AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಮಠದಲ್ಲಿ ಹೈಡ್ರಾಮಾ: ಶ್ರೀಗಳ ಜೀವ ಬೆದರಿಕೆ ಆರೋಪಕ್ಕೆ ಟ್ರಸ್ಟಿಗಳ ಬಿಗ್‌ ಟ್ವಿಸ್ಟ್‌!

ಗದಗ ನಗರದ ಪ್ರಸಿದ್ಧ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಕಲ್ಲಯ್ಯಜ್ಜನವರು ಮೂವರು ಟ್ರಸ್ಟಿಗಳಿಂದ ತಮಗೆ ಜೀವ ಬೆದರಿಕೆ ಇದೆ ಎಂದು ಮಾಡಿದ ಆರೋಪವನ್ನು ಟ್ರಸ್ಟಿಗಳು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ತಾವು ರೌಡಿಗಳಲ್ಲ, ಮಠದ ಭಕ್ತರು ಎಂದು ಸ್ಪಷ್ಟಪಡಿಸಿರುವ ಟ್ರಸ್ಟಿಗಳು, ಶ್ರೀಗಳ ವಿರುದ್ಧವೇ ಮಠದ ಬೆಲೆಬಾಳುವ ಜಮೀನು ಮಾರಾಟ ಹಾಗೂ ಲಕ್ಷಾಂತರ ರೂಪಾಯಿ ಹಣ ದುರುಪಯೋಗಪಡಿಸಿಕೊಂಡಿರುವ ಗಂಭೀರ ಆರ್ಥಿಕ ಅಕ್ರಮದ ಕೌಂಟರ್ ಆರೋಪ ಮಾಡಿದ್ದಾರೆ.

ಗದಗ ಮಠದಲ್ಲಿ ಹೈಡ್ರಾಮಾ: ಶ್ರೀಗಳ ಜೀವ ಬೆದರಿಕೆ ಆರೋಪಕ್ಕೆ ಟ್ರಸ್ಟಿಗಳ ಬಿಗ್‌ ಟ್ವಿಸ್ಟ್‌!
ಶ್ರೀಗಳ ಜೀವ ಬೆದರಿಕೆ ಆರೋಪಕ್ಕೆ ಟ್ರಸ್ಟಿಗಳ ಬಿಗ್‌ ಟ್ವಿಸ್ಟ್‌!
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Jun 27, 2026 | 10:14 AM

Share

ಮುಖ್ಯಾಂಶಗಳು

  • ಗದಗ ವೀರೇಶ್ವರ ಪುಣ್ಯಾಶ್ರಮದ ಶ್ರೀಗಳ ಜೀವ ಬೆದರಿಕೆ ಆರೋಪಕ್ಕೆ ಟ್ರಸ್ಟಿಗಳ ಸ್ಪಷ್ಟನೆ.
  • ನಾವು ರೌಡಿಗಳಲ್ಲ ಭಕ್ತರು ಎಂದು ಶ್ರೀಗಳ ಆರೋಪವನ್ನು ಟ್ರಸ್ಟಿಗಳು ನಿರಾಕರಿಸಿದ್ದಾರೆ.
  • ಪೀಠಾಧಿಪತಿಗಳ ವಿರುದ್ಧ ಜಮೀನು ಮಾರಾಟ ಮತ್ತು ಹಣ ದುರುಪಯೋಗದ ಗಂಭೀರ ಆರೋಪ.

ಗದಗ, ಜೂನ್ 27: ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಗದಗದ (Gadag) ವೀರೇಶ್ವರ ಪುಣ್ಯಾಶ್ರಮ ಹಾಗೂ ಪುಟ್ಟರಾಜ ಗವಾಯಿಗಳ ಮಠದಲ್ಲಿ ಪೀಠಾಧಿಪತಿ ಮತ್ತು ಟ್ರಸ್ಟಿಗಳ ನಡುವಿನ ಜಟಾಪಟಿ ಈಗ ತಾರಕಕ್ಕೇರಿದೆ. ಮಠದ ಪೀಠಾಧಿಪತಿ ಕಲ್ಲಯ್ಯಜ್ಜನವರು ತಮ್ಮ ಜೀವಕ್ಕೆ ಬೆದರಿಕೆ ಇದೆ ಎಂದು ಕಣ್ಣೀರು ಹಾಕಿದ ಬೆನ್ನಲ್ಲೇ, ಮಠದ ಮೂವರು ಪ್ರಮುಖ ಟ್ರಸ್ಟಿಗಳು ಈ ಆರೋಪವನ್ನು ತೀವ್ರವಾಗಿ ನಿರಾಕರಿಸಿದ್ದು, ಶ್ರೀಗಳ ವಿರುದ್ಧವೇ ಗಂಭೀರ ಹಗರಣಗಳ ತಿರುಗೇಟು ನೀಡಿದ್ದಾರೆ.

ಶ್ರೀಗಳ ಆರೋಪ ಶುದ್ಧ ಸುಳ್ಳು; ನಾವು ಗೂಂಡಾಗಳಲ್ಲ: ಟ್ರಸ್ಟಿಗಳ ಸ್ಪಷ್ಟನೆ

ಮಠದ ಪೀಠಾಧಿಪತಿ ಕಲ್ಲಯ್ಯಜ್ಜನವರು ತಮಗೆ ಮೂವರು ಟ್ರಸ್ಟಿಗಳಿಂದ ಜೀವ ಬೆದರಿಕೆ ಇದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಟಿವಿ9 ಮೂಲಕ ಸ್ಪಷ್ಟನೆ ನೀಡಿರುವ ಟ್ರಸ್ಟಿಗಳಾದ ವಸಂತಗೌಡ, ಶಿವರುದ್ರಪ್ಪ ಇಟಗಿ ಹಾಗೂ ಪ್ರಕಾಶ್ ಬಸರಿಗಿಡದ, ನಾವು ರೌಡಿಗಳು ಅಥವಾ ಗೂಂಡಾಗಳಲ್ಲ, 40 ವರ್ಷಗಳಿಂದ ಮಠಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ ಭಕ್ತರು. ಶ್ರೀಗಳು ಯಾರದ್ದೋ ಪ್ರೇರಣೆಯಿಂದ ಆತ್ಮಸಾಕ್ಷಿಗೆ ವಿರುದ್ಧವಾಗಿ ಈ ಸುಳ್ಳು ಆರೋಪ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಟ್ರಸ್ಟಿ ಶಿವರುದ್ರಪ್ಪ ಇಟಗಿ ಮಾತನಾಡಿ, ಶ್ರೀಗಳಿಂದ ನಾನು 10 ಲಕ್ಷ ರೂಪಾಯಿ ಹಣ ಕೇಳಿಲ್ಲ. ನಾನೇ ಮಠಕ್ಕೆ ಲಕ್ಷಾಂತರ ರೂಪಾಯಿ ದೇಣಿಗೆ ನೀಡಿದ್ದೇನೆ. ಮಠದಲ್ಲಿ ನಡೆಯಬಾರದ ಘಟನೆಗಳು ನಡೆದಾಗ ಧ್ವನಿ ಎತ್ತಿದ್ದಕ್ಕೆ ನನ್ನ ಧ್ವನಿ ಅಡಗಿಸಲು ಈ ಹುನ್ನಾರ ನಡೆಸಲಾಗಿದೆ ಎಂದು ಬೇಸರ ಹೊರಹಾಕಿದ್ದಾರೆ.

ನಡೆದಿದ್ದೇನು?

ಕೆಲ ದಿನಗಳ ಹಿಂದೆ ಪೀಠಾಧಿಪತಿ ಕಲ್ಲಯ್ಯಜ್ಜನವರು ಟ್ರಸ್ಟಿಗಳು ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಕಣ್ಣೀರು ಹಾಕಿದ್ದರು. ನಾನು ಪೀಠಾಧಿಪತಿಯಾದಾಗ ಮಠಕ್ಕೆ 59 ಲಕ್ಷ ರೂ. ಸಾಲವಿತ್ತು, ಅದನ್ನು ತೀರಿಸಿ ಈಗ 4 ಕೋಟಿ ರೂ. ಬ್ಯಾಂಕ್ ಠೇವಣಿ ಇಟ್ಟಿದ್ದೇನೆ. ಮಠದ ಪ್ರತಿಯೊಂದು ಪೈಸೆಗೂ ಲೆಕ್ಕ ಇಟ್ಟಿದ್ದರೂ ನನ್ನ ಕುರಿತು ಅಪಪ್ರಚಾರ ಮಾಡಿ, ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದು ಶ್ರೀಗಳು ಆರೋಪಿಸಿದ್ದರು.

ಹಣ ದುರುಪಯೋಗದ ಗಂಭೀರ ಆರೋಪ

ಆದರೆ ಟ್ರಸ್ಟಿಗಳು ಪೀಠಾಧಿಪತಿಗಳ ವಿರುದ್ಧವೇ ಗಂಭೀರ ಆರ್ಥಿಕ ಅಕ್ರಮಗಳ ಆರೋಪ ಹೊರಿಸಿದ್ದಾರೆ. ಕಲ್ಲಯ್ಯಜ್ಜನವರು ಮಠದ ಶಿಕ್ಷಣ ಸಂಸ್ಥೆಗೆ ಸೇರಿದ 11 ಗುಂಟೆ ಬೆಲೆಬಾಳುವ ಜಮೀನನ್ನು ಕಾನೂನುಬಾಹಿರವಾಗಿ ಮಾರಾಟ ಮಾಡಿದ್ದಾರೆ ಹಾಗೂ ಸಂಸ್ಥೆಯ ಲಕ್ಷಾಂತರ ರೂಪಾಯಿ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಟ್ರಸ್ಟಿ ಶಿವರುದ್ರಪ್ಪ ಆರೋಪಿಸಿದ್ದಾರೆ. ಈ ಹಗರಣದ ವಿರುದ್ಧ ಈಗಾಗಲೇ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿರುವ ಅವರು, ತಾವು ಗದ್ದಿಗೆ ಮುಟ್ಟಿ ಆಣೆ ಮಾಡಲು ಸಿದ್ಧ ಎಂದಿದ್ದಾರೆ.

ಇದನ್ನೂ ಓದಿ ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ: ಹಣ ನೀಡುವಂತೆ ಮಾನಸಿಕ ಹಿಂಸೆ?

ಮತ್ತೊಬ್ಬ ಟ್ರಸ್ಟಿ ಪ್ರಕಾಶ್ ಬಸರಿಗಿಡದ ಮಾತನಾಡಿ, ನಮ್ಮ ಅಜ್ಜ ಮಠಕ್ಕೆ ಜಮೀನು ದಾನ ಮಾಡಿದ್ದರು. ಅವರ ಗದ್ದುಗೆ ಬಳಿ ಬಾವಿ ತೋಡಲು ಯತ್ನಿಸಿದ್ದನ್ನು ನಾವು ವಿರೋಧಿಸಿದ್ದಕ್ಕೆ ಈ ಸುಳ್ಳು ದೂರು ನೀಡಲಾಗಿದೆ. ವಾಸ್ತವವಾಗಿ ಶ್ರೀಗಳಿಂದಲೇ ನಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ ಎಂದು ತಿರುಗೇಟು ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!