AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಯಿದೋಣಿ ಜಲಕ್ರೀಡಾ ತರಬೇತಿ ಶಿಬಿರಕ್ಕೆ ಸಚಿವ ಎಚ್​ಕೆ ಪಾಟೀಲ ಚಾಲನೆ

ನಗರದ ಭೀಷ್ಮ ಕೆರೆ ಆವರಣದಲ್ಲಿ ಅಕ್ಟೋಬರ್ 21 ರಿಂದ ನವೆಂಬರ್ 5 ರವರೆಗೆ ಏಳು ವರ್ಷ ಮೇಲ್ಪಟ್ಟ ಮಕ್ಕಳು, ಯುವಕರು ಹಾಗೂ ವಯಸ್ಕರಿಗಾಗಿ ಏರ್ಪಡಿಸಿದ ಹಾಯಿ ದೋಣಿ ಜಲಕ್ರೀಡಾ ತರಬೇತಿ ಶಿಬಿರಕ್ಕೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಚಾಲನೆ ನೀಡಿದ್ದಾರೆ.

ಹಾಯಿದೋಣಿ ಜಲಕ್ರೀಡಾ ತರಬೇತಿ ಶಿಬಿರಕ್ಕೆ ಸಚಿವ ಎಚ್​ಕೆ ಪಾಟೀಲ ಚಾಲನೆ
ಶಿಬಿರಕ್ಕೆ ಸಚಿವ ಎಚ್.ಕೆ.ಪಾಟೀಲ ಚಾಲನೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Oct 21, 2023 | 6:44 PM

Share

ಗದಗ, ಅಕ್ಟೋಬರ್ 21:​​​​ ನಗರದ ಭೀಷ್ಮ ಕೆರೆ ಆವರಣದಲ್ಲಿ ಅಕ್ಟೋಬರ್ 21 ರಿಂದ ನವೆಂಬರ್ 5 ರವರೆಗೆ ಏಳು ವರ್ಷ ಮೇಲ್ಪಟ್ಟ ಮಕ್ಕಳು, ಯುವಕರು ಹಾಗೂ ವಯಸ್ಕರಿಗಾಗಿ ಏರ್ಪಡಿಸಿದ ಹಾಯಿ ದೋಣಿ ಜಲಕ್ರೀಡಾ ತರಬೇತಿ ಶಿಬಿರಕ್ಕೆ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ (H K Patil) ಅವರು ಚಾಲನೆ ನೀಡಿದ್ದಾರೆ. ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ಸ್ಪೋರ್ಟ ಅಸೋಸಿಯೇಷನ್ ಸಹಯೋಗದಲ್ಲಿ ಈ ಹಾಯಿ ದೋಣಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.

ಅಕ್ಟೋಬರ್ 22 ರಿಂದ 26 ರವರೆಗೆ ಮೊದಲ ಹಂತದ ತರಬೇತಿ, ಅಕ್ಟೋಬರ್ 27 ರಿಂದ 31 ರವರೆಗೆ ಎರಡನೇ ಹಂತದ ತರಬೇತಿ, ನವೆಂಬರ್ 1 ರಿಂದ ನವೆಂಬರ್ 5 ರವರೆಗೆ ಮೂರನೇ ಹಂತದ ತರಬೇತಿ ಬ್ಯಾಚ್​ಗಳು ನಡೆಯಲಿವೆ. ಪ್ರತಿ ದಿನ ಮೊದಲ ಬ್ಯಾಚ್ ಬೆಳಿಗ್ಗೆ 9.30 ರಿಂದ ಮ. 1.30 ರವರೆಗೆ ಹಾಗೂ ಎರಡನೇ ಬ್ಯಾಚ್ ಮ.2.30 ರಿಂದ 6.30 ರವರೆಗೆ ನಿರಂತರವಾಗಿ ನಡೆಯಲಿವೆ.

ಇದನ್ನೂ ಓದಿ: ಬಡ ರೋಗಿಗಳ ಜೀವದ ಜೊತೆ ಗದಗ ಜಿಮ್ಸ್ ಆಡಳಿತ ಚೆಲ್ಲಾಟ!ಡಯಾಲಿಸಸ್ ರೋಗಿಗಳ ನರಳಾಟ

ಸಚಿವ ಎಚ್.ಕೆ.ಪಾಟೀಲ ಅವರು ಹಾಯಿ ದೋಣಿಗಳಿಗೆ ಹಾಗೂ ಭೀಷ್ಮ ಕೆರೆಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ನೆರವೇರಿಸುವ ಮೂಲಕ ತರಬೇತಿ ಶಿಬಿರಕ್ಕೆ ಚಾಲನೆ ನೀಡಿದರು. ಹಾಯಿ ದೋಣಿ ಕ್ರೀಡೆಯು ಓಲಂಪಿಕ್ ಕ್ರೀಡೆಯಾಗಿದ್ದು ಈ ಹಾಯಿ ದೋಣಿ ತರಬೇತಿ ಪಡೆಯುವ ಮೂಲಕ ಯುವ ಸಮುದಾಯ ಓಲಂಪಿಕ್ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಸಹಕಾರಿಯಾಗಿದೆ ಎಂದು ತರಬೇತಿ ಶಿಬಿರ ಯಶಸ್ವಿಯಾಗಲೆಂದು ಶುಭ ಕೋರಿದರು.

ಇದನ್ನೂ ಓದಿ: ಗದಗದಲ್ಲಿ ಅಕ್ರಮ ಕಬ್ಬಿಣದ ಅದಿರು ಸಂಗ್ರಹ; ಗಣಿ ಇಲಾಖೆ ಕುಮ್ಮಕ್ಕಿನಿಂದಲೇ ನಡಿತಿದ್ಯಾ ಗಣಿಗಾರಿಕೆ?

ಈ ಸಂದರ್ಭದಲ್ಲಿ ಸರ್ಕಾರಿ ಮುಖ್ಯ ಸಚೇತಕರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ , ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ, ಗಣ್ಯರಾದ ಸಿದ್ದು ಪಾಟೀಲ, ವಾಸಣ್ಣ ಕುರಡಗಿ, ಪ್ರಭು ಬುರಬುರೆ, ಬಿ.ಬಿ.ಅಸೂಟಿ, ಫಾರೂಕ, ಅಶೋಕ ಮಂದಾಲಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು , ಸಾರ್ವಜನಿಕರು ಹಾಜರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಸಂಜೀವ ಕುಮಾರ್​ ಪಾಂಡ್ರೆ, ಗದಗ
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!