Gadag News: ಬಿಂಕದಕಟ್ಟಿ ಮೃಗಾಲಯಕ್ಕೆ ಬಸ್ ಸೇವೆ: ಸಚಿವ ಎಚ್​ಕೆ ಪಾಟೀಲ್​​ ಚಾಲನೆ

ಪ್ರವಾಸಿಗರಿಗೆ ಅನುಕೂಲ ದೃಷ್ಟಿಯಿಂದ ಗದಗ ತಾಲೂಕಿನ ಬಿಂಕದಕಟ್ಟಿ ಮೃಗಾಲಯಕ್ಕೆ ತೆರಳಲು ಹೊಸ ಬಸ್​ ಸಂಚಾರಕ್ಕೆ ಶನಿವಾರ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಹಸಿರು ನಿಶಾನೆ ತೋರಿದ್ದಾರೆ.

Gadag News: ಬಿಂಕದಕಟ್ಟಿ ಮೃಗಾಲಯಕ್ಕೆ ಬಸ್ ಸೇವೆ: ಸಚಿವ ಎಚ್​ಕೆ ಪಾಟೀಲ್​​ ಚಾಲನೆ
ಹೊಸ ಬಸ್​​ ಸಂಚಾರಕ್ಕೆ ಹಸಿರು ನಿಶಾನೆ ತೋರಿದ ಸಚಿವ ಎಚ್.ಕೆ. ಪಾಟೀಲ್
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ

Updated on: Jul 29, 2023 | 5:37 PM

ಗದಗ, ಜುಲೈ 29: ಗದಗ ತಾಲೂಕಿನ ಬಿಂಕದಕಟ್ಟಿ ಮೃಗಾಲಯಕ್ಕೆ (Binkada Katti Zoo) ತೆರಳುವ ಮಕ್ಕಳು, ಪ್ರವಾಸಿಗರಿಗೆ ಅನುಕೂಲವಾಗುವಂತೆ ಗದಗ ಹೊಸ ಬಸ್​ ನಿಲ್ದಾಣದಿಂದ ಬಿಂಕದಕಟ್ಟಿ ಮೃಗಾಲಯದ ವರೆಗೆ ಬಸ್​​ ಸಂಚಾರಕ್ಕೆ ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಗದಗ ನಗರದ ಹೊಸ ಬಸ್ ನಿಲ್ದಾಣದಿಂದ ಇಂದು ಏರ್ಪಡಿಸಲಾದ ಸರಳ ಸಮಾರಂಭದಲ್ಲಿ ಸಚಿವರು ಬಸ್ ಸೇವೆಗೆ ಚಾಲನೆ ನೀಡಿ ಅದೇ ಸಾರಿಗೆ ಬಸ್​ನಲ್ಲಿ ಪ್ರಯಾಣ ಬೆಳೆಸಿ ಬಿಂಕದಕಟ್ಟಿ, ಅಸುಂಡಿ ಮಾರ್ಗವಾಗಿ ಮೃಗಾಲಯಕ್ಕೆ ತೆರಳಿದರು.

ಇದನ್ನೂ ಓದಿ: Gadag News: ನಿರಂತರ ಮಳೆಗೆ ಹೂವಿನ ತೋಟಗಳು ಸಂಪೂರ್ಣ‌ ಹಾಳು; ಬಾಡಿದ ರೈತನ ಬದುಕು

ಈ ಬಸ್​​ ಸಂಚಾರ ಆರಂಭದಿಂದ ಮೃಗಾಲಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭೇಟಿ ನೀಡಲು ಅನುಕೂಲವಾಗಲಿದೆ. ಜಿಲ್ಲಾ ಕೇಂದ್ರ ಬಸ ನಿಲ್ದಾಣ ಹಾಗೂ ಪಂ.ಪುಟ್ಟರಾಜ ಗವಾಯಿಗಳ ಬಸ ನಿಲ್ದಾಣದ ಮಾರ್ಗವಾಗಿ ಪ್ರತಿ ದಿನ ನಿಯಮಿತವಾಗಿ ಸಾರಿಗೆ ಸೇವೆ ಜನ ಸಾಮಾನ್ಯರಿಗೆ ಇಂದಿನಿಂದ ಲಭ್ಯವಿದೆ ಎಂದರು.

ಈ ಸಂದರ್ಭದಲ್ಲಿ ಶಿರಹಟ್ಟಿ ಶಾಸಕರಾದ ಡಾ.ಚಂದ್ರು ಲಮಾಣಿ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೋಲಿಸ್ ಅಧೀಕ್ಷಕ ಬಿ.ಎಸ್. ನೇಮಗೌಡ, ಉಪ ಅರಣ್ಯ ಸಂರಕ್ಷಣಾಧಿಕಾರಿ ದಿಪೀಕಾ ಬಾಜಪೇಯಿ, ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಬಸ್ ನಿಲ್ದಾಣದಿಂದ ಬಿಂಕದಕಟ್ಟಿ ಮೃಗಾಲಯದವರೆಗೆ ಬಸ್​ನಲ್ಲಿ ಆಗಮಿಸಿದರು.

ಇದನ್ನೂ ಓದಿ: ಲಕ್ಕುಂಡಿ ಗ್ರಾಮದಲ್ಲಿ ಮಳೆಗೆ ಸೋರುತ್ತಿರುವ ಮನೆಗಳು; ತವರಿಗೆ ಹೋದ ಬಾಣಂತಿ, ದೇವಸ್ಥಾನದಲ್ಲಿ ಪತಿ ವಾಸ್ತವ್ಯ

ಮೃಗಾಲಯಕ್ಕೆ ಆರಂಭವಾದ ಬಸ್​ ಸೇವೆಯೂ ಗದಗ ಪಂ.ಪುಟ್ಟರಾಜು ಗವಾಯಿಗಳ ಬಸ ನಿಲ್ದಾಣದಿಂದ ಮೃಗಾಲಯ ಮಾರ್ಗವಾಗಿ ಅಸುಂಡಿವರೆಗೆ ಪ್ರತಿ ದಿನ ಅರ್ಧ ಗಂಟೆಗೊಮ್ಮೆ ಸಂಚರಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ