ನಿರಪೇಕ್ಷಣಾ ಪತ್ರ ಪಡೆಯದೆ ಫಾರಂ ನಂ.3 ವಿತರಣೆ ಆರೋಪ: ನಗರಸಭೆ ಕಂದಾಯ ಅಧಿಕಾರಿ ಸಸ್ಪೆಂಡ್ ಮಾಡಿ ಡಿಸಿ ಆದೇಶ

ನಿಯಮಬಾಹಿರವಾಗಿ 1063 ನಿವೇಶನಗಳಿಗೆ ಫಾರಂ ನಂ.3 ವಿತರಿಸಿ ಕರ್ತವ್ಯ ಲೋಪವೆಸಗಿದ ಗದಗ ಬೆಟಗೇರಿ ನಗರಸಭೆಯ ಕಂದಾಯ ಅಧಿಕಾರಿ ಮಹೇಶ ಹಡಪದರನ್ನು ಅಮಾನತು ಮಾಡಿ ಡಿಸಿ ಎಂ.ಎನ್​.ವೈಶಾಲಿ ಆದೇಶ ಹೊರಡಿಸಿದ್ದಾರೆ.

ನಿರಪೇಕ್ಷಣಾ ಪತ್ರ ಪಡೆಯದೆ ಫಾರಂ ನಂ.3 ವಿತರಣೆ ಆರೋಪ: ನಗರಸಭೆ ಕಂದಾಯ ಅಧಿಕಾರಿ ಸಸ್ಪೆಂಡ್ ಮಾಡಿ ಡಿಸಿ ಆದೇಶ
ಅಮಾನತುಗೊಳಗಾದ ನಗರಸಭೆ ಕಂದಾಯ ಅಧಿಕಾರಿ ಮಹೇಶ ಹಡಪದ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ

Updated on: Jul 29, 2023 | 8:41 PM

ಗದಗ, ಜುಲೈ 29: ಸಾರ್ವಜನಿಕರಿಗೆ ನಿರಪೇಕ್ಷಣಾ ಪತ್ರ ಪಡೆಯದೆ ಫಾರ್ಮ್ ನಂ 3 ವಿತರಣೆಯಲ್ಲಿ ವಿಳಂಬ ಹಾಗೂ ಕರ್ತವ್ಯ ಲೋಪ ಎಸಗಿದ ನಗರಸಭೆ ಕಂದಾಯ ಅಧಿಕಾರಿಯನ್ನು ಅಮಾನತು ಮಾಡಿ ಗದಗ ಡಿಸಿ ವೈಶಾಲಿ ಎಂ.ಎಲ್​ ಆದೇಶ ಹೊರಡಿಸಿದ್ದಾರೆ. ಮಹೇಶ ಹಡಪದ (Mahesh Hadapada) ಅಮಾನತ್ತಾದ ಅಧಿಕಾರಿ. ಏಪ್ರಿಲ್​ 01, 2023ರಿಂದ ಜುಲೈ 13 ರವರೆಗೆ ನಗರಸಭೆಯಿಂದ ಒಟ್ಟು 3148 ಫಾರ್ಮ್ ನಂ.3 ವಿತರಿಸಲಾಗಿದೆ ಎಂದು ಸಾರ್ವಜನಿಕರ ದೂರಿದ್ದರು.

ರಿಜಿಸ್ಟರ್​ ಸಂಖ್ಯೆ ನಂಬರ್​​ 862+863-864 ವಸತಿ ವಿನ್ಯಾಸದಲ್ಲಿ 979 ಹಾಗೂ ಇನ್ನುಳಿದ ಬೇರೆ ಬೇರೆ ನಿವೇಶನ ಸೇರಿದಂತೆ ಒಟ್ಟು 1063 ಫಾರ್ಮ್ ನಂ.3 ವಿತರಣೆ ಮಾಡಲಾಗಿದೆ. ಆದರೆ ಇದರಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪೂರ್ಣ ಪ್ರಮಾಣದ ನಿವೇಶನ ಅಭಿವೃದ್ಧಿ ಹೊಂದಿದ ಬಗ್ಗೆ ನಿರಪೇಕ್ಷಣಾ ಪತ್ರ ಪಡೆಯದೇ ಕಂದಾಯ ಅಧಿಕಾರಿ ಮಹೇಶ್ ಹಡಪದ ಫಾರ್ಮ್ ನಂ.3 ವಿತರಣೆ ಮಾಡಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದಕಮ್ಮನವರ್​ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Gadag News: ಬಿಂಕದಕಟ್ಟಿ ಮೃಗಾಲಯಕ್ಕೆ ಬಸ್ ಸೇವೆ: ಸಚಿವ ಎಚ್​ಕೆ ಪಾಟೀಲ್​​ ಚಾಲನೆ

ನಗರಸಭೆ ಸದಸ್ಯರಾದ ಬರಕತ್ ಅಲಿ ಮುಲ್ಲಾ ಹಾಗೂ ಲಕ್ಷ್ಮಿ ಅನಿಲಕುಮಾರ್ ಸಿದ್ದಮ್ಮನಹಳ್ಳಿ ಅವರ ದೂರಿನ ಮೇರೆಗೆ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದಕಮ್ಮನವರ್ ತನಿಖೆ ಮಾಡಿ ವರದಿ ಸಲ್ಲಿಸಿದ್ದರು.

ಇದನ್ನೂ ಓದಿ: Gadag News: ನಿರಂತರ ಮಳೆಗೆ ಹೂವಿನ ತೋಟಗಳು ಸಂಪೂರ್ಣ‌ ಹಾಳು; ಬಾಡಿದ ರೈತನ ಬದುಕು

ಅಪರ ಜಿಲ್ಲಾಧಿಕಾರಿಗಳ ವರದಿ ಆಧಾರಿಸಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ