಯಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಕಳ್ಳರನ್ನು ಬಂಧಿಸುವ ಭರವಸೆ ನೀಡಿದ್ದಾರೆ.

ಗದಗಿನಲ್ಲಿ ಮುಸುಕುದಾರಿ ಕಳ್ಳರ ಗ್ಯಾಂಗ್ ಆ್ಯಕ್ಟಿವ್: ರಾತ್ರೋರಾತ್ರಿ ಮನೆಗೆ ನುಗ್ಗಿ ಕಳ್ಳತನ ಮಾಡಿ ಪರಾರಿ
ಮುಸುಕುದಾರಿ ಕಳ್ಳರ ಗ್ಯಾಂಗ್
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Jul 04, 2025 | 1:26 PM

Share

ಗದಗ, ಜುಲೈ 04: ಜಿಲ್ಲೆಯಲ್ಲಿ ಮುಸುಕುದಾರಿ ಕಳ್ಳರ ಹಾವಳಿ (Masked thieves) ಹೆಚ್ಚಾಗಿದೆ. ಹೀಗಾಗಿ ರಾತ್ರಿಯಾದರೆ ಸಾಕು ಜನರಿಗೆ ಭಯ ಶುರುವಾಗಿದೆ. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಲಾಂಗು, ಮಚ್ಚು ಹಿಡಿದು ಗ್ರಾಮಕ್ಕೆ ಎಂಟ್ರಿ ಕೊಡುತ್ತಿರುವ ಗ್ಯಾಂಗ್ ಮನೆಗಳಿಗೆ ನುಗ್ಗಿ ಕಳ್ಳತನ (theft) ಮಾಡುತ್ತಿದೆ. ಈ ಗ್ಯಾಂಗ್ ದಾಳಿಗೆ ಗ್ರಾಮೀಣ ಭಾಗದ ಜನರು ಬೆಚ್ಚಿಬಿದ್ದಿದ್ದಾರೆ. ಭಯದಲ್ಲಿ ಜೀವನ ನಡೆಸುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮುಸುಕುದಾರಿ ಕಳ್ಳರನ್ನು ಬಂಧಿಸುವಂತೆ ಜನರು ಒತ್ತಾಯಿಸಿದ್ದಾರೆ.

40 ಗ್ರಾಂ ಚಿನ್ನ ಹಾಗೂ 6 ಸಾವಿರ ನಗದು ಕಳ್ಳತನ

ಅಂದಹಾಗೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಹಾಗೂ ಶಿರಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಮುಸುಕುಧಾರಿ ಕಳ್ಳರ ಹಾವಳಿಗೆ ಜನರು ಬೆಚ್ಚಿಬಿದ್ದಿದ್ದಾರೆ. ಕಳ್ಳರ ಕೈಚಳಕ್ಕೆ ಅಕ್ಷರಶಃ ಕಂಗಾಲಾಗಿದ್ದಾರೆ. ಹೌದು.. ಶಿರಹಟ್ಟಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಮುಸುಕುಧಾರಿ ಗ್ಯಾಂಗ್, ಕೃಷ್ಣ ಲಮಾಣಿಯವರ ಮನೆಯಲ್ಲಿ ಕಳ್ಳತನ ಮಾಡಿದೆ. ಮನೆಯಲ್ಲಿದ್ದ 40 ಗ್ರಾಂ ಚಿನ್ನ ಹಾಗೂ 6 ಸಾವಿರ ನಗದು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮಕ್ಕಳು ಡ್ರಗ್ ಅಡಿಕ್ಟ್ ಆಗಿದ್ದಾರೆಂದು ಪೋಷಕರಿಂದಲೇ ಪೊಲೀಸರಿಗೆ ದೂರು! ಆಮೇಲೇನಾಯ್ತು?

ಇದನ್ನೂ ಓದಿ
Image
ಟಾಯ್ಲೆಟ್‌ನಲ್ಲಿ ಮಹಿಳಾ ಸಹದ್ಯೋಗಿಗಳ ವೀಡಿಯೋ ರೆಕಾರ್ಡ್: ಟೆಕ್ಕಿ ಅರೆಸ್ಟ್
Image
ಮಗನಿಗೆ ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ ಜತೆಗೆ 30 ಸಾವಿರ ದಂಡ..!
Image
ಬೆಂಗಳೂರು: 140 ಪ್ರಕರಣಗಳಲ್ಲಿ ಬೇಕಾಗಿದ್ದ ಸೀರಿಯಲ್​ ಕಳ್ಳನ ಬಂಧನ
Image
ತಾಯಿ ಜತೆ ಅನೈತಿಕ ಸಂಬಂಧ: ವ್ಯಕ್ತಿಯನ್ನ ನಡು ಗ್ರಾಮದಲ್ಲೇ ಕೊಂದ ಮಕ್ಕಳು!

ಬೆಳ್ಳಟ್ಟಿ ಗ್ರಾಮದ, ರಾಜಣ್ಣ ಗೋಪಾಳಿ, ಮಂಗೇಶಪ್ಪ ಲಮಾಣಿ ಅವರ ಮನೆ ಹಾಗೂ ಗ್ರಾಮ ಒನ್ ಕೇಂದ್ರದಲ್ಲಿ ಕಳ್ಳತನ ಮಾಡಿದ್ದಾರೆ. ಇನ್ನೂ ಛಬ್ಬಿ, ಬನ್ನಿಕೊಪ್ಪ, ಬೆಳ್ಳಟ್ಟಿ ಸೇರಿದಂತೆ ಹಲವು ಗ್ರಾಮದಲ್ಲಿ ಕಳ್ಳತನ ಹಾಗೂ ಕೆಲವು ಮನೆಗಳಲ್ಲಿ ಯತ್ನ ಮಾಡಿದ್ದಾರೆ. ಕಳ್ಳರ ಹಾವಳಿ ಗ್ರಾಮೀಣ ಭಾಗದ ಜನರನ್ನ ಬೆಚ್ಚಿಬೀಳಿಸಿದೆ. ಈಗಾಲೇ ಒಂದು ಪ್ರಕರಣವನ್ನು ದಾಖಲಿಸಿಕೊಂಡು ಡಿವೈಎಸ್ಪಿ ನೇತೃತ್ವದಲ್ಲಿ ತಂಡವನ್ನು ರಚನೆ ಮಾಡಲಾಗಿದ್ದು, ಆದಷ್ಟು ಬೇಗ ಆರೋಪಿಗಳನ್ನು ಪತ್ತೆ ಮಾಡುವುದಾಗಿ ಎಸ್ಪಿ ಬಿಎಸ್ ನೇಮಗೌಡ ಹೇಳಿದ್ದಾರೆ.

ಕಳ್ಳರನ್ನು ಪತ್ತೆ ಮಾಡುವಂತೆ ಒತ್ತಾಯ

ಮುಸುಕುದಾರಿ ಕಳ್ಳರ ಹಾವಳಿಯಿಂದ ಗ್ರಾಮೀಣ ಭಾಗದ ಜನರು ಹೈರಾಣಾಗಿದ್ದಾರೆ. ರಾತ್ರಿ ಆದರೆ ಸಾಕು ಯಾವ ಗ್ರಾಮಕ್ಕೆ ಮಸುಕುಧಾರಿ ಗ್ಯಾಂಗ್ ಬರುತ್ತೆ ಎನ್ನುವ ಆತಂಕ ಮನೆ ಮಾಡಿದೆ. ರಾತ್ರಿ ವೇಳೆಯಲ್ಲಿ ಈ ಮುಸುಕುದಾರಿಗಳು ಮಾರಕಾಸ್ತ್ರಗಳನ್ನು ಹಿಡಿದು ಅಖಾಡಕ್ಕಿಳಿಯುತ್ತದೆ. ಮನೆಗಳಿಗೆ ನುಗ್ಗಿ ಕಳ್ಳತನ ಮಾಡುತ್ತಾರೆ. ಗ್ಯಾಂಗ್​ನ ಭಯಾನಕ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಹೀಗಾಗಿ ಮುಸುಕುದಾರಿ ಕಳ್ಳರನ್ನು ಪತ್ತೆ ಮಾಡುವಂತೆ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: ಟಾಯ್ಲೆಟ್‌ನಲ್ಲಿ ಮಹಿಳಾ ಸಹದ್ಯೋಗಿಗಳ ವೀಡಿಯೊ ರೆಕಾರ್ಡ್: ಸಿಕ್ಕಿಬಿದ್ದ ಇನ್ಫೋಸಿಸ್ ಟೆಕ್ಕಿ..

ಈ ಹಿಂದೆ ಕೂಡ ಗದಗ ಬೆಟಗೇರಿ ಅವಳಿ ನಗರದಲ್ಲಿ ಮುಸುಕುದಾರಿ ಕಳ್ಳರ ಹಾವಳಿ ಹೆಚ್ಚಾಗಿತ್ತು. ಆ ವೇಳೆಯಲ್ಲಿ ಪೊಲೀಸರು ಅವರನ್ನು ಪತ್ತೆ ಮಾಡಿದ್ದರು. ಇದೀಗ ಪತ್ತೆ ಹಳ್ಳಿಹಳ್ಳಿಯಲ್ಲೂ ಮುಸುಕುದಾರಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಜನರು ಭಯದಲ್ಲಿದ್ದಾರೆ. ಆದಷ್ಟು ಪತ್ತೆ ಮಾಡಬೇಕಿದೆ. ಈಗಾಗಲೇ ಕಳ್ಳರ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಆದಷ್ಟು ಬೇಗ ಕಳ್ಳರನ್ನು ಪತ್ತೆ ಮಾಡಿ, ಜನರು ನೆಮ್ಮದಿಯಿಂದ ಬದುಕಲು ಅನವು ಮಾಡಿಕೊಡಬೇಕಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ