ಕೊನೆಗೂ ಗದಗ ಕೊಲೆ ಪ್ರಕರಣದ ರಹಸ್ಯ ಭೇದಿಸಿದ ಪೊಲೀಸರು: ಹತ್ಯೆಗಿದೆ ರೋಚಕ ಹಿನ್ನೆಲೆ

ಗದಗದಲ್ಲಿ ನಡೆದಿದ್ದ ಭೀಕರ ಹತ್ಯೆ ಪ್ರಕರಣದ ಜಾಡು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 8 ಮಂದಿ ಆರೋಪಿಗಳನ್ನೂ ಬಂಧಿಸಲಾಗಿದೆ. ಆದರೆ, ಈ ದುರಂತದಲ್ಲಿ ಹತ್ಯೆಯಾದವರೇ ಬೇರೆ, ಆಗಬೇಕಿದ್ದವರೇ ಬೇರೆ ಎಂಬುದು ಈಗ ತಿಳಿದುಬಂದಿದೆ. ಕೋಣೆ ಬದಲಾಯಿಸಿ ಮಲಗಿದ್ದಕ್ಕೆ ದಂಪತಿ ಬಚಾವಾದರೆ, ಅವರ ಮಗ ಹಾಗೂ ಆತನ ಜತೆಗಿದ್ದ ಸಂಬಂಧಿಕರು ದಾರುಣವಾಗಿ ಹತ್ಯೆಯಾಗಿದ್ದಾರೆ. ಕೊಲೆಯ ರಹಸ್ಯದ ರೋಚಕ ಸ್ಟೋರಿ ಇಲ್ಲಿದೆ.

ಕೊನೆಗೂ ಗದಗ ಕೊಲೆ ಪ್ರಕರಣದ ರಹಸ್ಯ ಭೇದಿಸಿದ ಪೊಲೀಸರು: ಹತ್ಯೆಗಿದೆ ರೋಚಕ ಹಿನ್ನೆಲೆ
ಬಂಧಿತ ಆರೋಪಿಗಳು
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: Ganapathi Sharma

Updated on: Apr 22, 2024 | 3:25 PM

ಗದಗ, ಏಪ್ರಿಲ್ 22: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಗದಗ ಕೊಲೆ (Gadag Murder Case) ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಿ ಹತ್ಯೆಯ ರಹಸ್ಯ ಭೇದಿಸುವಲ್ಲಿ ಪೊಲೀಸರು (Gadag Police) ಕೊನೆಗೂ ಯಶಸ್ವಿಯಾಗಿದ್ದಾರೆ. ಘಟನೆ ಸಂಬಂಧ 8 ಮಂದಿ ಆರೋಪಿಗಳನ್ನು 48 ಗಂಟೆಗಳ ಒಳಗಾಗಿ ಬಂಧಿಸಿದ್ದೇವೆ ಎಂದು ಗದಗ ಉತ್ತರ ವಲಯ ಐಜಿಪಿ ವಿಕಾಸ್ ಕುಮಾರ್ (Gadag IGP Vikas Kumar) ತಿಳಿಸಿದ್ದಾರೆ. ಗದಗ ಎಸ್​​ಪಿ ಬಿಎಸ್ ನೇಮಗೌಡ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ.

ಘಟನೆ ಸಂಬಂಧ ಪ್ರಮುಖ ಆರೋಪಿ ವಿನಾಯಕ್ ಬಾಕಳೆ ಸೇರಿದಂತೆ, ಇತರ ಆರೋಪಿಗಳಾದ ಫೈರೋಜ್ ಖಾಜಿ, ಜಿಶಾನ್ ಖಾಜಿ, ಮೀರಜ್​ ಮೂಲದ ಸಾಹಿಲ್, ಸೋಹೆಲ್ ಖಾಜಿ, ಸುಲ್ತಾನ್ ಶೇಖ್, ಮಹೇಶ್ ಸಾಳೋಂಕೆ, ವಾಹಿದ್ ಬೇಪಾರಿಯನ್ನು ಬಂಧಿಸಲಾಗಿದೆ.

65 ಲಕ್ಷ ರೂಪಾಯಿಗೆ ನಡೆದಿತ್ತು ಡೀಲ್, ಸುಪಾರಿ ಕೊಟ್ಟಿದ್ದ ವಿನಾಯಕ್

ಪ್ರಕರಣದ ಮೊದಲ ಆರೋಪಿ ವಿನಾಯಕ್ ಬಾಕಳೆ (ಪ್ರಕಾಶ್ ಬಾಕಳೆಯ ಮೊದಲ ಪತ್ನಿಯ ಮಗ) ಮತ್ತೊಬ್ಬ ಆರೋಪಿ ಫೈರೋಜ್​ಗೆ 65 ಲಕ್ಷ ರೂಪಾಯಿ ಹಣಕ್ಕೆ ಸುಪಾರಿ ಡೀಲ್​ ಕೊಟ್ಟಿದ್ದ. ಮುಂಗಡವಾಗಿ 2 ಲಕ್ಷ ರೂಪಾಯಿ ಕೊಟ್ಟಿದ್ದ ವಿನಾಯಕ್ ಬಾಕಳೆ ತಂದೆ ಪ್ರಕಾಶ್ ಬಾಕಳೆ, ಅವರ ಪತ್ನಿ ಸುನಂದಾ ಹಾಗೂ ಪುತ್ರ ಕಾರ್ತಿಕ್ ಕೊಲೆಗೆ ಸಂಚು ಹೂಡಿದ್ದ. ತಂದೆ ಪ್ರಕಾಶ್ ಜೊತೆ ವ್ಯವಹಾರಿಕ ವೈಮನಸ್ಸಿನ ಕಾರಣ ಈ ಕೊಲೆಗೆ ಆತ ಸಂಚು ಹೂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆಸ್ತಿ ಮಾರಾಟ ವಿರೋಧಿಸಿದ್ದಕ್ಕೆ ಕೃತ್ಯ

ಪ್ರಕಾಶ್ ಹಿರಿಯ ಮಗನ ಹೆಸರಿನಲ್ಲಿ ಸಾಕಷ್ಟು ಆಸ್ತಿ ಮಾಡಿದ್ದರು. ಆದರೆ, ಪ್ರಕಾಶ್ ಗಮನಕ್ಕೆ ತಾರದೇ ಮಗ ವಿನಾಯಕ್ ಕೆಲ ಆಸ್ತಿ ಮಾರಿದ್ದ. ಆತನ ವರ್ತನೆಗೆ ಬೇಸತ್ತು ಜಗಳವಾಡಿದ್ದ ಪ್ರಕಾಶ್ ಬಾಕಳೆ ಜಗಳವಾಡಿದ್ದರು. ಆಸ್ತಿ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರಕಾಶ್, ಪತ್ನಿ ಸುನಂದಾ, ಪುತ್ರ ಕಾರ್ತಿಕ್​ ಹತ್ಯೆಗೆ ಆರೋಪಿ ವಿನಾಯಕ್ ಸಂಚು ಹೂಡಿದ್ದ.

ಬೇರೆ ಕೋಣೆಯಲ್ಲಿ ಮಲಗಿದ್ದರಿಂದ ಬಚಾವ್!

ಘಟನೆ ದಿನ ಪ್ರಕಾಶ್ ಹಾಗೂ ಅವರ ಪತ್ನಿ ಸುನಂದಾ ಬೇರೆ ಕೋಣೆಯಲ್ಲಿ ಮಲಗಿದ್ದರು. ಹೀಗಾಗಿ ಅವರು ಸಾವಿನಿಂದ ಸ್ವಲ್ಪದರಲ್ಲೇ ಬಚಾವ್ ಆಗಿದ್ದಾರೆ. ಮನೆಗೆ ನುಗ್ಗಿದ್ದ ಹಂತಕರು ಅವರ ಬದಲಿಗೆ ಕಾರ್ತಿಕ್ ಜೊತೆ ಇದ್ದ ಸಂಬಂಧಿಕರನ್ನು ಹತ್ಯೆ ಮಾಡಿದ್ದಾರೆ. ಪ್ರಕಾಶ್ ಹಾಗೂ ಸುನಂದಾ ಎಂದು ಭಾವಿಸಿ ಹಂತಕರು ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಜತೆಗಿದ್ದ ಕೊಪ್ಪಳದ ಭಾಗ್ಯ ನಗರ ನಿವಾಸಿ, ಹೋಟೆಲ್ ಉದ್ಯಮಿ ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಇವರನ್ನು ಹತ್ಯೆ ಮಾಡಿದ್ದರು.

ಇದನ್ನೂ ಓದಿ: ಗದಗ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಕೊಲೆ

ಕೊಲೆ ರಹಸ್ಯ ಭೇದಿಸಿದವರಿಗೆ 5 ಲಕ್ಷ ರೂ.

ಕೊಲೆ ಕೇಸ್​​ ಭೇದಿಸಿದ್ದಕ್ಕೆ ತನಿಖೆ ನಡೆಸಿದ್ದ ಸಿಬ್ಬಂದಿಯನ್ನು ಡಿಜಿ, ಐಜಿಪಿ ಅಲೋಕ್ ಕುಮಾರ್ ಶ್ಲಾಘಿಸಿದ್ದಾರೆ. ಪ್ರಕರಣದ ತನಿಖೆ ನಡೆಸಿದ್ದ ಸಿಬ್ಬಂದಿಗೆ ತಲಾ 5 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್