Gadag News: ದಂಡ ಪಾವತಿಸದ ಬೈಕ್ ಸವಾರರನ್ನು ಅರೆಸ್ಟ್ ಮಾಡಲು ಪೊಲೀಸ್ ಇಲಾಖೆ ಚಿಂತನೆ!

Gadag Traffic Police: ಮನೆಗೆ 10-15 ಬಾರಿ ನೋಟಿಸ್ ಕಳುಹಿಸಿದರೂ ಕೇರ್ ಮಾಡದ 119 ಬೈಕ್ ಸವಾರರನ್ನು ಪೊಲೀಸ್ ಇಲಾಖೆ ಪತ್ತೆ ಮಾಡಿದೆ. ಅವರಿಗೆ, ದಂಡವನ್ನು ಕಟ್ಟಬೇಕು ಅಥವಾ ಕಠಿಣ ಕಾನೂನು ಕ್ರಮ ಎದುರಿಸಬೇಕು ಎಂದು ಎಚ್ಚರಿಕೆ ನೀಡಿದೆ.

Gadag News: ದಂಡ ಪಾವತಿಸದ ಬೈಕ್ ಸವಾರರನ್ನು ಅರೆಸ್ಟ್ ಮಾಡಲು ಪೊಲೀಸ್ ಇಲಾಖೆ ಚಿಂತನೆ!
ಗದಗ ಪೊಲೀಸ್
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: Ganapathi Sharma

Updated on: Jan 30, 2024 | 10:04 AM

ಗದಗ, ಜನವರಿ 30: ಗದಗ-ಬೆಟಗೇರಿ ಅವಳಿ ನಗರದಲ್ಲಿ (Gadag Betageri twin city) ಸಂಚಾರ ವ್ಯವಸ್ಥೆ ಸುಧಾರಣೆ ಹಾಗೂ ಜನರ ಸುರಕ್ಷತೆಯ ದೃಷ್ಟಿಯಿಂದ ಥರ್ಟ್ ಐ ಅನುಷ್ಟಾನ ಮಾಡಲಾಗಿದೆ. ಹೆಜ್ಜೆ ಹೆಜ್ಜೆಗೂ ಹೈಟೆಕ್ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ (Traffic Rules Violaton) ನೇರವಾಗಿ ಮನೆಗೆ ದಂಡದ ನೋಟಿಸ್ ಕಳುಹಿಸಲಾಗುತ್ತಿದೆ. ಆದರೆ, 119 ಬೈಕ್ ಸವಾರರು ಪೊಲೀಸರ ನೋಟಿಸ್‌ಗಳಿಗೂ ಕ್ಯಾರೇ ಅನ್ನುತ್ತಿಲ್ಲ. 10 ರಿಂದ 16 ಬಾರಿ ನೋಟಿಸ್ ನೀಡಿದರೂ ಕಿಮ್ಮತ್ತು ನೀಡುತ್ತಾ ಇಲ್ಲ. ಹೀಗಾಗಿ ಕಠಿಣ ಕ್ರಮಕ್ಕೆ ಈಗ ಪೊಲೀಸ್ ಇಲಾಖೆ ಮುಂದಾಗಿದ್ದು, ಬೈಕ್ ಸವಾರರನ್ನು ಅರೆಸ್ಟ್ ಮಾಡಿ ಕೋರ್ಟ್​​​ಗೆ ಹಾಜರುಪಡಿಸಲು ಚಿಂತನೆ ನಡೆಸಿದ್ದಾರೆ.

ಮನೆಗೆ 10-15 ಬಾರಿ ನೋಟಿಸ್ ಕಳುಹಿಸಿದರೂ ಕೇರ್ ಮಾಡದ 119 ಬೈಕ್ ಸವಾರರನ್ನು ಪೊಲೀಸ್ ಇಲಾಖೆ ಪತ್ತೆ ಮಾಡಿದೆ. ಅವರಿಗೆ, ದಂಡವನ್ನು ಕಟ್ಟಬೇಕು ಅಥವಾ ಕಠಿಣ ಕಾನೂನು ಕ್ರಮ ಎದುರಿಸಬೇಕು ಎಂದು ಎಚ್ಚರಿಕೆ ನೀಡಿದೆ. ಬೈಕ್ ಸೀಜ್ ಮಾಡುವುದು, ಬೈಕ್ ಸವಾರರನ್ನು ಅರೆಸ್ಟ್ ಮಾಡಿ ಕೋರ್ಟ್​​ಗೆ ಹಾಜರುಪಡಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಎಚ್ಚರಿಕೆ ನೀಡಿದ್ದಾರೆ.

ಗದಗ ಬೆಟಗೇರಿ ಅವಳಿ ನಗರದಲ್ಲಿ ಥರ್ಟ್ ಐ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗಿದೆ. ಗದಗದ ಎಸ್ಪಿ ಕಚೇರಿಯಲ್ಲಿ ಕಂಟ್ರೋಲ್ ರೂಂ ಮಾಡೋ ಮೂಲಕ ಹೆಲ್ಮೆಟ್ ಇಲ್ಲದ ಬೈಕ್ ಸವಾರರ ಮನೆಗೆ ನೋಟಿಸ್ ನೀಡಲಾಗುತ್ತಿದೆ. ಕೆಲವು ವಾಹನ ಸವಾರರು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುವ ಉದ್ದೇಶದಿಂದ ನಂಬರ್ ಪ್ಲೇಟ್ ಕಾಣದಂತೆ, ಹಾಗೂ ನಂಬರ್ ಪ್ಲೇಟ್​​​ನಲ್ಲಿ ಒಂದು ನಂಬರ್ ಬದಲಾವಣೆ ಮಾಡೋ ಮೂಲಕ ಪೊಲೀಸರನ್ನು ಯಾಮಾರಿಸಿದ್ದಾರೆ. ಅಂಥವರ ವಿರುದ್ಧ ಪೊಲೀಸ್ ಇಲಾಖೆ ವಿಶೇಷ ಕಾರ್ಯಚರಣೆ ಮಾಡಿ 150 ಬೈಕ್ ವಶಕ್ಕೆ ಪಡೆದು, ದಂಡವನ್ನು ವಸೂಲಿ ಮಾಡಿದೆ. ನೋಟಿಸ್ ಬಂದವರು, ದಂಡವನ್ನು ಕಟ್ಟುತ್ತಿದ್ದಾರೆ. ಇನ್ಮುಂದೆ ನಂಬರ್ ಪ್ಲೇಟ್ ಬದಲಾವಣೆ ಮಾಡಿದ ಸವಾರರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಲು ಪೊಲೀಸ್ ಇಲಾಖೆ ಸಜ್ಜಾಗಿದೆ.

ಇದನ್ನೂ ಓದಿ: ಚಲಿಸುತ್ತಿದ್ದಾಗ ಏಕಾಏಕಿ ಕಳಚಿ ಬಿದ್ದ KSRTC ಬಸ್ ಚಕ್ರ; ಮುಂದೆನಾಯ್ತು ಗೊತ್ತಾ?

ಹೆಲ್ಮೆಟ್ ಹಾಕಿದರೆ ಅಪಘಾತದ ವೇಳೆ ಸವಾರರ ಜೀವ ಉಳಿಯುತ್ತದೆ. ಆದರೆ, ಜನರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಪಘಾತದಲ್ಲಿ ಹೆಡ್ ಇಂಜುರಿಯಿಂದ ಹೆಚ್ಚು ಸಾವಾಗುತ್ತಿವೆ. ಹೀಗಾಗೆ ಹೆಲ್ಮೆಟ್ ಹಾಕಿಕೊಂಡು ಜೀವ ಉಳಿಸಿಕೊಳ್ಳಿ ಅಂತ ಎಸ್ಪಿ ಮನವಿ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ